ಗಣಿ ನಾಡಲ್ಲಿ ಬಿಜೆಪಿ ಶಕ್ತಿ ಪ್ರದರ್ಶನ.. ಈ ಚುನಾವಣೆ ದೇಶಕ್ಕೆ ಸೆಮಿಫೈನಲ್ ಎಂದ ನಾಯಕರು

ಗಣಿ ನಾಡಲ್ಲಿ ಬಿಜೆಪಿ ಶಕ್ತಿ ಪ್ರದರ್ಶನ.. ಈ ಚುನಾವಣೆ ದೇಶಕ್ಕೆ ಸೆಮಿಫೈನಲ್ ಎಂದ ನಾಯಕರು
ಬೆಂಗಳೂರು: ಕರ್ನಾಟಕದ ವಿಧಾನಸಭಾ ಚುನಾವಣೆ ಸೆಮಿಫೈನಲ್ ಇದ್ದಂತೆ. ಈ ಚುನಾವಣೆಯಲ್ಲಿ ಜನತೆ ಬಿಜೆಪಿಯನ್ನು ಗೆಲ್ಲಿಸಿ, ಮತ್ತೊಮ್ಮೆ ನರೇಂದ್ರ ಮೋದಿಜಿ ಅವರನ್ನು ಪ್ರಧಾನಿಯನ್ನಾಗಿ ಮಾಡುವ ಸಂಕಲ್ಪ ಮಾಡಬೇಕು ಎಂದು ಅಸ್ಸಾಂ ಮುಖ್ಯಮಂತ್ರಿ ಡಾ. ಹಿಮಂತ ಬಿಸ್ವ ಶರ್ಮ ಅವರು ತಿಳಿಸಿದ್ದಾರೆ.
ಬಳ್ಳಾರಿ ಜಿಲ್ಲೆಯ ಕಂಪ್ಲಿ ಮತಕ್ಷೇತ್ರದ ಕುರುಗೋಡಿನಲ್ಲಿ ರೋಡ್ ಶೋದಲ್ಲಿ ಅವರು ಮಾತನಾಡಿದರು. ಕರ್ನಾಟಕವು ಅಭಿವೃದ್ಧಿ ಪಥದಲ್ಲಿ ಸಾಗಲು ಡಬಲ್ ಎಂಜಿನ್ ಸರಕಾರ ಅಗತ್ಯ. ಈಚೆಗೆ ನಡೆದ ಗುಜರಾತ್, ಈಶಾನ್ಯ ರಾಜ್ಯಗಳ ಚುನಾವಣೆಯಲ್ಲಿ ಜನತೆ ಬಿಜೆಪಿಯನ್ನು ಗೆಲ್ಲಿಸಿದ್ದಾರೆ. ರಾಜ್ಯವು ಸಮಗ್ರ ಅಭಿವೃದ್ಧಿ ಹೊಂದಲು ಬಿಜೆಪಿಯನ್ನು ಬೆಂಬಲಿಸಿ ಗೆಲ್ಲಿಸಬೇಕು ಎಂದು ಮನವಿ ಮಾಡಿದರು.

ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಜಿಲ್ಲಾ ಉಸ್ತುವಾರಿ ಸಚಿವ ಶ್ರೀರಾಮುಲು, ಸಂಸದ ವೈ.ದೇವೇಂದ್ರಪ್ಪ, ವಿಧಾನಪರಿಷತ್ ಸದಸ್ಯ ವೈ.ಎಂ.ಸತೀಶ್, ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ಕರ್ನಾಟಕ ರಾಜ್ಯ ಜವಳಿ ಮೂಲ ಸೌಲಭ್ಯ ಅಭಿವೃದ್ಧಿ ನಿಗಮ ಅಧ್ಯಕ್ಷ ಗುತ್ತಿಗನೂರು ವಿರುಪಾಕ್ಷಗೌಡ, ಬಳ್ಳಾರಿ ವಿಭಾಗದ ಪ್ರಭಾರಿ ಸಿದ್ದೇಶ್ ಯಾದವ್, ಸಹ-ಪ್ರಭಾರಿ ಚಂದ್ರಶೇಖರ್ ಪಾಟೀಲ್ ಹಲಗೇರಿ, ಬಳ್ಳಾರಿ ಜಿಲ್ಲಾಧ್ಯಕ್ಷ ಗೋನಾಳ್ ಮುರಹರಗೌಡ, ಮಾಜಿ ಸಂಸದೆ ಶ್ರೀಮತಿ ಶಾಂತಾ, ಮಾಜಿ ಶಾಸಕ ಸುರೇಶ್ ಬಾಬು, ಬಳ್ಳಾರಿ ಜಿಲ್ಲೆಯ ಸ್ಥಳೀಯ ನಾಯಕರು ಇದ್ದರು. ಸಾವಿರಾರು ಸಂಖ್ಯೆಯಲ್ಲಿ ಸಾರ್ವಜನಿಕರು ರೋಡ್ ಷೋದಲ್ಲಿ ಭಾಗವಹಿಸಿದ್ದರು.

 
                         
                       
                       
                       
                       
                      