ವಿಜ್ಞಾನ ಕೇಂದ್ರದ ಉದ್ಘಾಟನೆಗೆ ಕೂಡಿ ಬಂತು ಕಾಲ.! ಡಿಸಿ ಗುಟರಿಗೆ ದಂಗಾದ ನಿರ್ಮಿತಿ ಕೇಂದ್ರದ ಅಧಿಕಾರಿಗಳು.!

The time has come for the inauguration of the science center. The officials of the construction center rioted for DC Gutari.!

ವಿಜ್ಞಾನ ಕೇಂದ್ರ

ದಾವಣಗೆರೆ: ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ ಬೆಂಗಳೂರು ಮತ್ತು ಉಪ ಪ್ರಾದೇಶಿಕ ವಿಜ್ಞಾನ ಕೆಂದ್ರದ ವತಿಯಿಂದ ಫೆ. 4 ರಂದು ಬೆಳಿಗ್ಗೆ 11 ಗಂಟೆಗೆ ಆನಗೋಡು ಹೋಬಳಿಯ  ಹುಳುಪಿನಕಟ್ಟೆಯಲ್ಲಿ ವಿಜ್ಞಾನ ಕೇಂದ್ರದ ಉದ್ಘಾಟನಾ ಸಮಾರಂಭವನ್ನು ಏರ್ಪಡಿಸಲಾಗಿದೆ.

ನಗರಾಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ. ಬಸವರಾಜ (ಭೈರತಿ) ಕಾರ್ಯಕ್ರಮವನ್ನು ಉದ್ಘಾಟಿಸುವರು. ಮಾಯಕೊಂಡ ವಿಧಾನಸಭಾ ಶಾಸಕ ಹಾಗೂ ಡಾ.ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ಅಧ್ಯಕ್ಷರಾದ ಪ್ರೊ.ಎನ್.ಲಿಂಗಣ್ಣ ಅಧ್ಯಕ್ಷತೆ ವಹಿಸುವರು.
ಉನ್ನತ ಶಿಕ್ಷಣ, ವಿಜ್ಞಾನ ಮತ್ತು ತಂತ್ರಜ್ಞಾನ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿದ್ಯುನ್ಮಾನ, ಕೌಶಲ್ಯ ಅಭಿವೃದ್ಧಿ, ಉದ್ಯಮ ಶೀಲತೆ ಹಾಗೂ ಜೀವನೋಪಾಯ ಸಚಿವರಾದ ಡಾ. ಸಿ.ಎನ್. ಅಶ್ವಥ್‍ನಾರಾಯಣ ಘನಉಪಸ್ಥಿತರಾಗಿರುವರು.
ಸಂಸದರಾದ ಜಿ.ಎಂ. ಸಿದ್ದೇಶ್ವರ, ಚನ್ನಗಿರಿ ವಿಧಾನಸಭಾ ಶಾಸಕ ಹಾಗೂ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ ಅಧ್ಯಕ್ಷರು ಮತ್ತು ನಿರ್ದೇಶಕರಾದ ಕೆ.ಮಾಡಾಳ್ ವಿರೂಪಾಕ್ಷಪ್ಪ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಹೊನ್ನಾಳಿ ಶಾಸಕರಾದ ಎಂ.ಪಿ.ರೇಣುಕಾಚಾರ್ಯ, ಜಗಳೂರು ವಿಧಾನಸಭಾ ಶಾಸಕ ಹಾಗೂ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಎಸ್.ವಿ.ರಾಮಚಂದ್ರ, ಸರ್ಕಾರದ ಮುಖ್ಯ ಸಚೇತಕರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಡಾ.ವೈ.ಎ.ನಾರಾಯಣಸ್ವಾಮಿ ಗೌರವಾನ್ವಿತ ಉಪಸ್ಥಿತರಾಗಿ ಭಾಗವಹಿಸುವರು.


ಮುಖ್ಯ ಅತಿಥಿಗಳಾಗಿ ಶಾಸಕರುಗಳಾದ ಶಾಮನೂರು ಶಿವಶಂಕರಪ್ಪ, ಎಸ್.ಎ ರವೀಂದ್ರನಾಥ್, ವಿಧಾನ ಪರಿಷತ್ ಶಾಸಕರಾದ ಎಸ್.ರಾಮಪ್ಪ, ಕೆ.ಪಿ.ನಂಜುಂಡಿ ವಿಶ್ವಕರ್ಮ, ರವಿಕುಮಾರ್.ಎನ್, ತೇಜಸ್ವಿನಿಗೌಡ ಆಯನೂರು ಮಂಜುನಾಥ್, ಎಸ್.ಎಲ್.ಭೋಜೇಗೌಡ, ಆರ್.ಶಂಕರ್,  ಚಿದಾನಂದ ಎಂ.ಗೌಡ, ಡಿ.ಎಸ್ ಅರುಣ್, ಕೆ.ಎಸ್ ನವೀನ್, ಅಬ್ದುಲ್ ಜಬ್ಬಾರ್, ಕೇಂದ್ರ ಪರಿಹಾರ ಸಮಿತಿಯ ಅಧ್ಯಕ್ಷರು ಹಾಗೂ ಸದಸ್ಯರು ಬಸವರಾಜ ನಾಯ್ಕ ಆನಗೋಡು ಗ್ರಾ.ಪಂ ಅಧ್ಯಕ್ಷರಾದ ಮಾದಪ್ಪ.ಎಂ, ಸರ್ಕಾರದ ಮುಖ್ಯ ಕಾರ್ಯದರ್ಶಿ ರಮಣರೆಡ್ಡಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಸಹಕಾರ ಇಲಾಖೆಯ ಅಪರ ಕಾರ್ಯದರ್ಶಿ ಎಸ್.ಆರ್ ಉಮಾಶಂಕರ್, ಕೆಸ್ಟೆಪ್ಸ್ ವ್ಯವಸ್ಥಾಪಕ ನಿರ್ದೇಶಕ ಎ.ಬಿ ಬಸವರಾಜ, ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿ, ಜಿ.ಪಂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ, ಶಾಲಾ ಶಿಕ್ಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ಜಿ.ಆರ್ ತಿಪ್ಪೇಶಪ್ಪ ಪಾಲ್ಗೊಳ್ಳುವರೆಂದು ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!