ಬೆಳಗಾವಿಯಲ್ಲಿ ರೈತ ಮೋರ್ಚಾ ರಾಷ್ಟ್ರೀಯ ಕಾರ್ಯಕಾರಿಣಿ- ಈರಣ್ಣ ಕಡಾಡಿ

Raitha Morcha National Executive in Belgaum- Eranna Kadadi

ಬೆಂಗಳೂರು: ನಾಳೆಯಿಂದ (ಜ. 29 ಮತ್ತು 30) ಎರಡು ದಿನಗಳ ಕಾಲ ಬೆಳಗಾವಿ ನಗರದ ಮಯೂರ ಪ್ರೆಸಿಡೆನ್ಸಿ ಕ್ಲಬ್ನಲ್ಲಿ ಬಿಜೆಪಿ ರೈತ ಮೋರ್ಚಾದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಯಲಿದೆ ಎಂದು ರಾಜ್ಯಸಭಾ ಸದಸ್ಯ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಅವರು ತಿಳಿಸಿದ್ದಾರೆ.
29ರಂದು ಮಧ್ಯಾಹ್ನ 12 ಗಂಟೆಗೆ ಈ ಸಭೆಯ ಉದ್ಘಾಟನೆಯನ್ನು ಬಿಜೆಪಿ ರಾಷ್ಟ್ರೀಯ ಸಂಸದೀಯ ಮಂಡಳಿ ಸದಸ್ಯರು, ಮಾಜಿ ಮುಖ್ಯಮಂತ್ರಿಗಳು ಹಾಗೂ ರೈತ ನಾಯಕರಾದ ಬಿ.ಎಸ್. ಯಡಿಯೂರಪ್ಪ ಅವರು ನೆರವೇರಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಾಷ್ಟ್ರೀಯ ರೈತ ಮೋರ್ಚಾದ ಅಧ್ಯಕ್ಷರಾದ ರಾಜಕುಮಾರ ಚಹರ್ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಪಕ್ಷದ ರಾಜ್ಯಾಧ್ಯಕ್ಷರಾದ ನಳಿನ್ಕುಮಾರ್ ಕಟೀಲ್, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಸಿ.ಟಿ.ರವಿ, ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ, ಸಚಿವರಾದ ಶಶಿಕಲಾ ಜೊಲ್ಲೆ, ರಾಜ್ಯದ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್, ಸಂಸದರಾದ ಅಣ್ಣಾಸಾಹೇಬ ಜೊಲ್ಲೆ, ಮಂಗಲಾ ಅಂಗಡಿ, ಬೆಳಗಾವಿ ಮಹಾನಗರ ಜಿಲ್ಲಾಧ್ಯಕ್ಷರು ಹಾಗೂ ಶಾಸಕರಾದ ಅನೀಲ ಬೆನಕೆ, ಬೆಳಗಾವಿ ಗ್ರಾಮೀಣ ಜಿಲ್ಲಾಧ್ಯಕ್ಷರಾದ ಸಂಜಯ ಪಾಟೀಲ, ಬೆಳಗಾವಿ ದಕ್ಷಿಣ ಶಾಸಕರಾದ ಅಭಯ ಪಾಟೀಲ ಪಾಲ್ಗೊಳ್ಳುವರು. ಅಲ್ಲದೆ ಜಿಲ್ಲೆಯ ಎಲ್ಲ ಶಾಸಕರು, ಸಂಸದರು, ವಿಧಾನ ಪರಿಷತ್ ಸದಸ್ಯರು ಹಾಗೂ ಮಾಜಿ ಶಾಸಕರು ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.
30 ರಂದು ಸೋಮವಾರ ಮಧ್ಯಾಹ್ನ 12.30 ಗಂಟೆಗೆ ರಾಷ್ಟ್ರೀಯ ಕಾರ್ಯಕಾರಿಣಿಯ ಸಭೆಯ ಸಮಾರೋಪ ಸಮಾರಂಭ ನಡೆಯಲಿದೆ. ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ ಜೀ ಅವರು ಸಮಾರೋಪ ಭಾಷಣ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ರಾಜ್ಯದ ಕೃಷಿ ಸಚಿವರಾದ ಬಿ. ಸಿ ಪಾಟೀಲ ಸೇರಿದಂತೆ ಜಿಲ್ಲೆಯ ಎಲ್ಲ ಸಚಿವರು, ಶಾಸಕರು, ಸಂಸದರು, ವಿಧಾನ ಪರಿಷತ್ ಸದಸ್ಯರು ಹಾಗೂ ಮಾಜಿ ಶಾಸಕರು ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.
(ಕರುಣಾಕರ ಖಾಸಲೆ)
ಮಾಧ್ಯಮ ಸಂಚಾಲಕರು
ಬಿಜೆಪಿ ಕರ್ನಾಟಕ

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!