ಅಪೌಷ್ಠಿಕ ಮಕ್ಕಳ ಗುರುತಿಸಲು ಅಂಗನವಾಡಿ ಮಕ್ಕಳ ತಪಾಸಣೆ

Anganwadi child screening to identify malnourished children

ದಾವಣಗೆರೆ: ಮಕ್ಕಳಲ್ಲಿನ ಅಪೌಷ್ಠಿಕತೆ  ಗುರುತಿಸಿ ಸೂಕ್ತ ಚಿಕಿತ್ಸೆ ಮತ್ತು ಪೂರಕ ಪೌಷ್ಠಿಕ ಆಹಾರ ಒದಗಿಸುವ ನಿಟ್ಟಿನಲ್ಲಿ ಜಿಲ್ಲೆಯ ಅಂಗನವಾಡಿ ಕೇಂದ್ರಗಳಿಗೆ ಅಧಿಕಾರಿಗಳು ಭೇಟಿ ನೀಡಿ  ಜನವರಿ 23 ರಂದು ಪರಿಶೀಲನೆ ನಡೆಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು, ಜಿಲ್ಲಾ  ಹಾಗೂ ತಾಲ್ಲೂಕು ವೈದ್ಯಾಧಿಕಾರಿಗಳು ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳ ಅಪೌಷ್ಠಿಕತೆ ಮಟ್ಟವನ್ನು ಗುರುತಿಸುವ ನಿಟ್ಟಿನಲ್ಲಿ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ  ತಪಾಸಣಾ ಕಾರ್ಯಕ್ಕೆ ಚಾಲನೆ ನೀಡಿದರು.
ಜಿಲ್ಲೆಯ ಎಲ್ಲಾ ತಾಲ್ಲೂಕಿನ 47 ಅಂಗನವಾಡಿ ಕೇಂದ್ರಗಳನ್ನು ಶಿಶು ಯೋಜನಾಧಿಕಾರಿಗಳ ತಂಡÀ ಭೇಟಿ ನೀಡಿ 580 ಮಕ್ಕಳ ತೂಕ ಪರೀಕ್ಷಿಸಲಾಗಿದ್ದು, 553 ಸಾಮಾನ್ಯ ತೂಕದ ಮಕ್ಕಳು, 22 ಸಾಧಾರಣ ಕಡಿಮೆ ತೂಕದ ಮಕ್ಕಳು  ಮತ್ತು  5 ವಿಪರಿತ ಕಡಿಮೆ ತೂಕದ ಮಕ್ಕಳನ್ನು ಗುರುತಿಸಲಾಗಿದೆ. ಆಶಾ ಕಾರ್ಯಕರ್ತೆಯರು ಅಪೌಷ್ಠಿಕ ಮಕ್ಕಳ ಆರೋಗ್ಯ ಸುಧಾರಣೆಗೆ ಕ್ರಮವಹಿಸಬೇಕೆಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಮತ್ತು ಅಂಗನವಾಡಿ ಮೇಲ್ವಿಚಾರಕಿಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!