Homeಅಪರಾಧದಾವಣಗೆರೆ

PDS RICE: ಅಕ್ರಮ ಪಡಿತರ ಅಕ್ಕಿ ಸಾಗಾಣಿಕೆ ಜಾಲ ಪತ್ತೆ; ಲಾರಿ ಸಮೇತ ಚಾಲಕ ಬಂಧನ, 11.5 ಲಕ್ಷ ಮೌಲ್ಯದ ಸ್ವತ್ತು ಜಪ್ತಿ

Share
Share

ದಾವಣಗೆರೆ:(PDS RICE)  ಚನ್ನಗಿರಿ: ತಾಲ್ಲೂಕಿನ ಮೇಲಿನ ಬಸ್ ನಿಲ್ದಾಣದ ಬಳಿ ರಾಷ್ಟ್ರೀಯ ಹೆದ್ದಾರಿ-369ರಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿದ್ದ ಲಾರಿಯೊಂದರ ಮೇಲೆ ದಾಳಿ ನಡೆಸಿದ ಪೊಲೀಸರು, ಚಾಲಕನನ್ನು ಬಂಧಿಸಿ ಲಕ್ಷಾಂತರ ರೂಪಾಯಿ ಮೌಲ್ಯದ ಪಡಿತರ ಅಕ್ಕಿ ಹಾಗೂ ಲಾರಿಯನ್ನು ವಶಕ್ಕೆ ಪಡೆದಿದ್ದಾರೆ. ಸದರಿ ಲಾರಿ ಹಾಗೂ ಅಕ್ರಮ ಪಡಿತರ ಅಕ್ಕಿ ಹೊನ್ನಾಳಿಯ ಸೋಮಣ್ಣ (ಸೋಮಶೇಖರ) ಎಂಬುವವರಿಗೆ ಸೇರಿದ್ದು ಎನ್ನಲಾಗಿದೆ.

ಘಟನೆಯ ವಿವರ:
ದಾವಣಗೆರೆ ಎಎನ್‌ಟಿಎಫ್ (ANTF) ಘಟಕದ ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಶ್ರೀ ಸಾಗರ್ ಅತ್ತರ್ ವಾಲ್ ಅವರಿಗೆ ಬಂದ ಖಚಿತ ಮಾಹಿತಿ ಮೇರೆಗೆ, ದಾವಣಗೆರೆ ಜಿಲ್ಲಾ ಪೊಲೀಸ್ ಅಧೀಕ್ಷಕರ ಆದೇಶದಂತೆ ಸಿಬ್ಬಂದಿಗಳೊಂದಿಗೆ ಚನ್ನಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಲಾಯಿತು. ಆಗಸ್ಟ್ 21ರ ರಾತ್ರಿ 11:50ರ ಸುಮಾರಿಗೆ ಚನ್ನಗಿರಿ ನಗರದ ಮೇಲಿನ ಬಸ್ ನಿಲ್ದಾಣದ ಬಳಿ ಬರುತಿದ್ದ ಟಾಟಾ ಈಚರ್ ಲಾರಿಯನ್ನು ತಡೆದು ಪರಿಶೀಲಿಸಿದಾಗ ಅಕ್ರಮ ಪಡಿತರ ಅಕ್ಕಿ ಸಾಗಾಣಿಕೆ ಮಾಡುತ್ತಿರುವುದು ಬೆಳಕಿಗೆ ಬಂದಿದೆ.

ಆರೋಪಿ ಮತ್ತು ಜಪ್ತಿಯಾದ ಸ್ವತ್ತುಗಳ ವಿವರ:
ಆರೋಪಿಯ ಹೆಸರು: ಫೈರೋಜ್ ಅಹಮದ್ (25 ವರ್ಷ), ವೃತ್ತಿಯಲ್ಲಿ ಲಾರಿ ಚಾಲಕ, ವಾಸ: ಗೊಲ್ಲರಹಳ್ಳಿ ಗ್ರಾಮ, ಹೊನ್ನಾಳಿ ತಾಲ್ಲೂಕು. ಹಾಗೂ ಸೋಮಣ್ಣ..

ವಶಪಡಿಸಿಕೊಂಡ ಸ್ವತ್ತುಗಳು: 10,00,000 ರೂ. ಮೌಲ್ಯದ ಟಾಟಾ ಈಚರ್ ಲಾರಿ (ಸಂಖ್ಯೆ: KA-17-D-8172) ಹಾಗೂ ಲಾರಿಯಲ್ಲಿದ್ದ 1,50,000 ರೂ. ಮೌಲ್ಯದ ಪಡಿತರ ಅಕ್ಕಿ. ಒಟ್ಟು ಜಪ್ತಿಯಾದ ಮೌಲ್ಯ: ಸುಮಾರು 11,50,000 ರೂಪಾಯಿ.

ಈ ಕುರಿತು ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಅತ್ಯಗತ್ಯ ವಸ್ತುಗಳ ಕಾಯ್ದೆ (Essential Commodities Act, 1955) ಸೆಕ್ಷನ್ 3 ಮತ್ತು 7ರ ಅಡಿಯಲ್ಲಿ ಕ್ರಿಮಿನಲ್ ಪ್ರಕರಣ (ಅಪರಾಧ ಸಂಖ್ಯೆ: 497/2026) ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

ದಾವಣಗೆರೆ ಜಿಲ್ಲೆಯಲ್ಲಿ ಒಟ್ಟು 29 ಕ್ಕೂ ಹೆಚ್ಚು ಜನರು ಅಕ್ರಮ ಪಡಿತರ ಅಕ್ಕಿ, ರಾಗಿ, ಗೋಧಿ, ಸಂಗ್ರಹ, ಸಾಗಾಣಿಕೆ ಮಾಡುತ್ತಿರುವ ಮಾಹಿತಿಯನ್ನು ಆಹಾರ ಇಲಾಖೆಯ ಕಾರ್ಯದರ್ಶಿ ಬಹಿರಂಗ ಪಡಿಸಿದ್ದಾರೆ, ಆದರೂ ಆಹಾರ ಇಲಾಖೆ ಯಾವುದೇ ಕ್ರಮ ಕೈಗೊಳ್ಳಲು ವಿಫಲವಾದ ಬಗ್ಗೆ ಹಲವು ಅನುಮಾನ ವ್ಯಕ್ತಪಡಿಸುತ್ತಾರೆ ಸಾರ್ವಜನಿಕರು..

Share

Leave a comment

Leave a Reply

Your email address will not be published. Required fields are marked *

Don't Miss

ದಾವಣಗೆರೆ

Agriculture: ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ರೈತರಿಗೆ ಕೃಷಿ ಉಪಕರಣ ವಿತರಣೆ

ದಾವಣಗೆರೆ: (Agriculture ) ಕರ್ನಾಟಕ ರಾಜ್ಯ ಮನರೇಗಾ ಮತ್ತು ಇತರ ನಿರ್ಮಾಣ ಕಾರ್ಮಿಕರ ಸಂಘ ಹಾಗೂ ಭಾರತ ಕೃಷಿ ಅಭಿವೃದ್ಧಿ ಸಂಸ್ಥೆ ನಿಯಮಿತ ಪ್ರಾದೇಶಿಕ ಕಚೇರಿ ವತಿಯಿಂದ ಇಲ್ಲಿನ ನಗರದ ರೋಟರಿ...

ದಾವಣಗೆರೆರಾಜ್ಯ / ಕರ್ನಾಟಕ

Transfer:ದಾವಣಗೆರೆಯ ದಕ್ಷ ಅಧಿಕಾರಿ ಗಾಯತ್ರಿ ವರ್ಗಾವಣೆ: ಈ ಹಿಂದೆ ಕಾಂಗ್ರೆಸ್ ಮುಖಂಡನ ಪುತ್ರರ ಬಂಧಿಸಿ ಸುದ್ದಿಯಾಗಿದ್ದ ಇನ್ಸ್‌ಪೆಕ್ಟರ್

ದಾವಣಗೆರೆ: (Transfer) ಕರ್ನಾಟಕ ಪೊಲೀಸ್ ಇಲಾಖೆಯ ಇತ್ತೀಚಿನ ವರ್ಗಾವಣೆ ಆದೇಶದನ್ವಯ, ದಾವಣಗೆರೆ ನಗರದ ಬಡಾವಣೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಗಾಯತ್ರಿ ಅವರನ್ನು ವರ್ಗಾವಣೆ ಮಾಡಲಾಗಿದೆ. ಇವರನ್ನು ಬಳ್ಳಾರಿ ಜಿಲ್ಲೆಯ...

Related Articles
ದಾವಣಗೆರೆ

Gandhi Jayanthi: ಗಾಂಧೀಜಿಯವರ ತತ್ವ-ಆದರ್ಶಗಳು ಇಂದಿನ ಸಮಾಜಕ್ಕೆ ದಾರಿದೀಪ: ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ  

ದಾವಣಗೆರೆ:(Gandhi Jayanthi) ನಮ್ಮ ಭಾಷೆ ಮತ್ತು ತಾಯಿನಾಡು ನಮಗೆ ಎಷ್ಟು ಮುಖ್ಯವೋ, ಗಾಂಧೀಜಿಯವರು ಕೂಡ ಭಾರತದ...

ಅಪರಾಧದಾವಣಗೆರೆ

Robbery: ದಾವಣಗೆರೆಯಲ್ಲಿ ವ್ಯಾಪಾರಿ ಅಪಹರಿಸಿ 10 ಲಕ್ಷಕ್ಕೆ ಬೇಡಿಕೆ: ಕೃತ್ಯ ಎಸಗಿ ಮಾರಣಾಂತಿಕ ಹಲ್ಲೆ ನಡೆಸಿದ ದುಷ್ಕರ್ಮಿಗಳು

ದಾವಣಗೆರೆ: (Robbery)  ದಾವಣಗೆರೆಯಲ್ಲಿ ಬಟ್ಟೆ ವ್ಯಾಪಾರಿಯೊಬ್ಬರನ್ನು ಹಣಕಾಸಿನ ಮಾತುಕತೆ ನೆಪದಲ್ಲಿ ಕರೆದೊಯ್ದು, ಕೊಠಡಿಯೊಂದರಲ್ಲಿ ಬಂಧಿಸಿ 10...

ದಾವಣಗೆರೆರಾಜ್ಯ / ಕರ್ನಾಟಕ

IGP: ದಾವಣಗೆರೆ ಪೂರ್ವ ವಲಯ ಐಜಿಪಿಯಾಗಿ ಎನ್. ಸತೀಶ್ ಕುಮಾರ್ ವರ್ಗಾವಣೆ

ದಾವಣಗೆರೆ: (IGP) ಕರ್ನಾಟಕ ಸರ್ಕಾರವು ಐಪಿಎಸ್ ಅಧಿಕಾರಿಗಳ ವರ್ಗಾವಣೆ ಪ್ರಕ್ರಿಯೆಯನ್ನು ಕೈಗೊಂಡಿದ್ದು, ಹಿರಿಯ ಐಪಿಎಸ್ ಅಧಿಕಾರಿ...

ಅಪರಾಧರಾಜಕೀಯರಾಜ್ಯ / ಕರ್ನಾಟಕ

ED: ಕರ್ನಾಟಕ ಸಚಿವ ಸತೀಶ್ ಜಾರಕಿಹೊಳಿ ಆಸ್ತಿಗಳ ಮೇಲೆ ಇ.ಡಿ ದಾಳಿ: ಇ ಡಿ ಮಹತ್ವದ ಮಾಹಿತಿ ಬಿಡುಗಡೆ

ಬೆಂಗಳೂರು: (ED) ಕರ್ನಾಟಕದ ಲೋಕೋಪಯೋಗಿ (PWD) ಸಚಿವ ಸತೀಶ್ ಜಾರಕಿಹೊಳಿ ಹಾಗೂ ಅವರ ಆಪ್ತರಿಗೆ ಸೇರಿದ...