ದಾವಣಗೆರೆ ಪೊಲಿಸರಿಂದ ಗಾಂಜಾ ಮಾರಾಟ ಪ್ರಕರಣ ಬಯಲು: 2.84 ಲಕ್ಷ ಮೌಲ್ಯದ 11 ಕೆಜಿ ಗಾಂಜಾ ವಶ

ದಾವಣಗೆರೆ: ಬಸ್ ಬುಕ್ಕಿಂಗ್ ಕೆಲಸ ಮಾಡುತ್ತಿದ್ದ ಇಬ್ಬರು ಪರ ಜಿಲ್ಲೆಯ ಯುವಕರು ಅಕ್ರಮ ಗಾಂಜಾ ಮಾರಾಟ ಪ್ರಕರಣದಲ್ಲೀಗ ದಾವಣಗೆರೆ ಸಿಇಎನ್ ಪೊಲೀಸರ ಅಥಿತಿಗಳಾಗಿದ್ದಾರೆ.
ಶಿವಮೊಗ್ಗ ಜಿಲ್ಲೆಯ ರವಿ ಶೆಟ್ಟಿ (30), ದಕ್ಷಿಣ ಕನ್ನಡ ಜಿಲ್ಲೆಯ ಅಬ್ದುಲ್ ಹಾಶಿಕ್ (30) ಬಂಧಿತ ಆರೋಪಿಗಳಾಗಿದ್ದು, ಬಂಧಿತರಿAದ ಸುಮಾರು 2,84,500 ರೂ., ಮೌಲ್ಯದ 11 ಕೆ.ಜಿ 162 ಗ್ರಾಂ ಗಾಂಜಾವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನಗರದ ತುಂಗಭದ್ರಾ ಬಡಾವಣೆಯ ಬಳಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಡಿಸಿಆರ್‌ಬಿ ಘಟಕದ ಪೊಲೀಸ್ ಉಪಾಧೀಕ್ಷಕ ಬಿ.ಎಸ್. ಬಸವರಾಜ್ ಮಾರ್ಗದರ್ಶನದಲ್ಲಿ ದಾವಣಗೆರೆ ಸಿಇಎನ್ ಅಪರಾಧ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಗಿರೀಶ ಬಿ.ವಿ ಹಾಗೂ ಪೊಲೀಸ್ ಸಿಬ್ಬಂದಿಗಳನ್ನೊಳಗೊಂಡ ತಂಡ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.
ದಾವಣಗೆರೆ ಸಿಇಎನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.