ಆಲೂರು ಹಟ್ಟಿಯಲ್ಲಿ ಕೊರೋನಾ ಲಸಿಕಾ ಜನಜಾಗೃತಿ

ದಾವಣಗೆರೆ. ಜು.೬;ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯಾಧ್ಯಕ್ಷರ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಪರಿಶಿಷ್ಟ ಜಾತಿಯ ರಾಜ್ಯಾಧ್ಯಕ್ಷ ಎಫ್.ಹೆಚ್. ಜಕ್ಕಪ್ಪನವರ್ ಆಶಯದಂತೆ ಮಾಯಕೊಂಡ ಕ್ಷೇತ್ರದ ಆಲೂರುಹಟ್ಟಿಯಲ್ಲಿ ಕೊರೋನಾ ಲಸಿಕೆಯನ್ನು ಹಾಕಿಸಿಕೊಳ್ಳಲು ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಬಿ.ಹೆಚ್. ವೀರಭದ್ರಪ್ಪ ಕಾರ್ಯಕ್ರಮವನ್ನು ಉದ್ಘಾಟಿಸುವ ಮೂಲಕ ಚಾಲನೆ ನೀಡಿ, ತಾಂಡದ ಜನರೆಲ್ಲರೂ ಯಾವುದೇ ಭಯಪಡದೇ ಕೊರೋನಾ ಲಸಿಕೆ ಹಾಕಿಸಿಕೊಂಡು ಆರೋಗ್ಯ ಕಾಪಾಡಿಕೊಳ್ಳಲು ಕರೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪರಿಶಿಷ್ಟ ಜಾತಿ ರಾಜ್ಯ ಉಪಾಧ್ಯಕ್ಷ ನಾಗರಾಜ್ ನಾಯ್ಕ್ ವಹಿಸಿದ್ದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿಯ ಉಪಾಧ್ಯಕ್ಷರಾದ ಡಾ. ತುಳಸಿನಾಯ್ಕ ಈ ಸಂದರ್ಭದಲ್ಲಿ ಕೊರೋನದ ಬಗ್ಗೆ ಜನರಿಗಿರುವ ತಪ್ಪು ಅಭಿಪ್ರಾಯಗಳ ಬಗ್ಗೆ ಸೂಕ್ತ ಮಾಹಿತಿ ನೀಡಿದರು.
ಜಿಲ್ಲಾ ಪಂಚಾಯತ್ ಸದಸ್ಯರಾದ ಬಸವಂತಪ್ಪ ಲಸಿಕೆಯ ಬಗ್ಗೆ ಜನಜಾಗೃತಿ ಮೂಡಿಸಿದರು. ಜಿಲ್ಲಾ ಕಾಂಗ್ರೆಸ್ ಅಸಂಘಟಿತ ಅಧ್ಕಕ್ಷರಾದಂತಹ ನಂಜನಾಯ್ಕ್
ಲಸಿಕೆ ಬಗ್ಗೆ ಜನರಿಗೆ ತಿಳಿ ಹೇಳಿದರು.
ಮಾಯಕೊಂಡ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬಿ.ಟಿ. ಹನುಮಂತಪ್ಪನವರು, ಈ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮುಖಂಡರಾದ ರಾಜನಾಯ್ಕ್, ಕಾಂಗ್ರೆಸ್ ಮುಖಂಡರಾದ ಅಣಜಿ ರಾಜಣ್ಣ, ಎಪಿಎಂಸಿ ಅಧ್ಯಕ್ಷರಾದ ಚಂದ್ರಪ್ಪರವರು, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ರಂಗನಾಯ್ಕ್, ಮಾಜಿ ಗ್ರಾಮಪಂಚಾಯತ್ ಸದಸ್ಯರಾದ ಪುಟನಾಯ್ಕ್, ಮಾಜಿ ಗ್ರಾಮಪಂಚಾಯತ್ ಸದಸ್ಯರಾದ ಮಹಾಂತೇಶ್‌ನಾಯ್ಕ್, ಮೂರ್ತ್ಯಪ್ಪ, ಪರಶುರಾಮಪ್ಪ, ಅಂಜಿನಪ್ಪ ಇನ್ನಿತರ ಊರಿನ ಮುಖಂಡರು ಉಪಸ್ಥಿತರಿದ್ದರು.