ಚಿತ್ರನಟ ಧನುಷ್ ನಿಧನ

Actor Dhanush passed away

ಬೆಂಗಳೂರು: ಕನ್ನಡ ಚಿತ್ರರಂಗದ ಮತ್ತೋರ್ವ ಉದಯೋನ್ಮುಖ ತಾರೆ, ನಟ ಧನುಷ್‌(40) ಅನಾರೋಗ್ಯದಿಂದ ಬುಧವಾರ ರಾತ್ರಿ ನಿಧನರಾಗಿದ್ದಾರೆ.
ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್ ಅಭಿನಯದ ಲೀಡರ್, ಸಂಪಿಗೆ ಹಳ್ಳಿ, ಕೊಟ್ಲಲ್ಲಪ್ಪೋ ಕೈ, ಪ್ಯಾರ್ ಕಾ ಗೋಲು ಗುಂಬಜ್ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿರುವ ಧನುಷ್ ಅನಾರೋಗ್ಯದಿಂದ ಬೆಂಗಳೂರಿನಲ್ಲಿ ನಿನ್ನೆ ರಾತ್ರಿ ಕೊನೆಯುಸಿರೆಳೆದಿದ್ದಾರೆ.
ತಮ್ಮ ಮುಂದಿನ ಪ್ರಾಜೆಕ್ಟ್‌ನ ಚಿತ್ರೀಕರಣಕ್ಕಾಗಿ ಸ್ಥಳ ಹುಡುಕಲು ಇತ್ತೀಚೆಗೆ ಅವರು ಲಡಾಖ್‌ಗೆ ತೆರಳಿದ್ದರು. ಈ ವೇಳೆ ಅಲ್ಲಿನ ವಾತಾವರಣದಿಂದಾಗಿ ಧನುಷ್‌ ಆರೋಗ್ಯ ಸಮಸ್ಯೆ ಎದುರಿಸಿದ್ದರು. ಅವರನ್ನು ವಾರದ ಹಿಂದೆ ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬುಧವಾರ ರಾತ್ರಿ 10:45ಕ್ಕೆ ಅವರು ನಿಧನರಾಗಿದ್ದಾರೆ. ಗುರುವಾರ ರಾತ್ರಿ ಬಾಗಲಕೋಟೆ ಜಿಲ್ಲೆಯ ಕೋಡಿಹಾಳ ಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಿತು.
ಮೂಲತಃ ಬಾಗಲಕೋಟೆ ಜಿಲ್ಲೆಯ ಕೋಡಿಹಾಳ ಗ್ರಾಮದ ಶ್ರೀಮುತ್ತುರಾಜ್ ಸಿನಿಮಾಗಾಗಿ ತಮ್ಮ ಹೆಸರನ್ನು ಧನುಷ್ ಎಂದು ಬದಲಾಯಿಸಿಕೊಂಡಿದ್ದರು ಎನ್ನಲಾಗಿದೆ.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!