ದಾವಣಗೆರೆ

RAIN: ಭಾರೀ ಮಳೆ ಮುನ್ಸೂಚನೆ: ಪ್ರಾಣಹಾನಿ ತಡೆಗಟ್ಟಲು ಮುನ್ನೆಚ್ಚರಿಕೆ ಕ್ರಮಕ್ಕೆ ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ಸೂಚನೆ

Share
Share

ದಾವಣಗೆರೆ:(RAIN)  ಜಿಲ್ಲೆಯಲ್ಲಿ ಮುಂದಿನ ದಿನಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇರುವ ಹಿನ್ನೆಲೆಯಲ್ಲಿ, ಯಾವುದೇ ರೀತಿಯ ಪ್ರಾಣಾಪಾಯ ಹಾಗೂ ಸಾರ್ವಜನಿಕ ಆಸ್ತಿಪಾಸ್ತಿ ನಷ್ಟ ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಇಂದು ಮಳೆಯಿಂದಾಗಬಹುದಾದ ಅನಾಹುತಗಳ ತಡೆಗಟ್ಟುವಿಕೆ ಹಾಗೂ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಅಧಿಕಾರಿಗಳೊಂದಿಗೆ ಏರ್ಪಸಿದ್ದ ʼಗೂಗಲ್‌ ಮೀಟ್‌’ ವಿಡಿಯೋ ಸಂವಾದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮಳೆ ಹಾಗೂ ಗಾಳಿಯಿಂದಾಗಿ ರಸ್ತೆ ಬದಿಯ ಮರಗಳು ಧರೆಗುರುಳುವ ಮತ್ತು ವಿದ್ಯುತ್ ತಂತಿಗಳು ತುಂಡಾಗಿ ಬೀಳುವ ಸಾಧ್ಯತೆ ಹೆಚ್ಚಿರುತ್ತದೆ. ಇಂತಹ ಸಂದರ್ಭದಲ್ಲಿ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಲೋಕೋಪಯೋಗಿ ಇಲಾಖೆ, ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಬೆಸ್ಕಾಂ ಅಧಿಕಾರಿಗಳು ಪರಸ್ಪರ ಸಮನ್ವಯದೊಂದಿಗೆ ಸನ್ನದ್ಧರಾಗಿರಬೇಕು. ತುರ್ತು ತಂಡಗಳು ತಕ್ಷಣವೇ ಸ್ಥಳಕ್ಕೆ ಧಾವಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ತಿಳಿಸಿದರು.

ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ನಿರ್ಮಿಸಲಾಗಿರುವ ಬೃಹತ್ ಕಾಂಪೌಂಡ್ ಗೋಡೆಗಳ ಸುರಕ್ಷತೆಯನ್ನು ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಬೇಕು. ಅಪಾಯಕಾರಿ ಸ್ಥಿತಿಯಲ್ಲಿರುವ ಗೋಡೆಗಳ ಬಗ್ಗೆ ಸಂಬಂಧಪಟ್ಟವರಿಗೆ ಮುನ್ನೆಚ್ಚರಿಕೆ ನೀಡಬೇಕು. ಅಲ್ಲದೆ, ಜಿಲ್ಲೆಯಲ್ಲಿರುವ ಶಿಥಿಲಾವಸ್ಥೆಯ ಕಟ್ಟಡಗಳನ್ನು ಗುರುತಿಸಿ, ಅಲ್ಲಿ ವಾಸಿಸುತ್ತಿರುವ ಜನರನ್ನು ತಕ್ಷಣವೇ ತೆರವುಗೊಳಿಸಿ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.

ಮಳೆ ನೀರು ಸರಾಗವಾಗಿ ಹರಿಯಲು ಅಡ್ಡಿಯಾಗಿರುವ ಚರಂಡಿಗಳನ್ನು ತಕ್ಷಣವೇ ಸ್ವಚ್ಛಗೊಳಿಸಬೇಕು. ಎಲ್ಲಿಯೂ ನೀರು ನಿಂತು ಕೃತಕ ಪ್ರವಾಹ ಸೃಷ್ಟಿಯಾಗದಂತೆ ನೋಡಿಕೊಳ್ಳಬೇಕು. ಸಾರ್ವಜನಿಕರ ದೂರು ಹಾಗೂ ತುರ್ತು ನೆರವಿಗಾಗಿ ಎಲ್ಲಾ ತಾಲ್ಲೂಕು ಮತ್ತು ಗ್ರಾಮ ಪಂಚಾಯಿತಿಗಳಲ್ಲಿ ದಿನದ 24 ಗಂಟೆಯೂ ಕಾರ್ಯನಿರ್ವಹಿಸುವ ಸಹಾಯವಾಣಿ ಕೇಂದ್ರಗಳನ್ನು ಆರಂಭಿಸಿ, ಅವುಗಳ ದೂರವಾಣಿ ಸಂಖ್ಯೆಗಳನ್ನು ಸಾರ್ವಜನಿಕರಿಗೆ ತಿಳಿಯುವಂತೆ ಪ್ರಕಟಿಸಬೇಕು ಎಂದರು.

ಸಿಡಿಲು ಹಾಗೂ ಮಳೆಯಿಂದ ಉಂಟಾಗಬಹುದಾದ ತುರ್ತು ಚಿಕಿತ್ಸೆಗಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಎಲ್ಲಾ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಗಳನ್ನು ದಾಸ್ತಾನು ಇರಿಸಿಕೊಳ್ಳಬೇಕು. ಸಿಡಿಲು ಬಡಿಯುವ ಮುನ್ಸೂಚನೆ ನೀಡುವ ‘ದಾಮಿನಿ’ ಆಪ್ ಅನ್ನು ಪ್ರತಿಯೊಬ್ಬ ಸಾರ್ವಜನಿಕರು ಹಾಗೂ ಅಧಿಕಾರಿಗಳು ಅಳವಡಿಸಿಕೊಳ್ಳುವ ಮೂಲಕ ಮುನ್ನೆಚ್ಚರಿಕೆ ವಹಿಸಬೇಕು ಎಂದು ಅವರು ಮನವಿ ಮಾಡಿದರು.

ವಿಪತ್ತು ನಿರ್ವಹಣಾ ತಂಡ, ಲೋಕೋಪಯೋಗಿ ಇಲಾಖೆ, ನಗರ ಸ್ಥಳೀಯ ಸಂಸ್ಥೆಗಳು, ಆರೋಗ್ಯ ಇಲಾಖೆ, ಬೆಸ್ಕಾಂ, ಅಗ್ನಿಶಾಮಕದಳ ಅಧಿಕಾರಿಗಳು ಸನ್ನದ್ಧರಾಗಿದ್ದು, ತಮ್ಮ ಕೇಂದ್ರ ಸ್ಥಾನದಲ್ಲಿದ್ದುಕೊಂಡು ಪರಿಸ್ಥಿತಿಯನ್ನು ಅವಲೋಕಿಸಬೇಕು. ವಿಪತ್ತು ನಿರ್ವಹಣಾ ಕಾರ್ಯದಲ್ಲಿ ಯಾವುದೇ ವಿಳಂಬ ಅಥವಾ ನಿರ್ಲಕ್ಷ ತೋರಬಾರದು ಎಂದು ಸೂಚನೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Share

Leave a comment

Leave a Reply

Your email address will not be published. Required fields are marked *

Don't Miss

ದಾವಣಗೆರೆ

IGP: ವರದಿಗಾರರ ಮೇಲೆ ASP ದರ್ಪ: ಕ್ರಮಕ್ಕೆ ಒತ್ತಾಯಿಸಿ IGPಗೆ ಪತ್ರಕರ್ತರ ಮನವಿ

ದಾವಣಗೆರೆ:(IGP) ಹರಿಹರದ ಪಂಚಮಸಾಲಿ ಮಠದಲ್ಲಿ ನಡೆದ ಘಟನೆಯೊಂದರ ವರದಿಗೆ ತೆರಳಿದ್ದ ಮಾಧ್ಯಮ ಪ್ರತಿನಿಧಿಗಳ ಮೇಲೆ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಪರಮೇಶ್ವರ ಹೆಗಡೆ ಅವರು ಅವಾಚ್ಯ ಶಬ್ದಗಳಿಂದ ನಿಂದಿಸಿ, ದುರ್ವರ್ತನೆ ತೋರಿರುವುದನ್ನು ಖಂಡಿಸಿ...

ದಾವಣಗೆರೆ

Panchamasali: ಹರಿಹರ ಪಂಚಮಸಾಲಿ ಪೀಠದಲ್ಲಿ ‘ಲೆಕ್ಕದ’ ಸಮರ! ಸ್ವಾಮೀಜಿ vs ಟ್ರಸ್ಟಿಗಳ ನೇರ ಹಣಾಹಣಿ!

ದಾವಣಗೆರೆ: (Panchamasali) ದಾವಣಗೆರೆ ಜಿಲ್ಲೆಯ ಹರಿಹರ ಪಂಚಮಸಾಲಿ ಮಠದಲ್ಲಿ ಕಳೆದ ಕೆಲವು ದಿನಗಳಿಂದ ನಡೆಯುತ್ತಿದ್ದ ಮುಸುಕಿನ ಗುದ್ದಾಟ ಈಗ ಬೀದಿಗೆ ಬಂದಿದೆ. ವಚನಾನಂದ ಸ್ವಾಮೀಜಿ ಹಾಗೂ ಮಠದ ಟ್ರಸ್ಟಿಗಳ ನಡುವಿನ ಸಮರ...

Related Articles
ದಾವಣಗೆರೆರಾಜ್ಯ / ಕರ್ನಾಟಕ

Minister: ದಾವಣಗೆರೆ ಜಿಲ್ಲೆಗೆ ಎರಡು ಸಚಿವ ಸ್ಥಾನ, ಮಂಕಾಳ್ ವೈದ್ಯ ಬದಲಿಗೆ ಎಸ್ ಎಸ್ ಮಲ್ಲಿಕಾರ್ಜುನ ಸಂಪುಟ ಸೇರ್ಪಡೆ

ದಾವಣಗೆರೆ: (Minister) ದಾವಣಗೆರೆ ಉತ್ತರ ಕ್ಷೇತ್ರದ ಶಾಸಕ ಎಸ್.ಎಸ್. ಮಲ್ಲಿಕಾರ್ಜುನ್ ಅವರನ್ನು ಸಂಪುಟ ಸಚಿವರನ್ನಾಗಿ ಸೇರಿಸಿಕೊಳ್ಳಲಾಗಿದೆ....

ದಾವಣಗೆರೆ

Students: ಇಂಗ್ಲೆಂಡ್ ಪ್ರವಾಸ: ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ

ದಾವಣಗೆರೆ:(Students) ಇಂಗ್ಲೆಂಡನ ವೊಲ್ವರ್‌ಹ್ಯಾಂಪ್ಟನ್ ವಿಶ್ವವಿದ್ಯಾಲಯದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಸ್ನಾತಕ ಪದವಿಯ ಪ್ರತಿಭಾನ್ವಿತರು (ಸ್ಕೌಟ್-೦೨) ಅಂತರರಾಷ್ಟಿçಯ ಶೈಕ್ಷಣಿಕ...

ಅಪರಾಧದಾವಣಗೆರೆರಾಜ್ಯ / ಕರ್ನಾಟಕ

PSI: ಮಹಿಳಾ ಪಿಎಸ್‌ಐ ಮೇಲೆ ಹಲ್ಲೆ ನಡೆಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಪಾನಮತ್ತ ಮಹಿಳೆ.!

ದಾವಣಗೆರೆ: (PSI) ಕರ್ತವ್ಯದಲ್ಲಿದ್ದ ಮಹಿಳಾ ಪೊಲೀಸ್ ಅಧಿಕಾರಿಯ ಮೇಲೆ ಪಾನಮತ್ತ ಮಹಿಳೆಯೊಬ್ಬಳು ಹಲ್ಲೆ ನಡೆಸಿ, ಅಸಭ್ಯವಾಗಿ...