ಫೈಟರ್ ರವಿಗೆ ಕೈ ಮುಗಿದ ಪ್ರಧಾನಿ – ಕಾಂಗ್ರೆಸ್ ವಾಗ್ದಾಳಿ

Fighter Ravi is done with Prime Minister - Congress lashed out

ಫೈಟರ್ ರವಿಗೆ ಕೈ ಮುಗಿದ ಪ್ರಧಾನಿ - ಕಾಂಗ್ರೆಸ್ ವಾಗ್ದಾಳಿ

ಬೆಂಗಳೂರು: ನಾಗಮಂಗಲ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಫೈಟರ್ ರವಿ (ಮಲ್ಲಿಕಾರ್ಜುನ್) ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರು ಪರಸ್ಪರ ಕೈ ಮುಗಿದಿರುವ ಚಿತ್ರ ಸಾಮಾಜಿಕ ಜಾಲ ತಾಣದಲ್ಲಿ ಹರಿದಾಡುತ್ತಿದೆ.

ಈ ವಿಚಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿಅವರನ್ನು ತೀವ್ರವಾಗಿ ಟೀಕಿಸಿರುವ ಕಾಂಗ್ರೆಸ್, ಮೋದಿ ಅವರಿಂದ ಪ್ರಧಾನಿ ಹುದ್ದೆಗೆ ಕಳಂಕ ಅಂಟಿದೆ ಎಂದು ಟೀಕಿಸಿದೆ.

ಫೈಟರ್‌ ರವಿ ಅವರನ್ನು ರೌಡಿ ಶೀಟರ್‌  ಎಂದು ಕಾಂಗ್ರೆಸ್‌ ಆರೋಪಿಸುವ ಕಾಂಗ್ರೆಸ್, ಅವರಿಗೆ ಕೈ ಮುಗಿದಿರುವ ಪ್ರಧಾನಿ ಹಾಗೂ ಭೇಟಿಗೆ ಅವಕಾಶ ನೀಡಿದ ಬಿಜೆಪಿ ಮುಖಂಡರ ವಿರುದ್ಧ ವಾಗ್ದಾಳಿ ನಡೆಸಿದೆ.

ಮಂಡ್ಯ ಮತ್ತು ಧಾರವಾಡದ ಕಾರ್ಯಕ್ರಮಗಳಿಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಕರ್ನಾಟಕಕ್ಕೆ ಆಗಮಿಸಿದ್ದರು. ಮಂಡ್ಯದಲ್ಲಿ ಆಯೋಜಿಸಿದ್ದ ಬೆಂಗಳೂರು–ಮೈಸೂರು ರಾಷ್ಟ್ರೀಯ ಹೆದ್ದಾರಿ ಉದ್ಘಾಟನೆಗೆಂದು ಮೈಸೂರಿಗೆ ಬಂದಿಳಿದಿದ್ದ ನರೇಂದ್ರ ಮೋದಿ ಅವರನ್ನು ಬರಮಾಡಿಕೊಂಡ ಬಿಜೆಪಿ ನಾಯಕರ ನಿಯೋಗದಲ್ಲಿ ಫೈಟರ್‌ ರವಿ ಎಂಬುವವರು ಇದ್ದರು ಎನ್ನಲಾಗಿದ್ದು, ಈ ಚಿತ್ರವನ್ನು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ.

ಜಗತ್ತಿನಲ್ಲಿಯೇ ಬಿಜೆಪಿಯಂತಹ ನಿರ್ಲಜ್ಜ ರಾಜಕೀಯ ಪಕ್ಷ ಬೇರೆ ಇರಲು ಸಾಧ್ಯವೇ ಇಲ್ಲ. ಫೈಟರ್ ರವಿ ಎಂಬ ರೌಡಿ ಶೀಟರ್ ಎದುರು ಕೈಮುಗಿದು ನಿಂತ ನರೇಂದ್ರ ಮೋದಿ ಅವರಿಂದ ಪ್ರಧಾನಿ ಹುದ್ದೆಗೆ ಕಳಂಕ ಅಂಟಿದೆ. ರೌಡಿಗಳನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ ಎಂದ ಬಿಜೆಪಿ, ರೌಡಿಯನ್ನು ಪ್ರಧಾನಿ ಎದುರು ನಿಲ್ಲಿಸಿದ್ದು ನಾಚಿಕೆಗೇಡು’ ಎಂದು ಕಾಂಗ್ರೆಸ್ ಕಿಡಿ ಕಾರಿದೆ.

ಕಳೆದೆರಡು ವರ್ಷಗಳಿಂದ ಮಂಡ್ಯದ ನಾಗಮಂಗಲ ವಿಧಾನಸಭಾ ಕ್ಷೇತ್ರದಲ್ಲಿ ಸಕ್ರಿಯವಾಗಿರುವ ಮಲ್ಲಿಕಾರ್ಜುನ್‌ ಅಲಿಯಾಸ್‌ ಫೈಟರ್‌ ರವಿ ಎಂಬುವವರು 2022ರ ನವೆಂಬರ್‌ 28ರಂದು ಸಚಿವ ಅಶ್ವತ್ಥ ನಾರಾಯಣ, ನಾರಾಯಣಗೌಡ, ಗೋಪಾಲಯ್ಯ ಅವರ ಸಮ್ಮುಖದಲ್ಲಿ ಮಂಡ್ಯದಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದರು. ಇವರೊಂದಿಗೆ ಸುಮಲತಾ ಅವರ ಬೆಂಬಲಿಗ ಎನ್ನಲಾದ ಸಚ್ಚಿದಾನಂದ ಅವರು ಬಿಜೆಪಿ ಸೇರಿದ್ದರು. ಸರ್ಕಾರಿ ಶಾಲೆಗಳಿಗೆ ಶುದ್ಧ ಕುಡಿಯುವ ನೀರು ಸೇರಿದಂತೆ ಹಲವು ಸೌಲಭ್ಯ ಒದಗಿಸಿರುವ ಫೈಟರ್‌ ರವಿ ನಾಗಮಂಗಲ ಕ್ಷೇತ್ರದ ಬಿಜೆಪಿ ಟಿಕೆಟ್‌ ಆಕಾಂಕ್ಷಿ.

Leave a Reply

Your email address will not be published. Required fields are marked *

error: Content is protected !!