ಬೇಸಿಗೆ ಹಂಗಾಮಿನ ಬೆಳೆಗಳಿಗೆ ಶಾಂತಿಸಾಗರ ಅಚ್ಚುಕಟ್ಟು ಪ್ರದೇಶದಲ್ಲಿ ನೀರು

Water for summer season crops in the Shantisagara Achikattu region

ದಾವಣಗೆರೆ: ಶಾಂತಿಸಾಗರ ಅಚ್ಚುಕಟ್ಟು ಪ್ರದೇಶದಲ್ಲಿ 2022-23ನೇ ಸಾಲಿನ ಬೇಸಿಗೆ ಹಂಗಾಮಿನ ಬೆಳೆಗಳಿಗೆ ಜ.5 ರಿಂದ ಏ.30ರ ವರೆಗೆ ನೀರು ಹರಿಸಲು ತೀರ್ಮಾನಿಸಲಾಗಿದೆ.
ಸಿದ್ದನಾಲಾ-60 ಕ್ಯೂಸೆಕ್ ಮತ್ತು ಬಸವನಾಲಾ-45 ಕ್ಯೂಸೆಕ್‍ನಂತೆ ಅರೆನೀರಾವರಿ ಮತ್ತು ತೋಟದ ಬೆಳೆಗಳನ್ನು ಬೆಳೆಯಲು ನಿರಂತರವಾಗಿ ನೀರು ಹರಿಸಲಾಗುತ್ತದೆ. ನಿಯಮಿತ ಪ್ರಾಮಾಣಕ್ಕಿಂತ ಹೆಚ್ಚು ನೀರು ಬಳಸುವವರು ಮತ್ತು ಅನಧಿಕೃತ ನೀರಾವರಿ ಬೆಳೆಗಾರರಿಗೆ  ಕರ್ನಾಟಕ ನೀರಾವರಿ ಕಾಯ್ದೆಯ ಪ್ರಕಾರ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!