ದಾವಣಗೆರೆ

DC: ಜಿಲ್ಲೆಯ ಗ್ರಾಮೀಣ ಪ್ರದೇಶಗಳಿಗೆ ಕುಡಿಯುವ ನೀರಿನ ಸಮರ್ಪಕ ಸರಬರಾಜಿಗೆ ಕ್ರಮ : ಜಿ.ಎಂ.ಗಂಗಾಧರಸ್ವಾಮಿ

Share
Share

ದಾವಣಗೆರೆ: (DC) ಜಿಲ್ಲೆಯಲ್ಲಿ ಮುಂಗಾರು ನಿರೀಕ್ಷಿತ ಅವಧಿಯೊಳಗೆ ಆರಂಭಗೊಳ್ಳದಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಕೆರೆ, ಕಟ್ಟೆ-ಕಾಲುವೆಗಳಲ್ಲಿ ಸಂಗ್ರಹವಾಗಿದ್ದ ನೀರು ದಿನೇದಿನೇ ಬತ್ತಿ ಹೋಗುತ್ತಿದೆ ಮಾತ್ರವಲ್ಲ ಅಂತರ್ಜಲದ ಮಟ್ಟ ಕಡಿಮೆಯಾಗಿದ್ದು, ಗ್ರಾಮೀಣ ಜನ-ಜಾನುವಾರುಗಳಿಗೆ ಉಂಟಾಗಬಹುದಾದ ಸಂಭಾವ್ಯ ಕುಡಿಯುವ ನೀರಿನ ಸಮಸ್ಯೆಯನ್ನು ಸಕಾಲದಲ್ಲಿ ಸುಗಮಗೊಳಿಸಲು ಜಿಲ್ಲೆಯ ಎಲ್ಲಾ ತಹಶೀಲ್ದಾರರು ಹಾಗೂ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಸಕಾಲಿಕವಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಅವರು ಸೂಚಿಸಿದರು.
ಅವರು ಇಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗವು ತಮ್ಮ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಟಾಸ್ಕ್ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಜಿಲ್ಲೆಯ ಭಾನುವಳ್ಳಿ ಸುತ್ತಮುತ್ತಲ 20ಗ್ರಾಮಗಳಿಗೆ ಕುಡಿಯುವ ನೀರಿನ ಸರಬರಾಜಿನಲ್ಲಿ ತೀವ್ರ ತರಹದ ಸಮಸ್ಯೆ ಉಂಟಾಗಿದ್ದು, ಅದರ ತುರ್ತು ನಿರ್ವಹಣೆಗಾಗಿ ಅಗತ್ಯವಿರುವ 35-40ಲೋಡ್ ಪ್ರಮಾಣದ ಮರಳನ್ನು ನಂದಿಗಾವಿ ಮರಳು ಬ್ಲಾಕ್ನಿಂದ ತೆಗೆದುಕೊಳ್ಳಲು ಜಿಲ್ಲಾಡಳಿತ ಅನುಮೋದನೆ ನೀಡಿದ್ದು, ಈ ಕೂಡಲೆ ಗ್ರಾಮೀಣ ಜನರಿಗೆ ಕುಡಿಯುವ ನೀರನ್ನು ಒದಗಿಸುವ ಮಹತ್ವದ ಕಾರ್ಯವನ್ನು ತಕ್ಷಣದಿಂದಲೇ ಆರಂಭಿಸುವಂತೆ ಅವರು ಜಿಲ್ಲಾ ಭೂವಿಜ್ಞಾನ ಮತ್ತು ಗಣಿಗಾರಿಕೆ ಇಲಾಖೆಯ ಹಿರಿಯ ವಿಜ್ಞಾನಿ ಶ್ರೀಮತಿ ರಷ್ಮಿ ಅವರಿಗೆ ಸೂಚಿಸಿದ ಅವರು, ಘಟನೋತ್ತರ ಅನುಮೋದನೆಗಾಗಿ ಸರ್ಕಾರಕ್ಕೆ ಸಲ್ಲಿಸುವಂತೆ ಅವರು ತಿಳಿಸಿದರು.
ತಗ್ಗಿ ಗ್ರಾಮದ ಭದ್ರಾ ಚಾನಲ್ನಲ್ಲಿ ರೈತರು ಪಂಪ್ಸೆಟ್ ಮೂಲಕ ನೀರನ್ನು ಸೆಳೆದುಕೊಳ್ಳುತ್ತಿದ್ದು, ಕುಡಿಯುವ ನೀರಿಗೆ ಹಾಹಾಕಾರ ಕಂಡುಬರುತ್ತಿದೆ. ಈ ಬಗ್ಗೆ ಸಾರ್ವಜನಿಕ ವಲಯದಿಂದ ಕಚೇರಿಗೆ ಸಾಕಷ್ಟು ದೂರುಗಳೂ ಸಹ ಬರುತ್ತಿವೆ. ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಬೆಸ್ಕಾಂ ಮತ್ತು ಪೊಲೀಸ್ ಇಲಾಖೆಯ ಸಹಕಾರ ಪಡೆದು, ಅಕ್ರಮವಾಗಿ ನೀರೆತ್ತುತ್ತಿರುವವರ ವಿರುದ್ಧ ದೂರು ದಾಖಲಿಸುವಂತೆ ಹಾಗೂ ತ್ವರಿತವಾಗಿ ಕುಡಿಯುವ ನೀರನ್ನು ಪೂರೈಸಲು ಕ್ರಮ ಕೈಗೊಳ್ಳುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದರು.
ನೀರಿನ ಸರಬರಾಜು ಕಡಿಮೆ ಇರುವ ಸ್ಥಳಗಳಲ್ಲಿ ಸಾರ್ವಜನಿಕರು ನೀರನ್ನು ಮಿತವಾಗಿ ಹಾಗೂ ಅಗತ್ಯಕ್ಕೆ ತಕ್ಕಂತೆ ಬಳಸಬೇಕು. ನೀರನ್ನು ಸದ್ಬಳಕೆ ಮಾಡಿಕೊಳ್ಳಬೇಕು ಅಂತೆಯೇ ಜಿಲ್ಲಾಡಳಿತದೊಂದಿಗೆ ಸಹಕರಿಸುವಂತೆ ಮನವಿ ಮಾಡಿದ ಅವರು, ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯ ಅಧಿಕಾರಿಗಳು ನೀರಿನ ಸಮಸ್ಯೆಯ ಇತ್ಯರ್ಥಕ್ಕಾಗಿ ತಕ್ಷಣದ ಕ್ರಮಗಳನ್ನು ಕೈಗೊಳ್ಳಬೇಕು. ಇಂತಹ ಸಂದಿಗ್ಧ ಸಂದರ್ಭದಲ್ಲಿ ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ವರ್ತನೆಯನ್ನು ಸಹಿಸಿಕೊಳ್ಳಲಾಗುವುದಿಲ್ಲ ಎಂದವರು ಎಚ್ಚರಿಸಿದರು. ಎಲ್ಲಾ ತಾಲೂಕುಗಳ ತಹಶೀಲ್ದಾರರು ಮತ್ತು ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರತಿ ವಾರಕ್ಕೊಮ್ಮೆ ತಮ್ಮ ಕಾರ್ಯಕ್ಷೇತ್ರದಲ್ಲಿನ ಕುಡಿಯುವ ನೀರಿನ ಸಮಸ್ಯೆಯ ಕುರಿತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮಾಹಿತಿ ನೀಡುವಂತೆ ಸೂಚಿಸಿದರು.
ಕುಡಿಯುವ ನೀರಿನ ಸಮಸ್ಯೆ ಇರುವೆಡೆಗಳಲ್ಲಿ ಖಾಸಗಿ ಬೋರ್ವೆಲ್ಗಳ ಮಾಲೀಕರೊಂದಿಗೆ ಒಡಂಬಡಿಕೆ ಮಾಡಿಕೊಂಡು ನೀರು ಒದಗಿಸಲು ಕ್ರಮ ಕೈಗೊಳ್ಳಬೇಕು. ಅಧಿಕಾರಿಗಳು ಸರಿಯಾದ ಕ್ರಮದಲ್ಲಿ ನೀರಿನ ಬಳಕೆಗೆ ಗಮನಹರಿಸಬೇಕು. ನೀರಿನ ಒಟ್ಟು ಬೇಡಿಕೆ ಮತ್ತು ನಿರ್ವಹಣೆಯ ಬಗ್ಗೆ ಗಮನಹರಿಸುವಂತೆ ಅವರು ಸಲಹೆ ನೀಡಿದರು.
ಕಲುಷಿತ ನೀರು ನಾಲೆ, ಕೆರೆ ಕಟ್ಟೆ-ಕಾಲುವೆಗಳಿಗೆ ಸೇರದಂತೆ ಹಾಗೂ ಗ್ರಾಮೀಣ ತ್ಯಾಜ್ಯ, ಸತ್ತ ಪ್ರಾಣಿಗಳು ಜಲಮೂಲಗಳಿಗೆ ಸೇರ್ಪಡೆಯಾಗದಂತೆ ವಿಶೇಷ ಗಮಹರಿಸಬೇಕು. ಹಾಗೆಯೇ ಕಾಲಕಾಲಕ್ಕೆ ನೀರಿನ ಗುಣಮಟ್ಟವನ್ನು ಪರೀಕ್ಷಿಸುವಂತೆ ಸಲಹೆ ನೀಡಿದರು.
ಜಿಲ್ಲೆಯ ಗ್ರಾಮೀಣ ಪ್ರದೇಶಗಳಿಗೆ ಕುಡಿಯುವ ನೀರಿನ ಸರಬರಾಜಿನಲ್ಲಿ ಯಾವುದೇ ಸಮಸ್ಯೆಗಳು ಎದುರಾಗದಂತೆ ಹಾಗೂ ಮುಂದಿನ ಒಂದು ವಾರದಲ್ಲಿ ಎದುರಾಗಬಹುದಾದ ಸಂಭಾವ್ಯ ಗ್ರಾಮಗಳನ್ನು ಈಗಲೇ ಗುರುತಿಸಿ, ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸಲಹೆ ನೀಡಿದ ಅವರು, ನೀರಿನ ಮೂಲಗಳನ್ನು ಗುರುತಿಸಿ, ಸಮಸ್ಯೆಯ ಸಕಾಲಿಕ ನಿರ್ವಹಣೆಗೆ ಸದಾ ಸನ್ನದ್ಧರಾಗಿರುವಂತೆ ಅವರು ಸೂಚಿಸಿದರು.

• ಪ್ರಸ್ತುತ ಸಂದರ್ಭದಲ್ಲಿ ಜಿಲ್ಲೆಯ 13ಗ್ರಾಮಗಳಿಗೆ ಬೋರ್ವೆಲ್ಗಳ ಮೂಲಕ, 02ಗ್ರಾಮಗಳಿಗೆ ಟ್ಯಾಂಕರ್ಗಳ ಮೂಲಕ ನೀರನ್ನು ಒದಗಿಸಲಾಗುತ್ತಿದೆ. ಡಿ.ಸಿ., ದಾವಣಗೆರೆ.

ಜನಗಣತಿ ಕಾರ್ಯಕ್ಕೆ ಸಹಕರಿಸಲು ಮನವಿ : ಜಿಲ್ಲೆಯಲ್ಲಿ ಈಗಾಗಲೇ ಆರಂಭಗೊಂಡಿರುವ ಜನಗಣತಿ ಕಾರ್ಯಕ್ಕೆ ನಿಯೋಜಿತ ಅಧಿಕಾರಿ-ಸಿಬ್ಬಂಧಿಗಳು ಮನೆಮನೆಗೆ ತೆರಳಿ ಸಮೀಕ್ಷೆ ನಡೆಸುತ್ತಿದ್ದಾರೆ. ಸಾರ್ವಜನಿಕರು ತಮ್ಮ ಮನೆಗೆ ಸಮೀಕ್ಷೆಗಾಗಿ ಬರುವ ಅಧಿಕಾರಿ-ಸಿಬ್ಬಂಧಿಗಳಿಗೆ ಅಗತ್ಯ ಮಾಹಿತಿ ನೀಡಿ ಸೌಜನ್ಯಯುತವಾಗಿ ನಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ಗಂಗಾಧರ ಸ್ವಾಮಿ ಅವರು ಮನವಿ ಮಾಡಿದ್ದಾರೆ.
– ಜಿ.ಎಂ.ಗಂಗಾಧರಸ್ವಾಮಿ, ಜಿಲ್ಲಾಧಿಕಾರಿಗಳು, ದಾವಣಗೆರೆ.

ಅಡಿಕೆ ಬೆಳೆಗಾರರಿಗೆ ಮನವಿ : ಪ್ರಸಕ್ತ ಮುಂಗಾರಿನಲ್ಲಿ ನಿರೀಕ್ಷಿತ ಮಳೆ ಬಾರದಿರುವುದರಿಂದ ಅಡಿಕೆ ಬೆಳೆಗೆ ಅಗತ್ಯವಾಗಿರುವ ನೀರು ದೊರಕುವುದು ದುರ್ಲಭ. ಮುಂದಿನ ವರ್ಷಗಳಲ್ಲಿ ಇದೇ ರೀತಿಯ ಸಂದರ್ಭಗಳು ಎದುರಾಗಬಹುದಾದ ಹಿನ್ನೆಲೆಯಲ್ಲಿ ಎಲ್ಲಾ ತೋಟಗಾರಿಕೆ ಬೆಳೆಗಾರರು ತಮ್ಮ ಅಡಿಕೆ ಬೆಳೆಯ ರಕ್ಷಣೆಗೆ ಸುರಕ್ಷತಾ ಕ್ರಮವಾಗಿ ಹನಿ ನೀರಾವರಿ ವ್ಯವಸ್ಥೆ ಅಳವಡಿಸಿಕೊಳ್ಳುವಂತೆ ಹಾಗೂ ಅಮೂಲ್ಯವಾದ ನೀರನ್ನು ವೈಜ್ಞಾನಿಕ ರೀತಿಯಲ್ಲಿ ಸದ್ಬಳಕೆ ಮಾಡಿಕೊಳ್ಳುವಂತೆ ಅವರು ಮನವಿ ಮಾಡಿದ್ದಾರೆ.
– ಜಿ.ಎಂ.ಗಂಗಾಧರಸ್ವಾಮಿ, ಜಿಲ್ಲಾಧಿಕಾರಿಗಳು, ದಾವಣಗೆರೆ.

ನೀರಿನ ಸಮಸ್ಯೆಯ ತಕ್ಷಣದ ಕ್ರಮಕ್ಕಾಗಿ ಸಹಾಯವಾಣಿ : ಪ್ರಸಕ್ತ ಬೇಸಿಗೆಯಲ್ಲಿ ಜಿಲ್ಲೆಯ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕಂಡುಬರುವ ಕುಡಿಯುವ ನೀರಿನ ಸಮಸ್ಯೆ ತಕ್ಷಣದ ಪರಿಹಾರ ಕ್ರಮ ಕೈಗೊಳ್ಳಲು ಜಿಲ್ಲಾ ಕೇಂದ್ರದಲ್ಲಿ ಉಚಿತ ಸಹಾಯವಾಣಿ ಕೇಂದ್ರವನ್ನು ಆರಂಭಿಸಲಾಗಿದೆ. ಸಾರ್ವಜನಿಕರು ಸಹಾಯವಾಣಿ 08192-262126ಗೆ ಬೆಳಿಗ್ಗೆನ 6 ರಿಂದ ಸಂಜೆ 8ಗಂಟೆಯ ಅವಧಿಯಲ್ಲಿ ದೂರವಾಣಿ ಕರೆ ಮಾಡಿ, ಸಮಸ್ಯೆಯನ್ನು ದಾಖಲಿಸಿ, ತಕ್ಷಣದ ಪರಿಹಾರ ಕ್ರಮಗಳನ್ನು ಕೈಗೊಳ್ಳಲು ಸಹಕರಿಸುವಂತೆ ಜಿಲ್ಲಾಧಿಕಾರಿಗಳು ಮನವಿ ಮಾಡಿದ್ದಾರೆ. ಅಂತೆಯೇ ಜಿಲ್ಲೆಯ ಎಲ್ಲಾ ತಾಲೂಕು ಕೇಂದ್ರಗಳಲ್ಲೂ ಸಹಾಯವಾಣಿ ಕೇಂದ್ರಗಳನ್ನು ತೆರೆಯಲಾಗಿದ್ದು ಅಗತ್ಯ ಸಿಬ್ಬಂಧಿಗಳನ್ನು ನಿಯೋಜಿಸಲಾಗಿದೆ. ಈವರೆಗೆ 26000 ಕುಡಿಯುವ ನೀರಿನ ಮಾದರಿಗಳನ್ನು ವೈಜ್ಞಾನಿಕವಾಗಿ ಪರೀಕ್ಷಿಸಲಾಗಿದೆ
– ಗಿತ್ತೆ ಮಾಧವ ವಿಠ್ಠಲರಾವ್, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಪಂಚಾಯಿತಿ, ದಾವಣಗೆರೆ.

ಜಾನುವಾರುಗಳಿಗೆ ಕಾಲುಬಾಯಿ ಲಸಿಕೆ ಹಾಕಿಸಿ : ಜಿಲ್ಲೆಯ ನಗರ ಮತ್ತು ಗ್ರಾಮೀಣ ಪ್ರದೇಶಗಳ ವ್ಯಾಪ್ತಿಯಲ್ಲಿ ಜಾನುವಾರುಗಳಿಗೆ ಕಾಲುಬಾಯಿ ಲಸಿಕೆ ಆಂದೋಲನ ಆರಂಭವಾಗಿದ್ದು, ಪಶುಪಾಲಕರು, ಹೈನೋದ್ಯಮಿಗಳು ತಪ್ಪದೆ ತಮ್ಮ ಜಾನುವಾರುಗಳಿಗೆ ಕಾಲುಬಾಯಿ ಲಸಿಕೆಯನ್ನು ಹಾಕಿಸಿ. ಜಿಲ್ಲೆಯಲ್ಲಿ ಪ್ರಸ್ತುತ ಸಂದರ್ಭದಲ್ಲಿ ಜಾನುವಾರುಗಳಿಗೆ ಸಾಕಷ್ಟು ಮೇವಿನ ಸಂಗ್ರಹವಿದ್ದು, ಕೊರತೆ ಇಲ್ಲ. ಹಿಂಗಾರು ರಾಗಿ ಬೆಳೆ ಚೆನ್ನಾಗಿರುವುದರಿಂದ ಮೇವಿನ ಕೊರತೆ ಎದುರಾಗಲಾರದು.
– ಜಿ.ಎಂ.ಗಂಗಾಧರಸ್ವಾಮಿ, ಜಿಲ್ಲಾಧಿಕಾರಿಗಳು, ದಾವಣಗೆರೆ.

ಜಿಲ್ಲೆಯಲ್ಲಿ ವಿದ್ಯುತ್ ಟ್ರಾನ್ಸ್ ಫಾರ್ಮರ್ಗಳ 03 ದುರಸ್ತಿ ಕೇಂದ್ರಗಳಿವೆ. ಅಲ್ಲದೇ ಅಗತ್ಯಕ್ಕೆ ತಕ್ಕಷ್ಟು ದಾಸ್ತಾನು ಇದೆ. ಟ್ರಾನ್ಸ್ಫಾರ್ಮರ್ಗಳ ಸಮಸ್ಯೆ ಇದ್ದಲ್ಲಿ ದಿನದ 24ಗಂಟೆಯ ಅವಧಿಯೊಳಗಾಗಿ ದುರಸ್ತಿ ಮಾಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.
ಹಕ್ಕಿಜ್ವರ ಪ್ರಕರಣಗಳು ಜಿಲ್ಲೆಯಲ್ಲಿ ಇಲ್ಲ : ಜಿಲ್ಲೆಯಲ್ಲಿ ಇದುವರೆಗೆ ಯಾವುದೇ ಹಕ್ಕಿ ಜ್ವರ ಪ್ರಕರಣಗಳು ಕಂಡುಬಂದಿಲ್ಲ. ಆದ್ದರಿಂದ ಸಾರ್ವಜನಿಕರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ. ಜಿಲ್ಲೆಯ ಯಾವುದೇ ಸ್ಥಳದಲ್ಲಿ ಹಕ್ಕಿ-ಪಕ್ಷಿಗಳು ಅನುಮಾನಾಸ್ಪರ ರೀತಿಯಲ್ಲಿ ಮೃತಪಟ್ಟಿದ್ದು ಕಂಡುಬಂದಲ್ಲಿ ಸಾರ್ವಜನಿಕರು ಅವುಗಳನ್ನು ಮುಟ್ಟದೇ ಮಾಹಿತಿ ನೀಡಿದಲ್ಲಿ ಅದರ ವ್ಯವಸ್ಥಿತ ಪರೀಕ್ಷೆ ನಡೆಸಿ, ಅಗತ್ಯ ಕ್ರಮ ಕೈಗೊಳ್ಳು ಅನುಕೂಲವಾಗಲಿದೆ ಎಂದರು.
ಸಭೆಯಲ್ಲಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿತ್ತೇ ಮಾಧವ ವಿಠ್ಠಲರಾವ್, ಉಪವಿಭಾಗಾಧಿಕಾರಿ ಚನ್ನಪ್ಪ, ಗ್ರಾ.ಕು.ನೀ.ನೈ.ಇಲಾಖೆಯ ಅಧಿಕಾರಿ ನಾಗೇಂದ್ರಪ್ಪ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಜಿಯಾವುಲ್ಲಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ಷಣ್ಮುಖಪ್ಪ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು, ತಾಲೂಕುಗಳ ತಹಶೀಲ್ದಾರರು, ಕಾರ್ಯನಿರ್ವಾಹಕ ಅಧಿಕಾರಿಗಳು ಉಪಸ್ಥಿತರಿದ್ದರು.

Share

Leave a comment

Leave a Reply

Your email address will not be published. Required fields are marked *

Related Articles
ಅಪರಾಧದಾವಣಗೆರೆ

Canara Bank: ಕೆನರಾ ಬ್ಯಾಂಕ್‌ಗೆ 4.15 ಲಕ್ಷ ರೂ. ದಂಡ ವಿಧಿಸಿದ ದಾವಣಗೆರೆ ಜಿಲ್ಲಾ ಗ್ರಾಹಕರ ಆಯೋಗ

ದಾವಣಗೆರೆ: (Canara Bank) ಗೃಹ ಸಾಲದ ಮೂಲ ದಾಖಲೆಗಳನ್ನು ಹಿಂತಿರುಗಿಸುವಲ್ಲಿ ನಿರ್ಲಕ್ಷ್ಯ ತೋರಿದ ಕೆನರಾ ಬ್ಯಾಂಕ್‌ಗೆ ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಒಟ್ಟು 4,15,000 ರೂ.ಗಳ ಪರಿಹಾರ ಪಾವತಿಸುವಂತೆ ಮಹತ್ವದ ಆದೇಶ ನೀಡಿದೆ. ನಗರದ ಶ್ರೀಮತಿ ಮಂಜುಳಾ ಕೆ.ಬಿ. ಅವರು ಕೆನರಾ ಬ್ಯಾಂಕ್‌ನಲ್ಲಿ ತಮ್ಮ...

ದಾವಣಗೆರೆ

Water: ಕುಡಿಯುವ ನೀರಿನ ಸಮಸ್ಯೆ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ಸಲ್ಲದು: ಜಿಲ್ಲೆಯ 103 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ – ಸಮಸ್ಯೆ ಪರಿಹಾರಕ್ಕೆ ಅಧಿಕಾರಿಗಳಿಗೆ ಸಿಇಒ ಕಟ್ಟುನಿಟ್ಟಿನ ಸೂಚನೆ

ದಾವಣಗೆರೆ: (Water Crisis) ಜಿಲ್ಲೆಯಲ್ಲಿ ಬೇಸಿಗೆಯ ಹಿನ್ನೆಲೆಯಲ್ಲಿ ಉದ್ಭವಿಸಬಹುದಾದ ಕುಡಿಯುವ ನೀರಿನ ಸಮಸ್ಯೆಗಳನ್ನು ಅತ್ಯಂತ ಗಂಭೀರವಾಗಿ...

Siddu is the country's number one honest prophet: Minister Bairathi Suresh
ದಾವಣಗೆರೆ

Siddu; ಸಿದ್ದು ದೇಶದ ನಂಬರ್ ಒನ್ ಪ್ರಾಮಾಣಿಕ ಮುತ್ಸದ್ದಿ: ಸಚಿವ ಬೈರತಿ ಸುರೇಶ್ ಬಣ್ಣನೆ

ಹರಿಹರ: (Siddu) ದೇಶದ ಅತ್ಯಂತ ಪ್ರಾಮಾಣಿಕ ರಾಜಕಾರಣಿಗಳ ಸಾಲಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮೊದಲ ಸ್ಥಾನದಲ್ಲಿದ್ದಾರೆ ಎಂದು...