ನಾನು ಸಾವರ್ಕರ್ ಅಲ್ಲ, ಕ್ಷಮೆ ಕೇಳುವುದಿಲ್ಲ: ರಾಹುಲ್ ಗಾಂಧಿ
ನವದೆಹಲಿ: ನಾನೇನು ಸಾವರ್ಕರ್ ಆಲ್ಲ. ಹಾಗಾಗಿ ನಾನು ಎಂದಿಗೂ ಕ್ಷಣೆ ಕೇಳುವುದಿಲ್ಲ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ಬ್ರಿಟನ್ ಪ್ರವಾಸದ ವೇಳೆ ದೇಶದ ಪ್ರಜಾಪ್ರಭತ್ವಕ್ಕೆ ರಾಹುಲ್ ಗಾಂಧಿ ಅವಹೇಳನ ಮಾಡಿದ್ದಾರೆ. ಕ್ಷಮೆ ಕೇಳಬೇಕು ಎಂದು ಬಿಜೆಪಿ ಒತ್ತಾಯಿಸುತ್ತಿರುವ ಕುರಿತು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಗಾಂಧಿ ಎಂದಿಗೂ ಕ್ಷಮೆ ಕೇಳುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಕ್ರಿಮಿನಲ್ ಮಾನಹಾನಿ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಲೋಕಸಭೆ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿದ್ದು, ಎಐಸಿಸಿ ಪ್ರಧಾನ ಕಚೇರಿಯಲ್ಲಿ ಶನಿವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ರಾಹುಲ್, ಶಿಕ್ಷೆ ವಿಧಿಸುವುದು ಅಥವಾ ಅನರ್ಹಗೊಳಿಸುವುದರಿಂದ ತಮ್ಮ ಬಾಯಿ ಮುಚ್ಚಿಸಲು ಸಾಧ್ಯವಿಲ್ಲ. ಪ್ರಶ್ನಿಸುವುದನ್ನು ಮುಂದುವರಿಸುತ್ತೇನೆ ಎಂದು ಹೇಳಿದ್ದಾರೆ.
ದೇಶದ ಆಡಳಿತದಲ್ಲಿ ವಿದೇಶಗಳ ಮಧ್ಯಪ್ರವೇಶಕ್ಕೆ ನಾನು ಕರೆ ನೀಡಿದ್ದೇನೆ ಎಂದು ಮಂತ್ರಿಗಳು ಸುಳ್ಳು ಹೇಳಿದ್ದಾರೆ. ನಾನು ಅಂತಹ ಕೆಲಸ ಎಂದಿಗೂ ಮಾಡಿಲ್ಲ. ಅದಾನಿ ಸಮೂಹದ ವಿಚಾರದ ಬಗ್ಗೆ ಪ್ರಶ್ನಿಸುವುದನ್ನು ಮುಂದುವರಿಸುತ್ತೇನೆ ಎಂದವರು ಹೇಳಿದರು.