ಗುಂಡು ಹಾರಿಸಿಕೊಂಡು ಯೋಧನ ಆತ್ಮಹತ್ಯೆ

ದಾವಣಗೆರೆ : ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ (ಸಿಐಎಸ್ಎಫ್) ಯೋಧರೊಬ್ಬರು ಗುಂಡು ಹಾರಿಸಿಕೊಂಡು ಭಾನುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ತಾಲ್ಲೂಕಿನ ಹದಡಿ ಗ್ರಾಮದ ನಾಗರಾಜು (32) ಆತ್ಮಹತ್ಯೆ ಮಾಡಿಕೊಂಡವರು. ಪಂಜಾಬ್ ಹರಿಯಾಣ ಸೆಕ್ರೆಟರಿಯೇಟ್ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಇವರು ಭಾನುವಾರ ಬೆಳಗಿನ ಜಾವ 4.30ರ ಸುಮಾರಿಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಚಂಡೀಗಢದಲ್ಲಿರುವ ಪಂಜಾಜ್– ಹರಿಯಾಣ ಸೆಕ್ರೆಟರಿಯೇಟ್ನಲ್ಲಿ ನಾಗರಾಜು ಅವರು 6 ವರ್ಷಗಳ ಹಿಂದೆ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದರು.
ನಾಗರಾಜು ಹದಡಿಯ ಹನುಮಮ್ಮ ಅವರ ಪುತ್ರ. ಮೂರು ವರ್ಷಗಳ ಹಿಂದೆ ದಾವಣಗೆರೆಯ ಶಿಲ್ಪಾ ಅವರನ್ನು ವಿವಾಹವಾಗಿದ್ದು, ಇಬ್ಬರು ಪುತ್ರಿಯರು ಇದ್ದಾರೆ.
ನಾಗರಾಜ್ ಅವರ ಪಾರ್ಥಿವ ಶರೀರ ಮಂಗಳವಾರ ಸ್ವಗ್ರಾಮ ಹದಡಿಗೆ ತರಲಾಗುತ್ತದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್ ತಿಳಿಸಿದ್ದಾರೆ.