ಧಾರ್ಮಿಕ ಭಾವನೆಗಳಿಗೆ ಧಕ್ಕೆ: ನಟ ಚೇತನ್ ಬಂಧನ

ಬೆಂಗಳೂರು: ಉರಿಗೌಡ–ನಂಜೇಗೌಡ ವಿಚಾರದಲ್ಲಿ ಹಿಂದೂ ಧರ್ಮದ ಬಗ್ಗೆ ನಟ ಚೇತನ್ ಇತ್ತೀಚೆಗೆ ಟ್ವೀಟ್ ಮಾಡಿಪುವ ನಟ ಚೇತನ್ ಅವರನ್ನು ಬಂಧಿಸಲಾಗಿದೆ.
ಅವಹೇಳನಕಾರಿ ಟ್ವೀಟ್ ಮಾಡಿ ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪದಡಿ ನಟ ಚೇತನ್ ಅವರನ್ನು ಶೇಷಾದ್ರಿಪುರ ಪೊಲೀಸರು ಮಂಗಳವಾರ ಬೆಳಿಗ್ಗೆ ಬಂಧಿಸಿದ್ದಾರೆ.
ಉರಿಗೌಡ–ನಂಜೇಗೌಡ ವಿಚಾರದಲ್ಲಿ ಹಿಂದೂ ಧರ್ಮದ ಬಗ್ಗೆ ನಟ ಚೇತನ್ ಇತ್ತೀಚೆಗೆ ಟ್ವೀಟ್ ಮಾಡಿದ್ದರು. ಇದರಿಂದ ಧಾರ್ಮಿಕ ಭಾವನೆಗೆ ಧಕ್ಕೆ ಆಗಿದೆ ಎಂಬುದಾಗಿ ಶಿವಕುಮಾರ್ ಎಂಬುವವರು ದೂರು ನೀಡಿದ್ದರು.
ದೂರಿನ ಅನ್ವಯ ಎಫ್ಐಆರ್ ದಾಖಲಿಸಿಕೊಳ್ಳಲಾಗಿತ್ತು. ಮಂಗಳವಾರ ಬೆಳಿಗ್ಗೆ ಮನೆಯಲ್ಲಿ ಚೇತನ್ ಅವರನ್ನು ಬಂಧಿಸಲಾಗಿದೆ
ಸದ್ಯ ಚೇತನ್ ಅವರ ಜಾಮೀನು ಅರ್ಜಿ ವಿಚಾರಣೆ ಮುಂದೂಡಿರುವ ನಗರದ 32ನೇ ಎಸಿಎಂಎಂ ಕೋರ್ಟ್ ಚೇತನ್ ಅವರನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.