ದಾವಣಗೆರೆ

Siddu; ಸಿದ್ದು ದೇಶದ ನಂಬರ್ ಒನ್ ಪ್ರಾಮಾಣಿಕ ಮುತ್ಸದ್ದಿ: ಸಚಿವ ಬೈರತಿ ಸುರೇಶ್ ಬಣ್ಣನೆ

Share
Siddu is the country's number one honest prophet: Minister Bairathi Suresh
Share

ಹರಿಹರ: (Siddu) ದೇಶದ ಅತ್ಯಂತ ಪ್ರಾಮಾಣಿಕ ರಾಜಕಾರಣಿಗಳ ಸಾಲಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮೊದಲ ಸ್ಥಾನದಲ್ಲಿದ್ದಾರೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ಬಣ್ಣಿಸಿದ್ದಾರೆ.

ಹರಿಹರದ ಬೆಳ್ಳೂಡಿ ಗ್ರಾಮದ ಶ್ರೀ ಕಾಗಿನೆಲೆ ಕನಕ ಗುರುಪೀಠದ ಶಾಖಾಮಠದಲ್ಲಿ ಶುಕ್ರವಾರ ನಡೆದ ಶಾಖಾಮಠದ ದಶಮಾನೋತ್ಸವ, ಜಗದ್ಗುರು ಶ್ರೀ ರೇವಣಸಿದ್ದೇಶ್ವರ ಜಯಂತಿ ಹಾಗೂ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ನೂತನ ವಧು-ವರರಿಗೆ ಶುಭ ಕೋರಿದ ನಂತರ ಅವರು ಮಾತನಾಡಿದರು.

ರಾಜ್ಯದಲ್ಲಿ ಕುರುಬ ಸಮಾಜ ಹಿಂದಿನಂತಿಲ್ಲ. ಕನಕ ಗುರುಪೀಠದ ಸ್ವಾಮೀಜಿಗಳು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯನವರಂತಹ ಧೀಮಂತ ನಾಯಕರ ಮಾರ್ಗದರ್ಶನದಿಂದಾಗಿ ಇಂದು ಸುಶಿಕ್ಷಿತ ಸಮಾಜವಾಗಿ ಹೊರಹೊಮ್ಮಿದ್ದು, ಎಲ್ಲಾ ಕ್ಷೇತ್ರಗಳಲ್ಲೂ ತನ್ನದೇ ಆದ ಛಾಪು ಮೂಡಿಸುತ್ತಿದೆ ಎಂದರು.

ಬೆಂಗಳೂರಿನ ಶ್ರೀನಿವಾಸನಗರದಲ್ಲಿ ನಾವೆಲ್ಲಾ ನಾಯಕರು ಸೇರಿ ಸಮುದಾಯದ ಹೆಣ್ಣು ಮಕ್ಕಳಿಗಾಗಿ ಸುಸಜ್ಜಿತ ಹಾಸ್ಟೆಲ್ ಅನ್ನು ನಿರ್ಮಾಣ ಮಾಡಿದ್ದೇವೆ. ಇದಲ್ಲದೇ, ಶತಮಾನದ ಇತಿಹಾಸವಿರುವ ಗಾಂಧಿನಗರದ ಕರ್ನಾಟಕ ಕುರುಬರ ಸಂಘದ ಕಟ್ಟಡದ ಪುನರ್ ನಿರ್ಮಾಣ ಮಾಡಲಾಗುತ್ತಿದೆ. ಈ ಹೊಸ ಕಟ್ಟಡವನ್ನು ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿರುವಾಗಲೇ ಅವರಿಂದಲೇ ಉದ್ಘಾಟನೆ ಮಾಡಿಸಲಾಗುತ್ತದೆ ಎಂದು ಸಚಿವರು ತಿಳಿಸಿದರು.

7 ಕೋಟಿ ಜನರ ಧ್ವನಿ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಡೀ ಸಮಸ್ತ ಕನ್ನಡನಾಡಿನ 7 ಕೋಟಿ ಜನರ ಧ್ವನಿಯಾಗಿ ಕೆಲಸ ಮಾಡುತ್ತಿದ್ದಾರೆ. ಕಾಯಕಯೋಗಿ ಶ್ರೀ ಬಸವಣ್ಣನವರ ಸಮಸಮಾಜ ನಿರ್ಮಾಣದ ಪರಿಕಲ್ಪನೆಯ ತಳಹದಿ, ಡಾ.ಬಿ.ಆರ್.ಅಂಬೇಡ್ಕರ್ ಅವರು ಕೊಟ್ಟಿರುವ ಸಂವಿಧಾನದ ಮಾರ್ಗದರ್ಶನದಲ್ಲಿಯೇ ಅವರು ನಮ್ಮ ರಾಜ್ಯವನ್ನು ಅಭಿವೃದ್ಧಿಪಥದತ್ತ ಕೊಂಡೊಯ್ಯುತ್ತಿದ್ದಾರೆ ಎಂದು ಅವರು ಹೇಳಿದರು.

ನಿಷ್ಕಳಂಕ ರಾಜಕಾರಣಿ
ರಾಜ್ಯಕ್ಕೆ 17 ಬಜೆಟ್ ಗಳನ್ನು ಕೊಟ್ಟಿರುವ ಸಿದ್ದರಾಮಯ್ಯನವರು 2 ಬಾರಿ ಪ್ರತಿಪಕ್ಷದ ನಾಯಕ, ಎರಡು ಬಾರಿ ಮುಖ್ಯಮಂತ್ರಿಯಾಗಿ ಕಳೆದ 45 ವರ್ಷದಿಂದ ರಾಜ್ಯದ ಜನತೆಗಾಗಿ ತಮ್ಮ ಸೇವೆಯನ್ನು ಮುಡಿಪಾಗಿಟ್ಟಿದ್ದಾರೆ.

ನಮ್ಮ ಕಾಂಗ್ರೆಸ್ ಸರ್ಕಾರ ಯಾವುದೇ ಜಾತಿ ಜನಾಂಗ ಎನ್ನದೇ ಪ್ರತಿಯೊಂದು ಮಠಮಾನ್ಯಗಳಿಗೆ ನೂರಾರು ಕೋಟಿ ರೂಪಾಯಿಗಳ ಅನುದಾನವನ್ನು ನೀಡಿದೆ. ಬೆಂಗಳೂರಿನ ಯಲಹಂಕದಲ್ಲಿ ಸಾವಿರಾರು ಕೋಟಿ ರೂಪಾಯಿ ಬೆಲೆ ಬಾಳುವ 50 ಎಕರೆ ಜಮೀನನ್ನು ಅಹಿಂದ ವರ್ಗಗಳ ಮಠಗಳಿಗೆ ನೀಡಲು ಮಹತ್ವದ ನಿರ್ಧಾರ ಮಾಡಿದೆ ಎಂದು ತಿಳಿಸಿದರು.

ಮಠಗಳಿಂದ ಸಮಾಜಮುಖಿ ಕಾರ್ಯ
ನಿರಂಜನಾನಂದ ಶ್ರೀಗಳು ಮತ್ತು ಈಶ್ವರಾನಂದ ಶ್ರೀಗಳು ಸೇರಿದಂತೆ ಕುರುಬ ಸಮುದಾಯದ ಸ್ವಾಮೀಜಿಗಳು ರಾಜ್ಯಾದ್ಯಂತ ಸಂಚರಿಸಿ ಸಮುದಾಯವನ್ನು ಒಟ್ಟುಗೂಡಿಸುವುದರ ಜೊತೆಗೆ ಅರಿವು ಮೂಡಿಸುವ ಕೆಲಸ ಮಾಡುತ್ತಿರುವುದು ಸ್ತುತ್ಯಾರ್ಹವಾಗಿದೆ ಎಂದು ಬೈರತಿ ಸುರೇಶ್ ಮೆಚ್ಚುಗೆ ವ್ಯಕ್ತಪಡಿಸಿದರು.

ವಧುವರರಿಗೆ ಶುಭ ಕೋರಿಕೆ
ಇದೇ ವೇಳೆ ಸಾಮೂಹಿಕ ವಿವಾಹದಲ್ಲಿ ಗೃಹಸ್ಥಾಶ್ರಮಕ್ಕೆ ಕಾಲಿರಿಸಿದ 49 ಜೋಡಿಗಳಿಗೆ ಬೈರತಿ ಸುರೇಶ್ ಶುಭ ಕೋರಿದರು.

Share

Leave a comment

Leave a Reply

Your email address will not be published. Required fields are marked *

Don't Miss

ದಾವಣಗೆರೆರಾಜಕೀಯರಾಜ್ಯ / ಕರ್ನಾಟಕ

BSY: ಚಿತ್ರದುರ್ಗದಲ್ಲಿ ನಾಳೆ ‘ಬಿಎಸ್ ವೈ ಅಭಿಮಾನೋತ್ಸವ’ದ ಅಬ್ಬರ: ಅಮಿತ್ ಶಾ ಭಾಗಿ, ದಾವಣಗೆರೆಯಿಂದ ಹೊರಟ ಯಡಿಯೂರಪ್ಪ ಕುಟುಂಬ!

ದಾವಣಗೆರೆ/ಚಿತ್ರದುರ್ಗ: (BSY) ಕರ್ನಾಟಕ ರಾಜಕಾರಣದ ಧ್ರುವತಾರೆ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಸಾರ್ವಜನಿಕ ಜೀವನದ 50 ವರ್ಷಗಳ ಸುವರ್ಣ ಸಂಭ್ರಮದ "ಅಭಿಮಾನೋತ್ಸವ"ಕ್ಕೆ ಕೋಟೆ ನಾಡು ಚಿತ್ರದುರ್ಗ ಸಜ್ಜಾಗಿದೆ. ಮೇ 9ರ...

ಅಪರಾಧದಾವಣಗೆರೆ

Lokayukta: ದಾವಣಗೆರೆ ಪಾಲಿಕೆ ವಲಯ-1ರ ಮೇಲೆ ಲೋಕಾಯುಕ್ತ ದಾಳಿ: ಫೋನ್-ಪೇ ಮೂಲಕ ಲಂಚದ ಆರೋಪ, ದಾಖಲೆಗಳ ಪರಿಶೀಲನೆ

ದಾವಣಗೆರೆ: (Lokayukta) ಮಹಾನಗರ ಪಾಲಿಕೆ ವಲಯ-1ರ ಕಚೇರಿಯಲ್ಲಿ ನಡೆಯುತ್ತಿದ್ದ ಎನ್ನಲಾದ ಸಾಲು ಸಾಲು ಅಕ್ರಮಗಳ ಕುರಿತು ಬಂದ ದೂರುಗಳ ಹಿನ್ನೆಲೆಯಲ್ಲಿ, ಇಂದು ಮುಂಜಾನೆಯಿಂದಲೇ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ತಪಾಸಣೆ...

Related Articles
ದಾವಣಗೆರೆರಾಜ್ಯ / ಕರ್ನಾಟಕ

Lokayukta SP: ದಾವಣಗೆರೆ ನೂತನ ಲೋಕಾಯುಕ್ತ ಎಸ್‌ಪಿಯಾಗಿ ಆ್ಯಂಟನಿ ಜಾನ್ ಅಧಿಕಾರ ಸ್ವೀಕಾರ: ದೂರು ಸಲ್ಲಿಕೆಗೆ ಕರೆ

ದಾವಣಗೆರೆ: (Lokayukta SP) ದಾವಣಗೆರೆ ಜಿಲ್ಲೆಯ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾಗಿ (ಎಸ್‌ಪಿ) ಆ್ಯಂಟನಿ ಜಾನ್ ಜೆ.ಕೆ...

ದಾವಣಗೆರೆಅಪರಾಧರಾಜ್ಯ / ಕರ್ನಾಟಕ

Sand: ಹರಿಹರ ತುಂಗಭದ್ರಾ ನದಿ ಪಾತ್ರದಲ್ಲಿ ಭಾರಿ ಅಕ್ರಮ ಮರಳು ದಂಧೆ ಶಂಕೆ! ನಿಷೇಧಿತ ಯಂತ್ರಗಳು, ತೆಪ್ಪ ಬಳಸಿ ಮರಳು ಲೂಟಿ!

ಹರಿಹರ (Sand):ದಾವಣಗೆರೆ ಜಿಲ್ಲೆಯ ಹರಿಹರ ನಗರ ವ್ಯಾಪ್ತಿಯ ತುಂಗಭದ್ರಾ ನದಿಯಲ್ಲಿ ಕಾನೂನು ಬಾಹಿರವಾಗಿ ಮರಳು ಗಣಿಗಾರಿಕೆ...

ದಾವಣಗೆರೆ

DJ: ಗಣೇಶೋತ್ಸವ ಮೆರವಣಿಗೆಯಲ್ಲಿ ಡಿ.ಜೆ ಸಿಸ್ಟಂ ಬಳಕೆಗೆ ಕಟ್ಟುನಿಟ್ಟಿನ ನಿಯಮ: ಜಿಲ್ಲಾಧಿಕಾರಿ ಆದೇಶ

ದಾವಣಗೆರೆ: (DJ) ದಾವಣಗೆರೆ ಜಿಲ್ಲೆಯಾದ್ಯಂತ ದಿನಾಂಕ 14-09-2026 ರಿಂದ ಆರಂಭವಾಗುವ ಗಣೇಶ ಹಬ್ಬದ ಆಚರಣೆ ಹಾಗೂ...