ಜಮೀನು ಅಕ್ರಮ ಮಾರಾಟ: ಮುರುಘಾ ಶರಣರಿಗೆ ಬಾಡಿ ವಾರೆಂಟ್

ಬೆಂಗಳೂರು: ಚಿತ್ರದುರ್ಗ ಮುರುಘಾ ಮಠಕ್ಕೆ ಸೇರಿದ 7 ಎಕರೆ 18 ಗುಂಟೆ ಜಮೀನನ್ನು ಅಕ್ರಮವಾಗಿ ಮಾರಾಟ ಮಾಡಿದ ಕ್ರಿಮಿನಲ್ ಆರೋಪಕ್ಕೆ ಸಂಬಂಧಿಸಿದಂತೆ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ನಗರದ 4ನೇ ಹೆಚ್ಚುವರಿ 4ನೇ ಹೆಚ್ಚುವರಿ ಮುಖ್ಯ ಮಹಾನಗರ ದಂಡಾಧಿಕಾರಿಯವರ (ಎಸಿಎಂಎಂ) ನ್ಯಾಯಾಲಯ ಬಾಡಿ ವಾರೆಂಟ್ ಜಾರಿ ಮಾಡಿದೆ.
ಕೆಂಗೇರಿ ಹೋಬಳಿಯ ಸೂಲಿಕೆರೆ ಗ್ರಾಮದಲ್ಲಿ ಮುರುಘಾ ಮಠಕ್ಕೆ ಸೇರಿದ್ದ ಜಮೀನನ್ನು ಅಕ್ರಮವಾಗಿ ಮಾರಾಟ ಮಾಡಿರುವ ಆರೋಪ ಶರಣರ ಮೇಲಿತ್ತು.ಶರಣರು ಆನಂದಕುಮಾರ್ ಎಂಬುವರಿಗೆ ಅಕ್ರಮವಾಗಿ ಮಾರಾಟ ಮಾಡಿದ್ದಾರೆ’ ಎಂದು ಆರೋಪಿಸಿ ತುಮಕೂರಿನ ಪಿ.ಎಸ್.ಪ್ರಕಾಶ್ ಬಿನ್ ಸಂಗಪ್ಪ ಎಂಬುವರು 2013ರಲ್ಲಿ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು. ಈ ಪ್ರಕರಣದಲ್ಲಿ ಶರಣರು ಮೊದಲ ಆರೋಪಿ ಮತ್ತು ಆನಂದಕುಮಾರ್ ಎರಡನೇ ಆರೋಪಿಯಾಗಿದ್ದಾರೆ.
ಚಿತ್ರದುರ್ಗ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಆರೋಪಿಯನ್ನು, ಚಿತ್ರದುರ್ಗ ಜಿಲ್ಲಾ ಸೂಪರಿಂಟೆಂಡೆಂಟ್ ಆಫ್ ಪೊಲೀಸ್, ಫೆಬ್ರುವರಿ 9ರಂದು ಕೋರ್ಟ್‌ಗೆ ಹಾಜರುಪಡಿಸುವಂತೆ ನ್ಯಾಯಾಧೀಶರು ಆದೇಶಿಸಿದ್ದಾರೆ.