ಫೆಬ್ರವರಿ 1ಕ್ಕೆ ಶ್ರೀ ಮಡಿವಾಳ ಮಾಚಿದೇವ ಜಯಂತಿ, ಶಕ್ತಿ ಪ್ರದರ್ಶನ

ದಾವಣಗೆರೆ: ದಾವಣಗೆರೆ ಜಿಲ್ಲಾ ಮಡಿವಾಳ ಮಾಚಿದೇವ ಸಂಘದ ವತಿಯಿಂದ ಫೆಬ್ರವರಿ 1ರ ಬುಧವಾರ ಬೆಳಿಗ್ಗೆ 11ಗಂಟೆಗೆ ಶ್ರೀ ಮಡಿವಾಳ ಮಾಚಿದೇವ ಜಯಂತಿಯ ಆಚರಣೆಯನ್ನು ವಿನೋಬನಗರ ಶ್ರೀ ಮಡಿವಾಳ ಮಾಚಿದೇವ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಕಾರ್ಯಾಧ್ಯಕ್ಷ ಹೆಚ್.ಜಿ,ಉಮೇಶ್ ಆವರಗೆರೆ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರ ಮಾಚಿದೇವ ಜಯಂತಿಯನ್ನು ಫೆ.1ರಂದು ಆಚರಿಸುವಂತೆ ಆದೇಶಿಸಿದ್ದು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಪಾಲಿಕೆ ಸಂಯುಕ್ತಾಶ್ರಯದಲ್ಲಿ ನಡೆಸಲಾಗುವುದು ಎಂದು ಹೇಳಿದರು.
ಜಯಂತಿಯಲ್ಲಿ ಮಡಿವಾಳ ಸಮಾಜದ ಶಕ್ತಿ ಪ್ರದರ್ಶನ ನಡೆಯಲಿದ್ದು, ನಮ್ಮ ಬಹುದಿನಗಳ ಬೇಡಿಕೆಯಾದ ಪರಿಶಿಷ್ಟ ಜಾತಿಯ ಸೇರ್ಪಡೆ ಹೋರಾಟಕ್ಕೆ ದನಿ ಎತ್ತಲಾಗುವುದು ಎಂದರು.
ಕಾರ್ಯಕ್ರಮವನ್ನು ಸಂಸದ ಜಿ.ಎಂ.ಸಿದ್ದೇಶ್ವರ್ ಉದ್ಘಾಟಿಸಲಿದ್ದು, ಶಾಸಕ ಎಸ್.ಎ.ರವೀಂದ್ರನಾಥ್ ಅಧ್ಯಕ್ಷತೆ ವಹಿಸಲಿದ್ದಾರೆ. ಪ್ರೊ.ತೇಜಪ್ಪ ಎನ್.ಮಡಿವಾಳರ ಉಪನ್ಯಾಸ ನೀಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಶಾಮನೂರು ಶಿವಶಂಕರಪ್ಪ, ಅಬ್ದುಲ್ ಜಬ್ಬಾರ್, ಜಯ್ಯಮ್ಮ ಗೋಪಿನಾಯ್ಕ, ಎ.ವೈ.ಪ್ರಕಾಶ್, ಗಾಯತ್ರಿ ಖಂಡೋಜಿರಾವ್, ಬಿ.ಜಿ. ಅಜಯ್ ಕುಮಾರ್ ಇನ್ನಿತರರು ಪಾಲ್ಗೊಳ್ಳಲಿದ್ದಾರೆ ಎಂದರು.

 
                         
                       
                       
                       
                       
                       
                       
                      