ದಾವಣಗೆರೆ

Students: ಇಂಗ್ಲೆಂಡ್ ಪ್ರವಾಸ: ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ

Share
Share

ದಾವಣಗೆರೆ:(Students) ಇಂಗ್ಲೆಂಡನ ವೊಲ್ವರ್‌ಹ್ಯಾಂಪ್ಟನ್ ವಿಶ್ವವಿದ್ಯಾಲಯದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಸ್ನಾತಕ ಪದವಿಯ ಪ್ರತಿಭಾನ್ವಿತರು (ಸ್ಕೌಟ್-೦೨) ಅಂತರರಾಷ್ಟಿçಯ ಶೈಕ್ಷಣಿಕ ಕಾರ್ಯಕ್ರಮವನ್ನು ದಾವಣಗೆರೆ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು ಯಶಸ್ವಿಯಾಗಿ ಪೂರೈಸಿ ವಾಪಸ್ಸಾಗಿದ್ದಾರೆ.

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ದಾವಣಗೆರೆ ವಿಶ್ವವಿದ್ಯಾನಿಲಯ ಪ್ರತಿನಿದಿಸಿದ್ದ ವಿದ್ಯಾರ್ಥಿಗಳಾದ ಆಕರ್ಷ್ ರವಿಶಂಕರ್ ಸವಣೂರ, ಕೆ. ಐಶ್ವರ್ಯ ಲಕ್ಷ್ಮಿ, ಅಲಿಶಾ, ಅವಿಷ್ಕಾರ್ ವಸಂತ್ ಕುಮಾರ್ ಹಾಗೂ ನೋಡಲ್ ಅಧಿಕಾರಿಗಳಾಗಿ ಪ್ರೊ. ಡಾ. ಅಶೋಕ್ ಕುಮಾರ್  ಪಾಳೇದ ಅವರನ್ನು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಬಿ.ಇ. ರಂಗಸ್ವಾಮಿ ಸನ್ಮಾನಿಸಿ, ಅಭಿನಂದಿಸಿದರು. ಈ ಸಂದರ್ಭದಲ್ಲಿ ಕುಲಸಚಿವ ಎಸ್.ಬಿ.ಗಂಟಿ, ಶಿಕ್ಷಣ ನಿಕಾಯದ ಡೀನ್ ಪ್ರೊ.ಕೆ.ವೆಂಕಟೇಶ ಉಪಸ್ಥಿತರಿದ್ದರು.

ಇಂಗ್ಲೆಂಡ್ನ ವೊಲ್ವರ್‌ಹ್ಯಾಂಪ್ಟನ್ ವಿಶ್ವವಿದ್ಯಾಲಯದಲ್ಲಿ ಕಳೆದ ಜೂನ್ ೨೭ರಿಂದ ಜುಲೈ ೧೧ರವರೆಗೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ದಾವಣಗೆರೆ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು ಸುಸ್ಥಿರ ಅಭಿವೃದ್ಧಿ, ಕೃತಕ ಬುದ್ಧಿಮತ್ತೆ, ಆರೋಗ್ಯ ಸೇವೆ, ನಾಯಕತ್ವ, ಉದ್ಯಮಶೀಲತೆ, ಸ್ಮಾರ್ಟ್ ಸಿಟಿಗಳು, ನವೋದ್ಯಮ ಸೇರಿದಂತೆ ವಿವಿಧ ವಿಷಯಗಳಲ್ಲಿ ತರಬೇತಿ ಪಡೆದರು. ಇದೇ ಸಂದರ್ಭದಲ್ಲಿ ಇಂಗ್ಲೆಂಡ್‌ನ ಪ್ರತಿಷ್ಠಿತ ಆಕ್ಸ್ಫರ್ಡ್ ಮತ್ತು ಕೇಂಬ್ರಿಡ್ಜ್ ವಿಶ್ವವಿದ್ಯಾನಿಲಯಗಳಿಗೆ ಭೇಟಿ ನೀಡಿ ಶೈಕ್ಷಣಿಕ ಮಾಹಿತಿ ಪಡೆದರು.

ವಿದ್ಯಾರ್ಥಿಗಳ ಈ ಸಾಧನೆಯು ದಾವಣಗೆರೆ ವಿಶ್ವವಿದ್ಯಾಲಯಕ್ಕೆ ಹೆಮ್ಮೆಯ ವಿಷಯವಾಗಿದೆ. ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳಿಗೆ ಜಾಗತಿಕ ಮಟ್ಟದ ಅವಕಾಶಗಳು ಹೆಚ್ಚಿನ ಪ್ರಮಾಣದಲ್ಲಿ ಸಿಗುವ ಜೊತೆಗೆ ಅವರ ಪ್ರತಿಭೆಯನ್ನು ಬೆಳಗುವ ಕೆಲಸವಾಗಬೇಕು. ಶೈಕ್ಷಣಿಕವಾಗಿ, ಸಾಂಸ್ಕೃತಿಕವಾಗಿ ಮತ್ತು ಕ್ರೀಡಾ ಕ್ಷೇತ್ರಗಳಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳ ಉನ್ನತಿಗೆ ಆದ್ಯತೆ ನೀಡಲಾಗುವುದು. ಅದಕ್ಕೆ ಅಗತ್ಯವಿರುವ ಎಲ್ಲ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ಕುಲಪತಿ ಪ್ರೊ.ರಂಗಸ್ವಾಮಿ ಭರವಸೆ ನೀಡಿದರು.

Share

Leave a comment

Leave a Reply

Your email address will not be published. Required fields are marked *

Don't Miss

ದಾವಣಗೆರೆರಾಜಕೀಯರಾಜ್ಯ / ಕರ್ನಾಟಕ

BSY: ಚಿತ್ರದುರ್ಗದಲ್ಲಿ ನಾಳೆ ‘ಬಿಎಸ್ ವೈ ಅಭಿಮಾನೋತ್ಸವ’ದ ಅಬ್ಬರ: ಅಮಿತ್ ಶಾ ಭಾಗಿ, ದಾವಣಗೆರೆಯಿಂದ ಹೊರಟ ಯಡಿಯೂರಪ್ಪ ಕುಟುಂಬ!

ದಾವಣಗೆರೆ/ಚಿತ್ರದುರ್ಗ: (BSY) ಕರ್ನಾಟಕ ರಾಜಕಾರಣದ ಧ್ರುವತಾರೆ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಸಾರ್ವಜನಿಕ ಜೀವನದ 50 ವರ್ಷಗಳ ಸುವರ್ಣ ಸಂಭ್ರಮದ "ಅಭಿಮಾನೋತ್ಸವ"ಕ್ಕೆ ಕೋಟೆ ನಾಡು ಚಿತ್ರದುರ್ಗ ಸಜ್ಜಾಗಿದೆ. ಮೇ 9ರ...

ಅಪರಾಧದಾವಣಗೆರೆ

Lokayukta: ದಾವಣಗೆರೆ ಪಾಲಿಕೆ ವಲಯ-1ರ ಮೇಲೆ ಲೋಕಾಯುಕ್ತ ದಾಳಿ: ಫೋನ್-ಪೇ ಮೂಲಕ ಲಂಚದ ಆರೋಪ, ದಾಖಲೆಗಳ ಪರಿಶೀಲನೆ

ದಾವಣಗೆರೆ: (Lokayukta) ಮಹಾನಗರ ಪಾಲಿಕೆ ವಲಯ-1ರ ಕಚೇರಿಯಲ್ಲಿ ನಡೆಯುತ್ತಿದ್ದ ಎನ್ನಲಾದ ಸಾಲು ಸಾಲು ಅಕ್ರಮಗಳ ಕುರಿತು ಬಂದ ದೂರುಗಳ ಹಿನ್ನೆಲೆಯಲ್ಲಿ, ಇಂದು ಮುಂಜಾನೆಯಿಂದಲೇ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ತಪಾಸಣೆ...

Related Articles
ದಾವಣಗೆರೆರಾಜ್ಯ / ಕರ್ನಾಟಕ

Lokayukta SP: ದಾವಣಗೆರೆ ನೂತನ ಲೋಕಾಯುಕ್ತ ಎಸ್‌ಪಿಯಾಗಿ ಆ್ಯಂಟನಿ ಜಾನ್ ಅಧಿಕಾರ ಸ್ವೀಕಾರ: ದೂರು ಸಲ್ಲಿಕೆಗೆ ಕರೆ

ದಾವಣಗೆರೆ: (Lokayukta SP) ದಾವಣಗೆರೆ ಜಿಲ್ಲೆಯ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾಗಿ (ಎಸ್‌ಪಿ) ಆ್ಯಂಟನಿ ಜಾನ್ ಜೆ.ಕೆ...

ದಾವಣಗೆರೆಅಪರಾಧರಾಜ್ಯ / ಕರ್ನಾಟಕ

Sand: ಹರಿಹರ ತುಂಗಭದ್ರಾ ನದಿ ಪಾತ್ರದಲ್ಲಿ ಭಾರಿ ಅಕ್ರಮ ಮರಳು ದಂಧೆ ಶಂಕೆ! ನಿಷೇಧಿತ ಯಂತ್ರಗಳು, ತೆಪ್ಪ ಬಳಸಿ ಮರಳು ಲೂಟಿ!

ಹರಿಹರ (Sand):ದಾವಣಗೆರೆ ಜಿಲ್ಲೆಯ ಹರಿಹರ ನಗರ ವ್ಯಾಪ್ತಿಯ ತುಂಗಭದ್ರಾ ನದಿಯಲ್ಲಿ ಕಾನೂನು ಬಾಹಿರವಾಗಿ ಮರಳು ಗಣಿಗಾರಿಕೆ...

ದಾವಣಗೆರೆ

DJ: ಗಣೇಶೋತ್ಸವ ಮೆರವಣಿಗೆಯಲ್ಲಿ ಡಿ.ಜೆ ಸಿಸ್ಟಂ ಬಳಕೆಗೆ ಕಟ್ಟುನಿಟ್ಟಿನ ನಿಯಮ: ಜಿಲ್ಲಾಧಿಕಾರಿ ಆದೇಶ

ದಾವಣಗೆರೆ: (DJ) ದಾವಣಗೆರೆ ಜಿಲ್ಲೆಯಾದ್ಯಂತ ದಿನಾಂಕ 14-09-2026 ರಿಂದ ಆರಂಭವಾಗುವ ಗಣೇಶ ಹಬ್ಬದ ಆಚರಣೆ ಹಾಗೂ...