ಅಪರಾಧದಾವಣಗೆರೆ

Lokayukta: ದಾವಣಗೆರೆ ಪಾಲಿಕೆ ವಲಯ-1ರ ಮೇಲೆ ಲೋಕಾಯುಕ್ತ ದಾಳಿ: ಫೋನ್-ಪೇ ಮೂಲಕ ಲಂಚದ ಆರೋಪ, ದಾಖಲೆಗಳ ಪರಿಶೀಲನೆ

Share
Share

ದಾವಣಗೆರೆ: (Lokayukta) ಮಹಾನಗರ ಪಾಲಿಕೆ ವಲಯ-1ರ ಕಚೇರಿಯಲ್ಲಿ ನಡೆಯುತ್ತಿದ್ದ ಎನ್ನಲಾದ ಸಾಲು ಸಾಲು ಅಕ್ರಮಗಳ ಕುರಿತು ಬಂದ ದೂರುಗಳ ಹಿನ್ನೆಲೆಯಲ್ಲಿ, ಇಂದು ಮುಂಜಾನೆಯಿಂದಲೇ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ತಪಾಸಣೆ ನಡೆಸುತ್ತಿದ್ದಾರೆ.

​ಲೋಕಾಯುಕ್ತ ಎಸ್.ಪಿ. ಎಂ.ಎಸ್. ಕೌಲಾಪುರೆ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ಡಿವೈಎಸ್ಪಿ ಕಲಾವತಿ, ಇನ್ಸ್‌ಪೆಕ್ಟರ್‌ಗಳಾದ ಗುರುಬಸವರಾಜ್, ಪ್ರಭು ಸೇರಿದಂತೆ ಹತ್ತಕ್ಕೂ ಹೆಚ್ಚು ಸಿಬ್ಬಂದಿಗಳು ದಾಳಿಯಲಯ ಪಾಲ್ಗೊಂಡಿದ್ದಾರೆ. ಕಚೇರಿಯ ಪ್ರಮುಖ ದಾಖಲೆಗಳನ್ನು ವಶಕ್ಕೆ ಪಡೆದಿರುವ ಅಧಿಕಾರಿಗಳು, ಸಿಬ್ಬಂದಿಗಳಿಂದ ಮಾಹಿತಿ ಪಡೆಯುತ್ತಿದ್ದಾರೆ.

ದಾಳಿಗೆ ಪ್ರಮುಖ ಕಾರಣಗಳು:

​ಸಾರ್ವಜನಿಕರಿಂದ ಕೇಳಿಬಂದಿದ್ದ ಗಂಭೀರ ಆರೋಪಗಳ ಆಧಾರದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ:

  • ಡಿಜಿಟಲ್ ಲಂಚ: ಕೆಲಸ ಮಾಡಿಕೊಡಲು ಅಧಿಕಾರಿಗಳು ‘ಫೋನ್-ಪೇ’ (PhonePe) ಮೂಲಕ ಹಣ ಪಡೆಯುತ್ತಿದ್ದಾರೆ ಎಂಬ ಆರೋಪ.
  • ಬ್ರೋಕರ್ ಹಾವಳಿ: ಪಾಲಿಕೆ ಕಚೇರಿಯಲ್ಲಿ ಮಧ್ಯವರ್ತಿಗಳ ಹಸ್ತಕ್ಷೇಪ ಹೆಚ್ಚಾಗಿದ್ದು, ಜನಸಾಮಾನ್ಯರಿಗೆ ತೊಂದರೆಯಾಗುತ್ತಿದೆ ಎಂಬ ದೂರು.
  • ಬಿ-ಖಾತಾ ವಿಳಂಬ: ಬಿ-ಖಾತಾ ನೀಡುವ ಪ್ರಕ್ರಿಯೆಯಲ್ಲಿ ಅನಗತ್ಯ ವಿಳಂಬ ಮತ್ತು ಹಣಕ್ಕಾಗಿ ಪೀಡಿಸುತ್ತಿರುವ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದರು.

ಸ್ಥಳದಲ್ಲೇ ವಿಚಾರಣೆ:

​ಲೋಕಾಯುಕ್ತ ಅಧಿಕಾರಿಗಳು ಕಚೇರಿಯ ಕಂಪ್ಯೂಟರ್‌ಗಳು, ಅರ್ಜಿಗಳ ಫೈಲ್‌ಗಳು ಮತ್ತು ಹಣಕಾಸಿನ ವಹಿವಾಟಿನ ದಾಖಲೆಗಳನ್ನು ಕೂಲಂಕಷವಾಗಿ ಪರಿಶೀಲಿಸುತ್ತಿದ್ದಾರೆ. ಈ ದಾಳಿಯಿಂದ ಪಾಲಿಕೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಲ್ಲಿ ಆತಂಕ ಮೂಡಿದೆ.

​”ಸಾರ್ವಜನಿಕರ ದೂರುಗಳ ಅನ್ವಯ ಈ ದಾಳಿ ನಡೆಸಲಾಗಿದ್ದು, ಅಕ್ರಮ ಸಾಬೀತಾದಲ್ಲಿ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು,” ಎಂದು ಲೋಕಾಯುಕ್ತ ಮೂಲಗಳು ತಿಳಿಸಿವೆ.

ವರದಿ: ಹೆಚ್ ಎಂ ಪಿ ಕುಮಾರ್, Copyright protected..

Share

Leave a comment

Leave a Reply

Your email address will not be published. Required fields are marked *

Don't Miss

ರಾಜ್ಯ / ಕರ್ನಾಟಕ

DYSP: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಭಾರಿ ಸರ್ಜರಿ: 74 ಡಿವೈಎಸ್‌ಪಿಗಳ ವರ್ಗಾವಣೆ – ಇಲ್ಲಿದೆ ಕಂಪ್ಲೀಟ್ ಲಿಸ್ಟ್

ಬೆಂಗಳೂರು:(DYSP) ರಾಜ್ಯ ಸರ್ಕಾರವು ಪೊಲೀಸ್ ಇಲಾಖೆಯಲ್ಲಿ ದೊಡ್ಡ ಮಟ್ಟದ ವರ್ಗಾವಣೆ ಪ್ರಕ್ರಿಯೆ ನಡೆಸಿದೆ. ಆಡಳಿತಾತ್ಮಕ ಹಿತದೃಷ್ಟಿಯಿಂದ ಕೂಡಲೇ ಜಾರಿಗೆ ಬರುವಂತೆ ಒಟ್ಟು 74 ಡಿವೈಎಸ್‌ಪಿ (ಸಿವಿಲ್) ಅಧಿಕಾರಿಗಳನ್ನು ವಿವಿಧ ಸ್ಥಳಗಳಿಗೆ ನಿಯೋಜಿಸಿ...

ದಾವಣಗೆರೆ

DCM: ಎಸ್.ಎಸ್. ಮಲ್ಲಿಕಾರ್ಜುನ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಿ: ಉದ್ಯಮಿ ಎನ್. ಬಕ್ಕೇಶ್ ಒತ್ತಾಯ

ದಾವಣಗೆರೆ:(DCM) ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು ಲಿಂಗಾಯತ ಸಮುದಾಯದ ಬೆಂಬಲ ಪ್ರಮುಖ ಕಾರಣವಾಗಿದ್ದು, ಮುಂಬರುವ ದಿನಗಳಲ್ಲಿ ಸಮುದಾಯದ ನಾಯಕ ಎಸ್.ಎಸ್. ಮಲ್ಲಿಕಾರ್ಜುನ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು...

Related Articles
ಅಪರಾಧದಾವಣಗೆರೆ

Robbery: ದಾವಣಗೆರೆಯಲ್ಲಿ ವ್ಯಾಪಾರಿ ಅಪಹರಿಸಿ 10 ಲಕ್ಷಕ್ಕೆ ಬೇಡಿಕೆ: ಕೃತ್ಯ ಎಸಗಿ ಮಾರಣಾಂತಿಕ ಹಲ್ಲೆ ನಡೆಸಿದ ದುಷ್ಕರ್ಮಿಗಳು

ದಾವಣಗೆರೆ: (Robbery)  ದಾವಣಗೆರೆಯಲ್ಲಿ ಬಟ್ಟೆ ವ್ಯಾಪಾರಿಯೊಬ್ಬರನ್ನು ಹಣಕಾಸಿನ ಮಾತುಕತೆ ನೆಪದಲ್ಲಿ ಕರೆದೊಯ್ದು, ಕೊಠಡಿಯೊಂದರಲ್ಲಿ ಬಂಧಿಸಿ 10...

ದಾವಣಗೆರೆರಾಜ್ಯ / ಕರ್ನಾಟಕ

IGP: ದಾವಣಗೆರೆ ಪೂರ್ವ ವಲಯ ಐಜಿಪಿಯಾಗಿ ಎನ್. ಸತೀಶ್ ಕುಮಾರ್ ವರ್ಗಾವಣೆ

ದಾವಣಗೆರೆ: (IGP) ಕರ್ನಾಟಕ ಸರ್ಕಾರವು ಐಪಿಎಸ್ ಅಧಿಕಾರಿಗಳ ವರ್ಗಾವಣೆ ಪ್ರಕ್ರಿಯೆಯನ್ನು ಕೈಗೊಂಡಿದ್ದು, ಹಿರಿಯ ಐಪಿಎಸ್ ಅಧಿಕಾರಿ...

ಅಪರಾಧರಾಜಕೀಯರಾಜ್ಯ / ಕರ್ನಾಟಕ

ED: ಕರ್ನಾಟಕ ಸಚಿವ ಸತೀಶ್ ಜಾರಕಿಹೊಳಿ ಆಸ್ತಿಗಳ ಮೇಲೆ ಇ.ಡಿ ದಾಳಿ: ಇ ಡಿ ಮಹತ್ವದ ಮಾಹಿತಿ ಬಿಡುಗಡೆ

ಬೆಂಗಳೂರು: (ED) ಕರ್ನಾಟಕದ ಲೋಕೋಪಯೋಗಿ (PWD) ಸಚಿವ ಸತೀಶ್ ಜಾರಕಿಹೊಳಿ ಹಾಗೂ ಅವರ ಆಪ್ತರಿಗೆ ಸೇರಿದ...

ದಾವಣಗೆರೆರಾಜ್ಯ / ಕರ್ನಾಟಕ

Lokayukta SP: ದಾವಣಗೆರೆ ನೂತನ ಲೋಕಾಯುಕ್ತ ಎಸ್‌ಪಿಯಾಗಿ ಆ್ಯಂಟನಿ ಜಾನ್ ಅಧಿಕಾರ ಸ್ವೀಕಾರ: ದೂರು ಸಲ್ಲಿಕೆಗೆ ಕರೆ

ದಾವಣಗೆರೆ: (Lokayukta SP) ದಾವಣಗೆರೆ ಜಿಲ್ಲೆಯ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾಗಿ (ಎಸ್‌ಪಿ) ಆ್ಯಂಟನಿ ಜಾನ್ ಜೆ.ಕೆ...