ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ, 20 ವರ್ಷ ಕಾರಾಗೃಹ ಶಿಕ್ಷೆ, 30 ಸಾವಿರ ದಂಡ, ಸಂತ್ರಸ್ಥೆಗೆ 5 ಲಕ್ಷ ಪರಿಹಾರ

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ
ದಾವಣಗೆರೆ: 16 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ಅತ್ಯಾಚಾರ ಎಸಗಿದ ಆರೋಪಿಗೆ ದಾವಣಗೆರೆಯ ವಿಶೇಷ ಪೋಸ್ಕೋ ನ್ಯಾಯಾಲಯ 20 ವರ್ಷಗಳ ಕಾರಾಗೃಹ ವಿಧಿಸಿ ಆದೇಶ ಹೊರಡಿಸಿದೆ.
ಹರಿಹರದ ನಾರಾಯಣ ಆಲಿಯಾನ್ ಶ್ಯಾಮ್ ಎಂಬಾತನೇ ಶಿಕ್ಷೆಗೆ ಒಳಗಾದ ಆರೋಪಿ. ದೇವಸ್ಥಾಸದ ರಸ್ತೆಯಲ್ಲಿ ವಾಸಿಸುತ್ತಿದ್ದ ಅಪ್ರಾಪ್ತ ಸಂತ್ರತೆಯನ್ನು ಶಾಲೆಗೆ ಹೋಗುವಾಗ ಆಕೆಯನ್ನು ಹಿಂಬಾಲಿಸುತ್ತಾ ನೋಡಿ ನಗುವುದು ಮಾಡಿತ್ತಿದ್ದ. ಇದಲ್ಲದೇ ನಿನ್ನನ್ನು ಪ್ರೀತಿಸುತ್ತೇನೆ ಎಂದು ಹೇಳಿ ಆಕೆಯನ್ನು ಪುಸಲಾಯಿಸಿ, ನಂಬಿಸಿ ಆಕೆಯ ಇಚ್ಛೆಯ ವಿರುದ್ಧವಾಇ ಅತ್ಯಾಚಾರ ಮಾಡಿದ ಆರೋಪದ ಮೇಲೆ ನ್ಯಾಯಾಲಯವು ಈ ಶಿಕ್ಷೆ ವಿಧಿಸಿದೆ.
ಕಳೆದ 2020ರ ಆಗಸ್ಟ್ 27 ರಂದು ಅಪ್ರಾಪ್ತ ಬಾಲಕಿಯನ್ನು ಬಲವಂತವಾಗಿ ಹರಿಹರದಿಂದ ಕರೆದುಕೊಂಡು ದಾವಣಗೆರೆಗೆ ಬಂದು ನಂತರ ದಾವಣಗೆರೆಯಿಂದ ಬೆಂಗಳೂರಿಗೆ ಕೆ ಎಸ್ ಆರ್ ಟಿ ಸಿ ಬಸ್ಸಿನಲ್ಲಿ ಅಪ್ರಾಪ್ತ ಬಾಲಕಿಯನ್ನು ಕರೆದುಕೊಂಡು ಹೋಗಿ ಅಲ್ಲಿನ ಆನೇಕಲ್ ಬಳಿ ಇರುವ ಆರೋಪಿತನ ಸಂಬAಧಿಕರ ಮನೆಯಲ್ಲಿ ನಾಲ್ಕು ದಿನ ಉಳಿದುಕೊಂಡಿದ್ದ. ಈ ವೇಳೆ ಬಾಲಕಿಯನ್ನು ಮದುವೆಯಾಗಿ ಮದುವೆ ಆಗುವುದಾಗಿ ಹೇಳಿ ನಂಬಿಸಿ ಹಲವಾರು ಬಾರಿ ಲೈಂಗಿಕ ಅತ್ಯಾಚಾರ ಮಾಡಿದ್ದ.
ಈ ಕುರಿತು ಹರಿಹರ ನಗರ ಠಾಣೆಯಲ್ಲಿ ಅಪ್ರಾಪ್ತ ಬಾಲಕಿಯ ತಾಯಿ ದೂರು ಸಲ್ಲಿಸಿದ್ದರು. ಪ್ರಕರಣದ ತನಿಖೆ ನಡೆಸಿ ನಂತರ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಲಾಗಿತ್ತು.
ಈ ಪ್ರಕರಣವು ನ್ಯಾಯಾಲಯದಲ್ಲಿ ಎರಡು ವರ್ಷಗಳ ಸುದೀರ್ಘ ವಿಚಾರಣೆ ನಡೆದು ಜನವರಿ 31ರಂದು ಮಂಗಳವಾರ ದಾವಣಗೆರೆ ಜಿಲ್ಲಾ ಮತ್ತು ಸತ್ರ ಮಕ್ಕಳ ಸ್ನೇಹಿ ನ್ಯಾಯಾಲಯದ ಎಸ್.ಶ್ರೀಪಾದ್ ಅವರು ಆರೋಪಿತನ ಮೇಲೆ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ 20 ವರ್ಷಗಳ ಕಠಿಣ ಶಿಕ್ಷೆ ಹಾಗೂ 30 ಸಾವಿರ ರೂ.ಗಳ ದಂಡ ವಿಧಿಸಿದೆ. ಹಾಗೂ ಒಂದು ವೇಳೆ ದಂಡ ತಪ್ಪಿದಲ್ಲಿ ಮತ್ತೆ 2 ವರ್ಷ ಕಾರಾಗೃಹ ಶಿಕ್ಷೆ ವಿಧಿಸಿದೆ.
ಇದರ ಜೊತೆಗೆ ಪರಿಹಾರದ ರೂಪದಲ್ಲಿ 5 ಲಕ್ಷ ರೂಗಳ ಹಣವನ್ನು ಸಂತ್ರಸ್ಥೆಗೆ ನೀಡುವಂತೆ ದಾವಣಗೆರೆ ಜಿಲ್ಲಾ ಉಚಿತ ಕಾನೂನು ಸೇವಾ ಪ್ರಾಧಿಕಾರಕ್ಕೆ ನೀಡುವಂತೆ ಆದೇಶಿಸಿದ್ದಾರೆ. ಸರ್ಕಾರದ ಪರವಾಗಿ ರೇಖಾ ಎಸ್. ಕೋಟೆಗೌಡರ್ ವಿಶೇಷ ಸರ್ಕಾರಿ ಅಭಿಯೋಜಕರಾಗಿ ನ್ಯಾಯಾಲಯದಲ್ಲಿ ವಾದ ಮಂಡನೆ ಮಾಡಿದ್ದರು.