ದಾವಣಗೆರೆ

MLA: ಕುಡಿಯುವ ನೀರು ಮತ್ತು ಮೂಲಭೂತ ಸೌಲಭ್ಯಗಳಿಗೆ ಒತ್ತು ನೀಡಿ: ಶಾಸಕ ಸಮರ್ಥ್‌ ಶಾಮನೂರು.

Share
Share

ದಾವಣಗೆರೆ (MLA):  ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ  ಗ್ರಾಮಗಳಲ್ಲಿ ಕುಡಿಯುವ ನೀರು ಮತ್ತು ಮೂಲಭೂತ ಸೌಕರ್ಯಗಳಿಗೆ ಒತ್ತು ನೀಡಿ ಸಾರ್ವಜನಿಕರಿಂದ ಯಾವುದೇ ದೂರುಗಳು ಬರದಂತೆ ಅಧಿಕಾರಿಗಳು ಕಾರ್ಯನಿರ್ವಹಿಸುವಂತೆ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಸಮರ್ಥ್‌ ಶಾಮನೂರು ಮಲ್ಲಿಕಾರ್ಜುನ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅವರು ಇಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ಕಚೇರಿ ಅಮೃತ ಮಹೋತ್ಸವ ಸಭಾಂಗಣದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಕುಡಿಯುವ ನೀರು ಮತ್ತು ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.

 ದಕ್ಷಿಣ ವಿಧಾನಸಭಾ ಕ್ಷೇತ್ರದ ಹದಡಿ, ಮುದಹದಡಿ, ಕೈದಾಳೆ, ಕುಕ್ಕೆವಾಡ, ಕುರ್ಕಿ, ಬೆಳಗುರು, ಶಿರಮಗೊಂಡನಹಳ್ಳಿ ಮತ್ತು ಕನಗೊಂಡನಹಳ್ಳಿ ಗ್ರಾಮ ಪಂಚಾಯಿತಿಗಳಿಗೆ ಒಳಪಡುವ  ಗ್ರಾಮಗಳಲ್ಲಿ ಕಾಮಗಾರಿಗಳು, ಕುಡಿಯುವ ನೀರು ಸರಬರಾಜು, ರಸ್ತೆ, ಚರಂಡಿ,  ಸ್ಮಶಾಣ, ಸೇರಿದಂತೆ ಮೂಲಭೂತ ಸೌಲಭ್ಯಗಳ  ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು.

ಗ್ರಾಮೀಣ ಭಾಗಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದು, ‘ಜಲ ಜೀವನ್ ಮಿಷನ್’ (JJM) ಯೋಜನೆಯಡಿ ಕಾಮಗಾರಿಗಳು ಪೂರ್ಣಗೊಂಡಿದ್ದರೂ ಮನೆಗಳ ಮುಂದೆ ನಳಗಳಿಗೆ ನೀರು ಬರುತ್ತಿಲ್ಲ ಎಂಬ ದೂರುಗಳು ಕೇಳಿಬಂದಿವೆ. ಈ ಬಗ್ಗೆ ಅಧಿಕಾರಿಗಳು ತಕ್ಷಣ ಗಮನಹರಿಸಿ, ಹೊಸ ಬೋರ್‌ವೆಲ್‌ಗಳನ್ನು ಕೊರೆಸಲು ಹಾಗೂ ನೀರಿನ ಟ್ಯಾಂಕ್‌ಗಳ ವ್ಯವಸ್ಥೆಯನ್ನು ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕೈದಾಳ್ ಕ್ಯಾಂಪ್‌ನಲ್ಲಿ ಸ್ಮಶಾನ ಭೂಮಿಯ ಕೊರತೆಯ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಸ್ಥಳ ಪರಿಶೀಲನೆ ಹಾಗೂ ಜಾಗ ಗುರುತಿಸಲು ತಹಶೀಲ್ದಾರ್‌ ಅಶ್ವಥ್‌ ಅವರಿಗೆ ಸೂಚನೆ ನೀಡಿದರು.

 ನಗರ ಹಾಗೂ ಗ್ರಾಮೀಣ ಭಾಗದ ವಾರ್ಡ್‌ಗಳಲ್ಲಿ ಚರಂಡಿ ವ್ಯವಸ್ಥೆ ಮತ್ತು ಬೀದಿ ದೀಪಗಳ ಸಮಸ್ಯೆಗಳ ಕುರಿತು ಅಧಿಕಾರಿಗಳು ಪರಿಶೀಲನೆ ನಡೆಸಿದ್ದು ಇಂದು ಖುದ್ದು ಕೆಲವು ವಾರ್ಡ್‌ ಗಳಿಗೆ ಭೇಟಿ ನೀಡಿ ಸಾರ್ವಜನಿಕ ಸಮಸ್ಯೆಗಳನ್ನು ಆಲಿಸಲಾಗಿದೆ ಎಂದರು.

ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಣಾದಿಕಾರಿ ರಾಮ್‌ ಬೋವಿ ಅವರು ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನದ (NRLM) ಅಡಿಯಲ್ಲಿ ಸ್ವಸಹಾಯ ಗುಂಪುಗಳ ಮಹಿಳೆಯರಿಗೆ ಆರ್ಥಿಕ ನೆರವು ನೀಡಲಾಗುತ್ತಿದೆ. ಸ್ಥಳೀಯವಾಗಿ ಮಹಿಳೆಯರೇ ನಡೆಸುವ ‘ಅಕ್ಕ ಕ್ಯಾಫೆ’, ಎಣ್ಣೆ ಗಾಣ, ಹಪ್ಪಳ-ಸಂಡಿಗೆ ತಯಾರಿಕೆ ಮತ್ತು ಪಶುಸಂಗೋಪನೆಯಂತಹ ಸ್ವಯಂ ಉದ್ಯೋಗಗಳಿಗೆ ತರಬೇತಿ ಹಾಗೂ ಮಾರುಕಟ್ಟೆ ಸೌಲಭ್ಯ ಒದಗಿಸಲಾಗುತ್ತಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಯೋಜನೆಗಳಡಿ (ಬಸವ, ಅಂಬೇಡ್ಕರ್, ದೇವರಾಜ ಅರಸು ಹಾಗೂ ಪ್ರಧಾನಮಂತ್ರಿ ಆವಾಸ್ ಯೋಜನೆ) ಅರ್ಹ ಫಲಾನುಭವಿಗಳನ್ನು ಗ್ರಾಮ ಸಭೆಗಳ ಮೂಲಕ ಪಾರದರ್ಶಕವಾಗಿ ಆಯ್ಕೆ ಮಾಡಲಾಗುತ್ತಿದೆ.

 ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸುಮಾರು 1000 ಮನೆಗಳನ್ನು ಮಂಜೂರು ಮಾಡಲಾಗಿದ್ದು, ಈಗಾಗಲೇ ವಿವಿಧ ಹಂತಗಳಲ್ಲಿ ಕಾಮಗಾರಿ ಪ್ರಗತಿಯಲ್ಲಿದೆ.  ವಸತಿ ಯೋಜನೆಯಡಿ ಹಣವು ನೇರವಾಗಿ ಫಲಾನುಭವಿಗಳ ಖಾತೆಗೆ ಜಮೆಯಾಗುತ್ತಿದ್ದು, ಕಾಮಗಾರಿಯ ಹಂತಗಳನ್ನು ಆ್ಯಪ್ ಮೂಲಕ ಜಿಯೋ-ಟ್ಯಾಗ್ ಮಾಡಲಾಗುತ್ತಿದೆ.  ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಪ್ರತಿ ಕುಟುಂಬಕ್ಕೆ ವರ್ಷಕ್ಕೆ 100 ದಿನಗಳ ಉದ್ಯೋಗ ನೀಡಲಾಗುತ್ತಿದೆ. ಜುಲೈ 1 ರಿಂದ ಪ್ರಾರಂಭವಾಗಲಿರುವ ಹೊಸ ಅಭಿಯಾನದ ಮೂಲಕ ಹೆಚ್ಚಿನ ಜನರಿಗೆ ಕೆಲಸ ನೀಡಲು ಯೋಜಿಸಲಾಗಿದೆ ಎಂದು ಸಭೆಗೆ ಮಾಹಿತಿಯನ್ನು ನೀಡಿದರು.

ದಾವಣಗೆರೆ ತಹಶೀಲ್ದಾರ್‌ ಅಶ್ವಥ್‌ ಅವರು ಮಾತನಾಡಿ ಕಚೇರಿಗಳಲ್ಲಿ ಸಾರ್ವಜನಿಕರಿಗೆ ವಿಧವಾವೇತನ, ಆಹಾರ ಸಂರಕ್ಷಣೆ, ಕಂದಾಯ ಗ್ರಾಮ, ವಿಪತ್ತು ನಿರ್ವಹಣೆ, ಭೂ ಮಂಜೂರಾತಿ, ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ, ನಿವಾಸ ಪ್ರಮಾಣ ಪತ್ರ, ಮುಜರಾಯಿ ದೇವಸ್ಥಾನಗಳ ನಿರ್ವಹಣೆ,  ಹೊಸ ಕಂದಾಯ ಗ್ರಾಮಗಳನ್ನು ಗುರುತಿಸುವುದು ಸೇರಿದಂತೆ 74 ಸೌಲಭ್ಯಗಳನ್ನು ವಿತರಿಸಲಾಗುತ್ತಿದೆ.

ಭೂ ಸುರಕ್ಷಾ ಯೋಜನೆಯಡಿ 87 ಲಕ್ಷ ಪುಟಗಳನ್ನು ಡಿಜಿಟಲೀಕರಣ ಮಾಡಿ ದಾವಣಗೆರೆ ತಾಲ್ಲೂಕು ರಾಜ್ಯದಲ್ಲಿಯೇ 3 ನೇ ಸ್ಥಾನವನ್ನು ಪಡೆದಿದೆ, ಇದುವರೆವಿಗೂ 53000 ಪುಟಗಳ ಡಿಜಿಟಲ್ ಮಾದರಿ ದಾಖಲೆಗಳನ್ನು ಸಾರ್ವಜನಿಕರು ಪಡೆದಿರುತ್ತಾರೆ ಎಂದು ಸಭೆಗೆ ತಿಳಿಸಿದರು.

ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಮಮತ ಹೊಸ ಗೌಡರ್‌ ಹಾಗೂ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ಗ್ರಾಮ ಪಂಚಾಯತ್‌ಗಳ ಅಭಿವೃದ್ಧಿ ಅಧಿಕಾರಿಗಳು (PDO) ಉಪಸ್ಥಿತರಿದ್ದರು.

Share

Leave a comment

Leave a Reply

Your email address will not be published. Required fields are marked *

Don't Miss

ದಾವಣಗೆರೆರಾಜಕೀಯರಾಜ್ಯ / ಕರ್ನಾಟಕ

BSY: ಚಿತ್ರದುರ್ಗದಲ್ಲಿ ನಾಳೆ ‘ಬಿಎಸ್ ವೈ ಅಭಿಮಾನೋತ್ಸವ’ದ ಅಬ್ಬರ: ಅಮಿತ್ ಶಾ ಭಾಗಿ, ದಾವಣಗೆರೆಯಿಂದ ಹೊರಟ ಯಡಿಯೂರಪ್ಪ ಕುಟುಂಬ!

ದಾವಣಗೆರೆ/ಚಿತ್ರದುರ್ಗ: (BSY) ಕರ್ನಾಟಕ ರಾಜಕಾರಣದ ಧ್ರುವತಾರೆ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಸಾರ್ವಜನಿಕ ಜೀವನದ 50 ವರ್ಷಗಳ ಸುವರ್ಣ ಸಂಭ್ರಮದ "ಅಭಿಮಾನೋತ್ಸವ"ಕ್ಕೆ ಕೋಟೆ ನಾಡು ಚಿತ್ರದುರ್ಗ ಸಜ್ಜಾಗಿದೆ. ಮೇ 9ರ...

ಅಪರಾಧದಾವಣಗೆರೆ

Lokayukta: ದಾವಣಗೆರೆ ಪಾಲಿಕೆ ವಲಯ-1ರ ಮೇಲೆ ಲೋಕಾಯುಕ್ತ ದಾಳಿ: ಫೋನ್-ಪೇ ಮೂಲಕ ಲಂಚದ ಆರೋಪ, ದಾಖಲೆಗಳ ಪರಿಶೀಲನೆ

ದಾವಣಗೆರೆ: (Lokayukta) ಮಹಾನಗರ ಪಾಲಿಕೆ ವಲಯ-1ರ ಕಚೇರಿಯಲ್ಲಿ ನಡೆಯುತ್ತಿದ್ದ ಎನ್ನಲಾದ ಸಾಲು ಸಾಲು ಅಕ್ರಮಗಳ ಕುರಿತು ಬಂದ ದೂರುಗಳ ಹಿನ್ನೆಲೆಯಲ್ಲಿ, ಇಂದು ಮುಂಜಾನೆಯಿಂದಲೇ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ತಪಾಸಣೆ...

Related Articles
ದಾವಣಗೆರೆರಾಜ್ಯ / ಕರ್ನಾಟಕ

Lokayukta SP: ದಾವಣಗೆರೆ ನೂತನ ಲೋಕಾಯುಕ್ತ ಎಸ್‌ಪಿಯಾಗಿ ಆ್ಯಂಟನಿ ಜಾನ್ ಅಧಿಕಾರ ಸ್ವೀಕಾರ: ದೂರು ಸಲ್ಲಿಕೆಗೆ ಕರೆ

ದಾವಣಗೆರೆ: (Lokayukta SP) ದಾವಣಗೆರೆ ಜಿಲ್ಲೆಯ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾಗಿ (ಎಸ್‌ಪಿ) ಆ್ಯಂಟನಿ ಜಾನ್ ಜೆ.ಕೆ...

ದಾವಣಗೆರೆಅಪರಾಧರಾಜ್ಯ / ಕರ್ನಾಟಕ

Sand: ಹರಿಹರ ತುಂಗಭದ್ರಾ ನದಿ ಪಾತ್ರದಲ್ಲಿ ಭಾರಿ ಅಕ್ರಮ ಮರಳು ದಂಧೆ ಶಂಕೆ! ನಿಷೇಧಿತ ಯಂತ್ರಗಳು, ತೆಪ್ಪ ಬಳಸಿ ಮರಳು ಲೂಟಿ!

ಹರಿಹರ (Sand):ದಾವಣಗೆರೆ ಜಿಲ್ಲೆಯ ಹರಿಹರ ನಗರ ವ್ಯಾಪ್ತಿಯ ತುಂಗಭದ್ರಾ ನದಿಯಲ್ಲಿ ಕಾನೂನು ಬಾಹಿರವಾಗಿ ಮರಳು ಗಣಿಗಾರಿಕೆ...

ದಾವಣಗೆರೆ

DJ: ಗಣೇಶೋತ್ಸವ ಮೆರವಣಿಗೆಯಲ್ಲಿ ಡಿ.ಜೆ ಸಿಸ್ಟಂ ಬಳಕೆಗೆ ಕಟ್ಟುನಿಟ್ಟಿನ ನಿಯಮ: ಜಿಲ್ಲಾಧಿಕಾರಿ ಆದೇಶ

ದಾವಣಗೆರೆ: (DJ) ದಾವಣಗೆರೆ ಜಿಲ್ಲೆಯಾದ್ಯಂತ ದಿನಾಂಕ 14-09-2026 ರಿಂದ ಆರಂಭವಾಗುವ ಗಣೇಶ ಹಬ್ಬದ ಆಚರಣೆ ಹಾಗೂ...