ದಾವಣಗೆರೆ

Counting: ಮೇ 4 ರಂದು ಡಿ.ಆರ್.ಆರ್ ಶಾಲೆಯಲ್ಲಿ ಮತ ಎಣಿಕೆ; ಸುಸಜ್ಜಿತ ಸಿದ್ಧತೆ, ಡಿಜಿಟಲ್ ತಪಾಸಣೆ, 21 ಸುತ್ತಗಳ ಮತ ಎಣಿಕೆ: ಚುನಾವಣಾಧಿಕಾರಿ

Share
Share

ದಾವಣಗೆರೆ: (Counting) ದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆಯ ಮತ ಎಣಿಕೆ ಕಾರ್ಯವು ಮೇ 4 ರಂದು ನಗರದ ಡಿ.ಆರ್.ಆರ್ (DRR) ಶಾಲೆಯಲ್ಲಿ ನಡೆಯಲಿದ್ದು, ಈ ಸಂಬಂಧ ಜಿಲ್ಲಾಡಳಿತವು ಎಲ್ಲಾ ರೀತಿಯ ತಾಂತ್ರಿಕ ಹಾಗೂ ಭದ್ರತಾ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ, ಅಭ್ಯರ್ಥಿಗಳು, ಏಜೆಂಟರು ಹಾಗೂ ಸಿಬ್ಬಂದಿಗಳಿಗೆ ಕ್ಯೂ.ಆರ್ (QR) ಕೋಡ್ ಹೊಂದಿರುವ ಡಿಜಿಟಲ್ ಗುರುತಿನ ಚೀಟಿಗಳನ್ನು ನೀಡಲಾಗಿದೆ ಎಂದು ಚುನಾವಣಾಧಿಕಾರಿ ಸಂತೋಷ್ ಕುಮಾರ್ ಅವರು ತಿಳಿಸಿದರು.

ಅವರು ಇಂದು ಮಹಾನಗರ ಪಾಲಿಕೆ ಕಚೇರಿಯಲ್ಲಿ ಏರ್ಪಡಿಸಿದ್ದ ದಾವಣಗೆರೆ ದಕ್ಷಿಣ  ವಿಧಾನಸಭಾ ಉಪ ಚುನಾವಣೆಯ ಮತ ಎಣಿಕೆ ಕಾರ್ಯ ಪೂರ್ವಸಿದ್ಧತಾ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದರು.

ಮತ ಎಣಿಕೆ ಕೇಂದ್ರದಲ್ಲಿ ಇವಿಎಂ (EVM) ಎಣಿಕೆಗಾಗಿ ಒಂದು ಕೊಠಡಿ ಹಾಗೂ ಅಂಚೆ ಮತಪತ್ರಗಳ (Postal Ballot) ಎಣಿಕೆಗಾಗಿ ಪ್ರತ್ಯೇಕ ಕೊಠಡಿಯ ವ್ಯವಸ್ಥೆ ಮಾಡಲಾಗಿದೆ. ಮೇ 4 ರಂದು ಬೆಳಗ್ಗೆ 7:30ಕ್ಕೆ ಅಭ್ಯರ್ಥಿಗಳು ಮತ್ತು ಏಜೆಂಟರ ಸಮ್ಮುಖದಲ್ಲಿ ಸ್ಟ್ರಾಂಗ್ ರೂಮ್‌ಗಳನ್ನು ತೆರೆಯಲಾಗುವುದು. ಬೆಳಗ್ಗೆ 8:00 ಗಂಟೆಗೆ ಅಂಚೆ ಮತಪತ್ರಗಳ ಎಣಿಕೆ ಆರಂಭವಾಗಲಿದ್ದು, 8:30ಕ್ಕೆ ಇವಿಎಂ ಯಂತ್ರಗಳ ಎಣಿಕೆ ಪ್ರಕ್ರಿಯೆ ಶುರುವಾಗಲಿದೆ ಎಂದು ತಿಳಿಸಿದರು.

ಮತ ಎಣಿಕೆಗಾಗಿ ಒಟ್ಟು 14 ಟೇಬಲ್‌ಗಳನ್ನು ಅಳವಡಿಸಲಾಗಿದ್ದು, ಪೋಸ್ಟಲ್ ಬ್ಯಾಲೆಟ್ ಮತ್ತು ಇಟಿಪಿಬಿಎಸ್ (ETPBMS) ಗಾಗಿ ಪ್ರತ್ಯೇಕವಾಗಿ ಒಂದು ಟೇಬಲ್ ವ್ಯವಸ್ಥೆ ಮಾಡಲಾಗಿದೆ.  21 ಸುತ್ತಗಳ ಮತ ಎಣಿಕೆ ಕಾರ್ಯ ನಡೆಯಲಿದೆ,

ಪ್ರತಿ ಟೇಬಲ್‌ಗೆ ಕೌಂಟಿಂಗ್ ಸೂಪರ್‌ವೈಸರ್, ಮೈಕ್ರೋ ಅಬ್ಸರ್ವರ್ ಹಾಗೂ ಕೌಂಟಿಂಗ್ ಅಸಿಸ್ಟೆಂಟ್‌ಗಳನ್ನು ನೇಮಿಸಲಾಗಿದೆ. ಎಣಿಕೆ ಕಾರ್ಯದ ದಿನ ಬೆಳಗ್ಗೆ 5:00 ಗಂಟೆಗೆ ಸಿಬ್ಬಂದಿಗಳಿಗೆ ಅಂತಿಮ ಹಂತದ ಟೇಬಲ್ ಹಂಚಿಕೆ ಪ್ರಕ್ರಿಯೆ (Third Randomization) ನಡೆಯಲಿದೆ ಎಂದರು.

ಮತ ಎಣಿಕೆ ಕೇಂದ್ರದ ಸುತ್ತಮುತ್ತ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮೂರು ಹಂತದ ಭದ್ರತೆಯನ್ನು ಕೈಗೊಳ್ಳಲಾಗಿದೆ, ಮೊದಲ ಹಂತದದಲ್ಲಿ ಮತ ಎಣಿಕೆ ಕೇಂದ್ರದ. ಸುತ್ತಲಿನ 100 ಮೀಟರ್ ವ್ಯಾಪ್ತಿಯನ್ನು ಪಾದಚಾರಿ ವಲಯವೆಂದು ಘೋಷಿಸಲಾಗಿದ್ದು, ವಾಹನ ಸಂಚಾರ ನಿರ್ಬಂಧಿಸಲಾಗಿದೆ.  ಕೇಂದ್ರದ ಎರಡನೇ ಹಂತದಲ್ಲಿ ಡಿ.ಎ.ಆರ್ (DAR) ಪೊಲೀಸರು ತಪಾಸಣೆ ನಡೆಸಲಿದ್ದಾರೆ. ಮೂರನೇ ಹಂತದಲ್ಲಿ ಮತ ಎಣಿಕೆ ಕೊಠಡಿಯ ಪ್ರವೇಶ ದ್ವಾರದಲ್ಲಿ ಸಿ.ಐ.ಎಸ್.ಎಫ್ (CISF) ಸಿಬ್ಬಂದಿಗಳು ಅತ್ಯಾಧುನಿಕ ತಪಾಸಣೆ ನಡೆಸಲಿದ್ದಾರೆ ಎಂದು ತಿಳಿಸಿದರು.

ಪ್ರಸ್ತುತ ಕ್ಷೇತ್ರದಲ್ಲಿ 25 ಜನ ಅಭ್ಯರ್ಥಿಗಳು ಸ್ಪರ್ಧೆಯಲ್ಲಿದ್ದಾರೆ.  ಪ್ರತಿ ಟೇಬಲ್‌ಗೆ ಒಬ್ಬರಂತೆ ಅಭ್ಯರ್ಥಿಗಳು ತಮ್ಮ ಏಜೆಂಟ್‌ಗಳನ್ನು ನೇಮಿಸಿಕೊಳ್ಳಲು ಅವಕಾಶವಿದೆ, ಮತ ಎಣಿಕೆ ಕೇಂದ್ರದೊಳಗೆ ಪ್ರವೇಶಿಸಲು ಕಟ್ಟುನಿಟ್ಟಾದ ನಿಯಮಗಳನ್ನು ಪಾಲಿಸಬೇಕಾಗುತ್ತದೆ  ಅಧಿಕೃತ ಪಾಸ್ ಇಲ್ಲದ ಯಾರಿಗೂ ಎಣಿಕೆ ಕೇಂದ್ರದ ಒಳಗೆ ಪ್ರವೇಶವಿರುವುದಿಲ್ಲ.

ಈ ಬಾರಿಯ ವಿಶೇಷವೆಂದರೆ, ಅಭ್ಯರ್ಥಿಗಳು, ಏಜೆಂಟರು ಹಾಗೂ ಸಿಬ್ಬಂದಿಗಳಿಗೆ ಕ್ಯೂ.ಆರ್ (QR) ಕೋಡ್ ಹೊಂದಿರುವ ಡಿಜಿಟಲ್ ಗುರುತಿನ ಚೀಟಿಗಳನ್ನು ನೀಡಲಾಗಿದೆ. ಸಿ.ಐ.ಎಸ್.ಎಫ್ ಸಿಬ್ಬಂದಿಗಳು ಮೊಬೈಲ್ ಆಪ್ ಮೂಲಕ ಈ ಕೋಡ್ ಸ್ಕ್ಯಾನ್ ಮಾಡಿ ಅಧಿಕೃತತೆಯನ್ನು ಖಚಿತಪಡಿಸಿಕೊಂಡ ನಂತರವೇ ಒಳಗೆ ಬಿಡಲಿದ್ದಾರೆ ಎಂದರು.

ಮತ ಎಣಿಕೆ ಕೇಂದ್ರದ ಒಳಗೆ ಮತ್ತು ಹೊರಗೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ವ್ಯಾಪಕ ಭದ್ರತಾ ವ್ಯವಸ್ಥೆಯನ್ನು ಕೈಗೊಳ್ಳಲಾಗಿದೆ. ಕೇಂದ್ರದ ಸುತ್ತಮುತ್ತ ಸಶಸ್ತ್ರ ಮೀಸಲು ಪಡೆ ಹಾಗೂ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಸಿಸಿಟಿವಿ ಕ್ಯಾಮೆರಾಗಳ ಮೂಲಕ ನಿರಂತರ ನಿಗಾ ವಹಿಸಲಾಗಿದೆ. ಮತ ಎಣಿಕೆ ಕೇಂದ್ರಕ್ಕೆ ಅನಧಿಕೃತ  ಸಾರ್ವಜನಿಕರ ಪ್ರವೇಶವನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದರು.

ಮತ ಎಣಿಕೆ ಕೇಂದ್ರದ ಒಳಗೆ ಮೊಬೈಲ್ ಫೋನ್, ಸ್ಮಾರ್ಟ್ ವಾಚ್ ಹಾಗೂ ಯಾವುದೇ ಎಲೆಕ್ಟ್ರಾನಿಕ್ ಉಪಕರಣಗಳನ್ನು ಕೊಂಡೊಯ್ಯುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಮಾಧ್ಯಮದವರಿಗಾಗಿ ಪ್ರತ್ಯೇಕ ಮೀಡಿಯಾ ಸೆಂಟರ್ ಸ್ಥಾಪಿಸಲಾಗಿದ್ದು, ಅಲ್ಲಿ ಇಂಟರ್ನೆಟ್ ಹಾಗೂ ಫಲಿತಾಂಶ ವೀಕ್ಷಣೆಗೆ ಸ್ಮಾರ್ಟ್ ಟಿವಿ ವ್ಯವಸ್ಥೆ ಮಾಡಲಾಗಿದೆ, ಚುನಾವಣೆಯ ಎಣಿಕೆ ಕಾರ್ಯಕ್ಕೆ ಸಂಪೂರ್ಣವಾಗಿ ಸಿಸಿಟಿವಿ ಅಳವಡಿಸಲಾಗಿದೆ ಹಾಗೂ ವಿಡಿಯೋಗ್ರಾಫಿ ಮಾಡಲಾಗುತ್ತದೆ  ಎಂದು ತಿಳಿಸಿದರು.

 85 ವರ್ಷ ಮೇಲ್ಪಟ್ಟ ಹಾಗೂ ವಿಶೇಷ ಮತದಾರರಿಂದ 217 ಮತಪತ್ರಗಳು ಮತ್ತು 10 ಅಂಚೆ ಮತಗಳನ್ನು ಸ್ವೀಕರಿಸಲಾಗಿದೆ,  ಪ್ರತಿ ಸುತ್ತಿನ ಎಣಿಕೆಯ ನಂತರ ಫಲಿತಾಂಶದ ವಿವರಗಳನ್ನು ಧ್ವನಿವರ್ಧಕಗಳ ಮೂಲಕ ಸಾರ್ವಜನಿಕರಿಗೆ ಹಾಗೂ ಆನ್‌ಲೈನ್ ಮೂಲಕ ಮಾಧ್ಯಮಗಳಿಗೆ ತಕ್ಷಣವೇ ಒದಗಿಸಲಾಗುವುದು, ಚುನಾವಣಾ ನೀತಿ ಸಂಹಿತೆ (MCC) ಜಾರಿಯಲ್ಲಿರುವುದರಿಂದ ಯಾವುದೇ ರೀತಿಯ ವಿಜಯೋತ್ಸವ ಅಥವಾ ಮೆರವಣಿಗೆಗಳನ್ನು ನಡೆಸುವಂತಿಲ್ಲ ಎಂದರು.

ಚುನಾವಣಾ ವೀಕ್ಷಕರು, ಜಿಲ್ಲಾ ಚುನಾವಣಾಧಿಕಾರಿ, ದಾವಣಗೆರೆ ತಾಲ್ಲೂಕು ತಹಶೀಲ್ದಾರ್ ಗುರುಬಸವರಾಜ್, ಹರಿಹರ ತಾಲ್ಲೂಕು ತಹಶೀಲ್ದಾರ್ ಸಂತೋಷ್ ಉಪಸ್ಥಿತರಿದ್ದರು.

Share

Leave a comment

Leave a Reply

Your email address will not be published. Required fields are marked *

Don't Miss

ರಾಜ್ಯ / ಕರ್ನಾಟಕ

DYSP: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಭಾರಿ ಸರ್ಜರಿ: 74 ಡಿವೈಎಸ್‌ಪಿಗಳ ವರ್ಗಾವಣೆ – ಇಲ್ಲಿದೆ ಕಂಪ್ಲೀಟ್ ಲಿಸ್ಟ್

ಬೆಂಗಳೂರು:(DYSP) ರಾಜ್ಯ ಸರ್ಕಾರವು ಪೊಲೀಸ್ ಇಲಾಖೆಯಲ್ಲಿ ದೊಡ್ಡ ಮಟ್ಟದ ವರ್ಗಾವಣೆ ಪ್ರಕ್ರಿಯೆ ನಡೆಸಿದೆ. ಆಡಳಿತಾತ್ಮಕ ಹಿತದೃಷ್ಟಿಯಿಂದ ಕೂಡಲೇ ಜಾರಿಗೆ ಬರುವಂತೆ ಒಟ್ಟು 74 ಡಿವೈಎಸ್‌ಪಿ (ಸಿವಿಲ್) ಅಧಿಕಾರಿಗಳನ್ನು ವಿವಿಧ ಸ್ಥಳಗಳಿಗೆ ನಿಯೋಜಿಸಿ...

ದಾವಣಗೆರೆ

DCM: ಎಸ್.ಎಸ್. ಮಲ್ಲಿಕಾರ್ಜುನ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಿ: ಉದ್ಯಮಿ ಎನ್. ಬಕ್ಕೇಶ್ ಒತ್ತಾಯ

ದಾವಣಗೆರೆ:(DCM) ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು ಲಿಂಗಾಯತ ಸಮುದಾಯದ ಬೆಂಬಲ ಪ್ರಮುಖ ಕಾರಣವಾಗಿದ್ದು, ಮುಂಬರುವ ದಿನಗಳಲ್ಲಿ ಸಮುದಾಯದ ನಾಯಕ ಎಸ್.ಎಸ್. ಮಲ್ಲಿಕಾರ್ಜುನ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು...

Related Articles
ಅಪರಾಧದಾವಣಗೆರೆ

Robbery: ದಾವಣಗೆರೆಯಲ್ಲಿ ವ್ಯಾಪಾರಿ ಅಪಹರಿಸಿ 10 ಲಕ್ಷಕ್ಕೆ ಬೇಡಿಕೆ: ಕೃತ್ಯ ಎಸಗಿ ಮಾರಣಾಂತಿಕ ಹಲ್ಲೆ ನಡೆಸಿದ ದುಷ್ಕರ್ಮಿಗಳು

ದಾವಣಗೆರೆ: (Robbery)  ದಾವಣಗೆರೆಯಲ್ಲಿ ಬಟ್ಟೆ ವ್ಯಾಪಾರಿಯೊಬ್ಬರನ್ನು ಹಣಕಾಸಿನ ಮಾತುಕತೆ ನೆಪದಲ್ಲಿ ಕರೆದೊಯ್ದು, ಕೊಠಡಿಯೊಂದರಲ್ಲಿ ಬಂಧಿಸಿ 10...

ದಾವಣಗೆರೆರಾಜ್ಯ / ಕರ್ನಾಟಕ

IGP: ದಾವಣಗೆರೆ ಪೂರ್ವ ವಲಯ ಐಜಿಪಿಯಾಗಿ ಎನ್. ಸತೀಶ್ ಕುಮಾರ್ ವರ್ಗಾವಣೆ

ದಾವಣಗೆರೆ: (IGP) ಕರ್ನಾಟಕ ಸರ್ಕಾರವು ಐಪಿಎಸ್ ಅಧಿಕಾರಿಗಳ ವರ್ಗಾವಣೆ ಪ್ರಕ್ರಿಯೆಯನ್ನು ಕೈಗೊಂಡಿದ್ದು, ಹಿರಿಯ ಐಪಿಎಸ್ ಅಧಿಕಾರಿ...

ದಾವಣಗೆರೆರಾಜ್ಯ / ಕರ್ನಾಟಕ

Lokayukta SP: ದಾವಣಗೆರೆ ನೂತನ ಲೋಕಾಯುಕ್ತ ಎಸ್‌ಪಿಯಾಗಿ ಆ್ಯಂಟನಿ ಜಾನ್ ಅಧಿಕಾರ ಸ್ವೀಕಾರ: ದೂರು ಸಲ್ಲಿಕೆಗೆ ಕರೆ

ದಾವಣಗೆರೆ: (Lokayukta SP) ದಾವಣಗೆರೆ ಜಿಲ್ಲೆಯ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾಗಿ (ಎಸ್‌ಪಿ) ಆ್ಯಂಟನಿ ಜಾನ್ ಜೆ.ಕೆ...