ಅಪರಾಧದಾವಣಗೆರೆ

Robbery: ದಾವಣಗೆರೆಯಲ್ಲಿ ವ್ಯಾಪಾರಿ ಅಪಹರಿಸಿ 10 ಲಕ್ಷಕ್ಕೆ ಬೇಡಿಕೆ: ಕೃತ್ಯ ಎಸಗಿ ಮಾರಣಾಂತಿಕ ಹಲ್ಲೆ ನಡೆಸಿದ ದುಷ್ಕರ್ಮಿಗಳು

Share
Share

ದಾವಣಗೆರೆ: (Robbery)  ದಾವಣಗೆರೆಯಲ್ಲಿ ಬಟ್ಟೆ ವ್ಯಾಪಾರಿಯೊಬ್ಬರನ್ನು ಹಣಕಾಸಿನ ಮಾತುಕತೆ ನೆಪದಲ್ಲಿ ಕರೆದೊಯ್ದು, ಕೊಠಡಿಯೊಂದರಲ್ಲಿ ಬಂಧಿಸಿ 10 ಲಕ್ಷ ರೂಪಾಯಿ ಹಣಕ್ಕೆ ಬೇಡಿಕೆಯಿಟ್ಟು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ.

ನಗರದ ಕುವೆಂಪು ನಗರ ನಿವಾಸಿ ಹಾಗೂ ಬಟ್ಟೆ ಅಂಗಡಿ ಮಾಲೀಕ ಹಲ್ಲೆಗೊಳಗಾದ ಯುವಕ. ಸೆಪ್ಟೆಂಬರ್ 9ರಂದು ಮಧ್ಯಾಹ್ನ ಪರಿಚಿತ ಸ್ನೇಹಿತ ಹಣಕಾಸಿನ ವಿಚಾರ ಮಾತನಾಡೋಣ ಎಂದು ಬೈಕಿನಲ್ಲಿ ಕರೆದುಕೊಂಡು ಹೋಗಿದ್ದನು. ಶಾಮನೂರು ರಸ್ತೆಯ ಬಾಪೂಜಿ ಸಮುದಾಯ ಭವನದ ಬಳಿ ತಲುಪಿದ ಬಳಿಕ, ಮತ್ತೊಬ್ಬ ವ್ಯಕ್ತಿಯ ಜೊತೆ ಆಂಜನೇಯ ಬಡಾವಣೆಯ 14ನೇ ಕ್ರಾಸ್‌ನಲ್ಲಿರುವ ಮನೆಯೊಂದಕ್ಕೆ ಕರೆದೊಯ್ಯಲಾಗಿತ್ತು.

ಮನೆಯೊಳಗೆ ಹೋಗುತ್ತಿದ್ದಂತೆಯೇ ಅಲ್ಲಿದ್ದ ನಾಲ್ವರು ವ್ಯಕ್ತಿಗಳು ಬಾಗಿಲು ಹಾಕಿ ಉದ್ಯಮಿ ಅವರ ಮೊಬೈಲ್ ಕಸಿದುಕೊಂಡಿದ್ದಾರೆ. ’10 ಲಕ್ಷ ರೂಪಾಯಿ ಹಣ ತರಿಸು, ಇಲ್ಲದಿದ್ದರೆ ಮುಗಿಸಿಬಿಡುತ್ತೇವೆ’ ಎಂದು ಬೆದರಿಕೆ ಹಾಕಿ, ಬಿಯರ್ ಬಾಟಲಿ ಹಾಗೂ ಮರದ ರಿಪೀಸ್‌ನಿಂದ ಬೆನ್ನು ಮತ್ತು ದೇಹದ ಭಾಗಗಳಿಗೆ ತೀವ್ರವಾಗಿ ಹಲ್ಲೆ ನಡೆಸಿದ್ದಾರೆ. ಉದ್ಯಮಿ ಅವರೊಂದಿಗಿದ್ದ ಇನ್ನೊಬ್ಬ ಯುವಕನ ಮೇಲೆಯೂ ಹಲ್ಲೆ ನಡೆಸಲಾಗಿದ್ದು, ಆತ ತಪ್ಪಿಸಿಕೊಂಡು ಓಡಿಹೋಗಿದ್ದಾನೆ.

ಸಂಜೆ 7 ಗಂಟೆಯ ಸುಮಾರಿಗೆ ಉದ್ಯಮಿ ಅವರ ಪೋಷಕರು ಮತ್ತು ಸ್ನೇಹಿತರು ಮೊಬೈಲ್ ಲೊಕೇಶನ್ ಆಧರಿಸಿ ಹುಡುಕಾಡುತ್ತಿರುವುದನ್ನು ಗಮನಿಸಿದ ದುಷ್ಕರ್ಮಿಗಳು, ಉದ್ಯಮಿಯ ಫೋನ್ ಮತ್ತು ಪರ್ಸ್ ಕಸಿದುಕೊಂಡು ಸ್ಥಳದಿಂದ ಕಾಲ್ಕಿತ್ತಿದ್ದಾರೆ.
ಗಾಯಗೊಂಡ ಉದ್ಯಮಿ ಅವರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ನಂತರ ವಿದ್ಯಾನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನನ್ವಯ ಸ್ನೇಹಿತ ಸೇರಿದಂತೆ ಐವರು ಅಜ್ಞಾತ ಆರೋಪಿಗಳ ವಿರುದ್ಧ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ದಾವಣಗೆರೆ ವಿದ್ಯಾನಗರ ಪೋಲೀಸರು ದೂರಿನ ಅನ್ವಯ ಹಲ್ಲೆ ನಡೆಸಿದವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದು ಹೆಚ್ಚಿನ ವಿವರ ಕಲೆ ಹಾಕುತ್ತಿದ್ದಾರೆ ಎನ್ನಲಾಗಿದೆ.

Share

Leave a comment

Leave a Reply

Your email address will not be published. Required fields are marked *

Don't Miss

ರಾಜ್ಯ / ಕರ್ನಾಟಕ

DYSP: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಭಾರಿ ಸರ್ಜರಿ: 74 ಡಿವೈಎಸ್‌ಪಿಗಳ ವರ್ಗಾವಣೆ – ಇಲ್ಲಿದೆ ಕಂಪ್ಲೀಟ್ ಲಿಸ್ಟ್

ಬೆಂಗಳೂರು:(DYSP) ರಾಜ್ಯ ಸರ್ಕಾರವು ಪೊಲೀಸ್ ಇಲಾಖೆಯಲ್ಲಿ ದೊಡ್ಡ ಮಟ್ಟದ ವರ್ಗಾವಣೆ ಪ್ರಕ್ರಿಯೆ ನಡೆಸಿದೆ. ಆಡಳಿತಾತ್ಮಕ ಹಿತದೃಷ್ಟಿಯಿಂದ ಕೂಡಲೇ ಜಾರಿಗೆ ಬರುವಂತೆ ಒಟ್ಟು 74 ಡಿವೈಎಸ್‌ಪಿ (ಸಿವಿಲ್) ಅಧಿಕಾರಿಗಳನ್ನು ವಿವಿಧ ಸ್ಥಳಗಳಿಗೆ ನಿಯೋಜಿಸಿ...

ದಾವಣಗೆರೆ

DCM: ಎಸ್.ಎಸ್. ಮಲ್ಲಿಕಾರ್ಜುನ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಿ: ಉದ್ಯಮಿ ಎನ್. ಬಕ್ಕೇಶ್ ಒತ್ತಾಯ

ದಾವಣಗೆರೆ:(DCM) ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು ಲಿಂಗಾಯತ ಸಮುದಾಯದ ಬೆಂಬಲ ಪ್ರಮುಖ ಕಾರಣವಾಗಿದ್ದು, ಮುಂಬರುವ ದಿನಗಳಲ್ಲಿ ಸಮುದಾಯದ ನಾಯಕ ಎಸ್.ಎಸ್. ಮಲ್ಲಿಕಾರ್ಜುನ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು...

Related Articles
ದಾವಣಗೆರೆರಾಜ್ಯ / ಕರ್ನಾಟಕ

IGP: ದಾವಣಗೆರೆ ಪೂರ್ವ ವಲಯ ಐಜಿಪಿಯಾಗಿ ಎನ್. ಸತೀಶ್ ಕುಮಾರ್ ವರ್ಗಾವಣೆ

ದಾವಣಗೆರೆ: (IGP) ಕರ್ನಾಟಕ ಸರ್ಕಾರವು ಐಪಿಎಸ್ ಅಧಿಕಾರಿಗಳ ವರ್ಗಾವಣೆ ಪ್ರಕ್ರಿಯೆಯನ್ನು ಕೈಗೊಂಡಿದ್ದು, ಹಿರಿಯ ಐಪಿಎಸ್ ಅಧಿಕಾರಿ...

ಅಪರಾಧರಾಜಕೀಯರಾಜ್ಯ / ಕರ್ನಾಟಕ

ED: ಕರ್ನಾಟಕ ಸಚಿವ ಸತೀಶ್ ಜಾರಕಿಹೊಳಿ ಆಸ್ತಿಗಳ ಮೇಲೆ ಇ.ಡಿ ದಾಳಿ: ಇ ಡಿ ಮಹತ್ವದ ಮಾಹಿತಿ ಬಿಡುಗಡೆ

ಬೆಂಗಳೂರು: (ED) ಕರ್ನಾಟಕದ ಲೋಕೋಪಯೋಗಿ (PWD) ಸಚಿವ ಸತೀಶ್ ಜಾರಕಿಹೊಳಿ ಹಾಗೂ ಅವರ ಆಪ್ತರಿಗೆ ಸೇರಿದ...

ದಾವಣಗೆರೆರಾಜ್ಯ / ಕರ್ನಾಟಕ

Lokayukta SP: ದಾವಣಗೆರೆ ನೂತನ ಲೋಕಾಯುಕ್ತ ಎಸ್‌ಪಿಯಾಗಿ ಆ್ಯಂಟನಿ ಜಾನ್ ಅಧಿಕಾರ ಸ್ವೀಕಾರ: ದೂರು ಸಲ್ಲಿಕೆಗೆ ಕರೆ

ದಾವಣಗೆರೆ: (Lokayukta SP) ದಾವಣಗೆರೆ ಜಿಲ್ಲೆಯ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾಗಿ (ಎಸ್‌ಪಿ) ಆ್ಯಂಟನಿ ಜಾನ್ ಜೆ.ಕೆ...