ದಾವಣಗೆರೆ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರದ ಸಂಭಾವಿತ ಆಭ್ಯರ್ಥಿಗಳ ಆಯ್ಕೆಗಾಗಿ ಗುಪ್ತ ಮತದಾನ

ದಾವಣಗೆರೆ: ಜನಪರ ಕೆಲಸ ಮಾಡಿದವರಿಗೆ ಬಿಜೆಪಿ ಟಿಕೆಟ್ ಸಿಗಲಿದ್ದು, ಕೇಂದ್ರದ ನಾಯಕರು ಇದಕ್ಕೆ ಸಮ್ಮತಿ ಕೊಡುತ್ತಾರೆ ಎಂಬ ವಿಶ್ವಾಸ ಇದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.
ನಗರದ ದಾವಣಗೆರೆ ಅರ್ಬನ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಸಂಬಂಧ ನಡೆದ ಮತದಾನದ ಪ್ರಕ್ರಿಯೆಯಲ್ಲಿ ಭಾಗವಹಿಸಿ ಮಾತನಾಡಿದರು.
ಬರುವ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ಸಿಗುತ್ತದೆ ಎಂಬ ವಿಶ್ವಾಸ ಇದೆ. ಈ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸಲು ಇನ್ನೊಂದು ಶಕ್ತಿಯನ್ನು ರಾಜ್ಯದ ಜನತೆ ನೀಡುತ್ತಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿಶ್ವಾಸ ವ್ಯಕ್ತಪಡಿಸಿದರು. ಮಾತನಾಡಿದ ಅವರು, ಹಿರಿಯರ ಅಪೇಕ್ಷೆ ಮೇರೆಗೆ ಕಾರ್ಯಕರ್ತರ ಅಭಿಪ್ರಾಯ ಕೇಳಿ ಟಿಕೆಟ್ ಹಂಚಿಕೆ ಮಾಡಬೇಕೆಂಬ ನಿರ್ಧಾರಕ್ಕೆ ಬರಲಾಗಿದೆ. ಬೂತ್ ಮೇಲ್ಪಟ್ಟ ಪದಾಧಿಕಾರಿಗಳು, ಕಾರ್ಯಕರ್ತರು ಅಭಿಪ್ರಾಯ ತಿಳಿಸಲು ಅವಕಾಶ ನೀಡಿದ್ದೇವೆ ಎಂದರು.
ಪ್ರಜಾತಂತ್ರ, ಪ್ರಜಾಪ್ರಭುತ್ವದಡಿ ನಡೆಯುವ ಪಕ್ಷ ಅಂದರೆ ಬಿಜೆಪಿ ಮಾತ್ರ. ಬೂತ್ ಪ್ರಮುಖರು, ಶಕ್ತಿ ಕೇಂದ್ರ, ಪೇಜ್ ಪ್ರಮುಖರು, ಜಿಲ್ಲೆಗಳ ಟೀಂಗಳನ್ನು ಕೇವಲ ಚುನಾವಣೆಗಾಗಿ ಮಾಡುವುದಿಲ್ಲ. ವರ್ಷಪೂರ್ತಿ ಕೆಲಸ ಮಾಡುತ್ತವೆ. ಸರ್ಕಾರ ಇದ್ದಾಗ ಸಾಧನೆಗಳನ್ನು ಜನರಿಗೆ ತಲುಪಿಸುವ ಪ್ರಾಮಾಣಿಕ ಪ್ರಯತ್ನ ಮಾಡಿಕೊಂಡು ಬಂದಿವೆ. ಅಧಿಕಾರ ಇಲ್ಲದ ಸಂದರ್ಭದಲ್ಲಿ ಜನರ ಧ್ವನಿಯಾಗಿ ಹೋರಾಟ ಮಾಡಿಕೊಂಡು ಬಂದಿದ್ದಾರೆ. ಪಕ್ಷಕ್ಕೆ ಕಾರ್ಯಕರ್ತರೇ ಶಕ್ತಿ ಎಂದರು.
ಇಂದು ದಾವಣಗೆರೆಯ ಹರಿಹರ – ದಾವಣಗೆರೆ ಅರ್ಬನ್ ಸಮುದಾಯ ಭವನ, ದಲ್ಲಿ ಭಾರತೀಯ ಜನತಾ ಪಕ್ಷದ ವತಿಯಿಂದ ದಾವಣಗೆರೆ ಜಿಲ್ಲೆಯ ಸಂಸದರಾದ ಡಾ.ಜಿ.ಎಂ.ಸಿದ್ದೇಶ್ವರ ರವರ ಹಾಗೂ ಮಾಜಿ ಮಂತ್ರಿಗಳು, ಉಡುಪಿ, ಚಿಕ್ಕಮಗಳೂರಿನ ಸಂಸದರಾದ ಶೋಭಾ ಕರಂದ್ಲಾಜೆ, ದಾವಣಗೆರೆ ಬಿಜೆಪಿಯ ಜಿಲ್ಲಾಧ್ಯಕ್ಷರಾದ ವಿರೇಶ್ ಹನಗವಾಡಿ ರವರ ಸಮ್ಮುಖದಲ್ಲಿ
ದಾವಣಗೆರೆ ಜಿಲ್ಲೆಯ ಎಲ್ಲಾ ವಿಧಾನ ಸಭಾ ಕ್ಷೇತ್ರದ ಸಂಭಾವಿತ ಆಭ್ಯರ್ಥಿಗಳ ಹೇಸರಿಗೆ, ವಿಧಾನ ಸಭಾ ಕ್ಷೇತ್ರದ ಶಕ್ತಿ ಕೇಂದ್ರದ ಪ್ರಮುಖರು, ಪ್ರಭಾರಿಗಳು, ಓಟ್ ಮಾಡುವ ಕಾರ್ಯಕ್ರಮದಲ್ಲಿ ಎಲ್ಲಾ ವಿಧಾನ ಸಭಾ ಕ್ಷೇತ್ರದ ಸಂಭಾವಿತ ಆಭ್ಯರ್ಥಿ ಹೇಸರಿಗೆ ಒಟಿಂಗ್ ಮಾಡುವ ಕಾರ್ಯಕ್ರಮದಲ್ಲಿ ಭಾಗವಹಿಸಲಾಯಿತು.
ಶಕ್ತಿ ಕೇಂದ್ರ ಪ್ರಮುಖರು, ಶಿಶಿಲ್ ನಮೋಶಿ, ಶೋಭಾ ಕರಂದ್ಲಾಜೆ, ಜಿಎಂ ಸಿದ್ದೇಶ್ವರ, ತಾಲ್ಲೂಕು, ಜಿಲ್ಲಾ ಮಂಡಲ ಪ್ರಮುಖರು ಭಾಗಿಯಾಗಿದ್ದತು