ಅಗ್ನಿ ಅವಘಡ: ನಾಲ್ವರಿಗೆ ಗಾಯ
ಮಹರಾಷ್ಟ್ರ: ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ನಾಲ್ವರು ಕಾರ್ಮಿಕರು ಗಾಯಗೊಂಡಿರುವ ಘಟನೆ ಮಹರಾಷ್ಟ್ರದ ಠಾಣೆ ಜಿಲ್ಲೆಯಲ್ಲಿ ನಡೆದಿದೆ.
ಮೂವರ ಪರಿಸ್ಥಿತಿ ಸ್ಥಿರವಾಗಿದೆ. ಮತ್ತೊಬ್ಬ ಕಾರ್ಮಿಕನ ದೇಹವು ಶೇ 15ರಿಂದ 30ರಷ್ಟು ಸುಟ್ಟುಹೋಗಿದೆ. ಅಗ್ನಿ ಅವಘಡಕ್ಕೆ ಕಾರಣವೇನು ಎಂಬುದರ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬದ್ಲಾಪುರದ ಮಹಾರಾಷ್ಟ್ರ ಕೈಗಾರಿಕಾ ಅಭಿವೃದ್ಧಿ ನಿಗಮದಲ್ಲಿ (ಎಂಐಡಿಸಿ) ಮಧ್ಯಾಹ್ನ 12.50ಕ್ಕೆ ಬೆಂಕಿ ಹೊತ್ತಿಕೊಂಡಿದೆ. ಬೆಂಕಿ ನಂದಿಸಲು ಕುಲ್ಗಾಂವ್ ಪುರಸಭೆ ಹಾಗೂ ಆನಂದ್ನಗರ ಎಂಐಡಿಸಿಯ ನಾಲ್ಕು ಅಗ್ನಿ ಶಾಮಕ ದಳ ತಂಡಗಳನ್ನು ನಿಯೋಜಿಸಲಾಗಿತ್ತು.