ಗಣರಾಜ್ಯೋತ್ಸವ ದಿನ ಅಂಬೇಡ್ಕರ್ ಭಾವಚಿತ್ರ ಇಡದ ಹಾಸ್ಟೆಲ್ ವಾರ್ಡನ್ ಕೆ.ಸಿ. ಸುಧಾ ಅಮಾನತು

Hostel warden K.C. who did not put up Ambedkar's portrait on Republic Day. Sudha suspension

ಗಣರಾಜ್ಯೋತ್ಸವ ದಿನ ಅಂಬೇಡ್ಕರ್ ಭಾವಚಿತ್ರ ಇಡದ ಹಾಸ್ಟೆಲ್

ದಾವಣಗೆರೆ: ಕಳೆದ ಜನವರಿ 26ರಂದು ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಡಾ.ಬಿ. ಆರ್. ಅಂಬೇಡ್ಕರ್ ಅವರ ಭಾವಚಿತ್ರವನ್ನು ಧ್ವಜಸ್ತಂದ ಹತ್ತಿರ ಇಡದೇ ಕರ್ತವ್ಯ ಲೋಪವೆಸಗಿ ರಾಷ್ಟ್ರೀಯ ಹಬ್ಬಕ್ಕೆ ಅಗೌರವ ಉಂಟು ಮಾಡಿದ ಹಿನ್ನೆಲೆಯಲ್ಲಿ ದಾವಣಗೆರೆ ಬಿಐಇಟಿ ರಸ್ತೆಯ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದ ವಾರ್ಡನ್ ಕೆ.ಸಿ. ಸುಧಾ ಅವರನ್ನು ಅಮಾನತು ಮಾಡಲಾಗಿದೆ.
ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಶಿಸ್ತು ಪ್ರಾಧಿಕಾರಿಗಳೂ ಆದ ಡಾ. ಎ.ಚನ್ನಪ್ಪ ಅವರು ಕಳೆದ ಮಾರ್ಚ್ 3ರಂದು ಅಮಾನತ್ತು ಮಾಡಿ ಆದೇಶಿಸಿದ್ದಾರೆ.
ಗಣರಾಜ್ಯೋತ್ಸವ ದಿನದಂದು ಡಾ. ಬಿ.ಆರ್ ಅಂಬೇಡ್ಕರ್ ಭಾವಚಿತ್ರ ಇಡದೇ ಅಕ್ಷಮ್ಯ ಅಪರಾಧವೆಸಗಿ, ಅಧಿಕಾರ ದರ್ಪ ತೋರುತ್ತಿರುವ ವಾರ್ಡನ್ ಸುಧಾ ಅವರನ್ನು ಕೂಡಲೇ ಸೇವೆಯಿಂದ ಅಮಾನತ್ತುಗೊಳಿಸುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ) ಜಿಲ್ಲಾ ಸಂಚಾಲಕ ಕುಂದುವಾಡ ಮಂಜುನಾಥ್ ಆಗ್ರಹಿಸಿದ್ದರು.


ಜನವರಿ 26 ರಂದು ಗಣರಾಜ್ಯೋತ್ಸವ ಸಂದರ್ಭದಲ್ಲಿ ಡಾ.ಬಿ.ಆರ್ ಅಂಬೇಡ್ಕರ್‌ರವರ ಭಾವಚಿತ್ರ ಇರಿಸದೇ ಕರ್ತವ್ಯಲೋಪ ಎಸಗಿರುವ ವಾರ್ಡನ್ ಸುಧಾರವರ ಮೇಲೆ ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ಈವರೆಗೂ ಯಾವುದೇ ಕ್ರಮ ಕೈಗೊಳ್ಳದಿರುವುದು ಅವರು ತೀವ್ರವಾಗಿ ಖಂಡಿಸಿದ್ದರು.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!