ಮೇ 10 ಕ್ಕೆ ಒಂದೇ ಹಂತದಲ್ಲಿ ಚುನಾವಣೆ, ಮೇ 13 ರಂದು ಮತ ಎಣಿಕೆ ಮತ್ತು ಫಲಿತಾಂಶ

ದಾವಣಗೆರೆ: ರಾಜ್ಯ ವಿಧಾನಸಭೆಯ ಚುನಾವಣೆ ಮೇ 10 ಕ್ಕೆ ನಿಗದಿಯಾಗಿದೆ. ಮತದಾನ ಒಂದೇ ಹಂತದಲ್ಲಿ ನಡೆಯಲಿದೆ.
ಮೇ 13 ರಂದು ಮತ ಎಣಿಕೆ ನಡೆಯಲಿದ್ದು, ಅಂದೇ ಫಲಿತಾಂಶ ಹೊರಬೀಳಲಿದೆ.
ಏಪ್ರಿಲ್ 13 ರಂದು ಚುನಾವಣೆಗೆ ಅಧಿಸೂಚನೆ ಹೊರಡಿಸಲಾಗುವುದು.
ಏಪ್ರಿಲ್ 20 ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನ ಹಾಗೂ ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ರಂದು ಕೊನೆಯ ದಿನ ಎಂದು ಭಾರತೀಯ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು ತಿಳಿಸಿದ್ದಾರೆ.