ಜನವರಿ 27ಕ್ಕೆ ಮಂಡ್ಯದಲ್ಲಿ ಪ್ರಜಾಧ್ವನಿ ಯಾತ್ರೆ..!
ಮಂಡ್ಯ :ಮಂಡ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಗೆ ಟಕ್ಕರ್ ಕೊಡಲು ಕಾಂಗ್ರೆಸ್ ಪಡೆ ಸಿದ್ಧತೆ ನಡೆಸಿದೆ. ಜನವರಿ 27ರಂದು ಸಕ್ಕರೆ ನಾಡಿನಲ್ಲಿ ಪ್ರಜಾಧ್ವನಿ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಸೇರಿದಂತೆ ರಾಷ್ಟ್ರೀಯ ಮಟ್ಟದ ಮುಖಂಡರು ಸಭೆಯಲ್ಲಿ ಭಾಗವಹಿಸಲಿದ್ದಾರೆ. ಈ ಬಗ್ಗೆ ಮಾಜಿ ಸಚಿವ ಚೆಲುರಾಯಸ್ವಾಮಿ ನಗರದ ಕರ್ನಾಟಕ ಸಂಘದಲ್ಲಿ ಪೂರ್ವಭಾವಿ ಸಭೆ ನಡೆಸಿದರು. ಮುಂಬರುವ ಸಾರ್ವತ್ರಿಕ ಚುನಾವಣೆಯ ನಿಮಿತ್ತ ಈ ಕಾರ್ಯಕ್ರಮ ಜಿಲ್ಲೆಯಲ್ಲಿ ನಡೆಯಲಿದ್ದು ಸಭೆಯನ್ನು ಯಶಸ್ವಿಗೊಳಿಸಲು ಮುಖಂಡರಿಗೆ ಚೆಲುವರಾಯಸ್ವಾಮಿ ಮನವಿ ಮಾಡಿಕೊಂಡಿದ್ದಾರೆ. ಈ ಸಭೆಯಲ್ಲಿ ತಾಲೂಕು ಮಟ್ಟದ ಕಾಂಗ್ರೆಸ್ ಮುಖಂಡರು ಭಾಗವಹಿಸಿದರು.