ಜ.28ರಂದು ಎಸ್ಸೆಸ್ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ ಪ್ರದಾನ

ದಾವಣಗೆರೆ :ಜಿಲ್ಲಾ ಸಮಾಚಾರ ಪತ್ರಿಕಾ ಬಳಗದಿಂದ ಇದೇ 28ರಂದು ಶಿವಾರ ಸಂಜೆ 5.30ಕ್ಕೆ ಶ್ರೀ ಸಿದ್ಧಗಂಗಾ ವಿದ್ಯಾಸಂಸ್ಥೆ ಆವರಣದಲ್ಲಿ 2022ರ ವರ್ಷದ ವ್ಯಕ್ತಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಶಾಸಕ ಶಾಮನೂರು ಶಿವಶಂಕರಪ್ಪ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಬಳಗದ ಸಂಚಾಲಕ ಸಾಲಿಗ್ರಾಮ ಗಣೇಶ್ ಶೆಣೈ ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಶ್ವವಾಣಿ ಪ್ರಧಾನ ಸಂಪಾದಕ ವಿಶ್ವೇಶ್ವರ ಭಟ್ ಸಮಾರಂಭ ಉದ್ಘಾಟಿಸಲಿದ್ದು, ವಿಆರ್‌ಎಲ್ ಸಮೂಹ ಸಂಸ್ಥೆಗಳ ಛೇರ್ಮನ್ ಡಾ.ವಿಜಯ ಸಂಕೇಶ್ವರ ಅಧ್ಯಕ್ಷತೆ ವಹಿಸಲಿದ್ದಾರೆ. ನಿವೃತ್ತ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಶಂಕರ್ ಬಿದರಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ವಾಣಿಜ್ಯೋದ್ಯಮಿ ಬಿ.ಸಿ. ಉಮಾಪತಿ, ಶ್ರೀ ಸಿದ್ಧಗಂಗಾ ವಿದ್ಯಾಸಂಸ್ಥೆ ಮುಖ್ಯಸ್ಥೆ ಡಾ.ಜಸ್ಟಿನ್ ಡಿಸೌಜ ವಿಶೇಷ ಆಹ್ವಾನಿತರಾಗಿ ಆಗಮಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
ಪತ್ರಿಕಾಗೋಷ್ಠಿಯಲ್ಲಿ ಬಳಗದ ಅಧ್ಯಕ್ಷೆ ಸತ್ಯಭಾಮ ಮಂಜುನಾಥ್, ಸಹ ಕಾರ್ಯದರ್ಶಿ ಭಾರತಿ ಉಪಸ್ಥಿತರಿದ್ದರು.