ವಿಧಾನಸಭಾ ಚುನಾವಣೆ- ಪ್ಲಾಸ್ಟಿಕ್ ವಸ್ತುಗಳ ಬಳಕೆ ನಿಷೇಧ
ದಾವಣಗೆರೆ : ಕರ್ನಾಟಕ ವಿಧಾನ ಸಭಾ ಸಾರ್ವತ್ರಿಕ ಚುನಾವಣೆ-2023ರ ಹಿನ್ನೆಲೆ ಜಿಲ್ಲೆಯಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ ನಿಯಮಗಳು, 2016 ರನ್ವಯ ಪ್ಲಾಸ್ಟಿಕ್ ವಸ್ತುಗಳ ಉತ್ಪಾದನೆ, ಸಂಗ್ರಹಣೆ, ವಿತರಣೆ, ಮಾರಾಟ, ಮತ್ತು ಬಳಕೆಯನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾ ಕ.ರಾ.ಮಾ.ನಿ.ಮಂ ಪರಿಸರ ಅಧಿಕಾರಿಗಳು ತಿಳಿಸಿದ್ದಾರೆ.
ಯಾವುದೇ ವ್ಯಕ್ತಿ, ಅಂಗಡಿ ಮಾಲಿಕ, ಮಾರಾಟಗಾರ, ಸಗಟು ಮಾರಾಟಗಾರ, ಅಥವಾ ಚಿಲ್ಲರೆ ವ್ಯಾಪಾರಿ, ವ್ಯಾಪಾರಿ ಮತ್ತು ಮಾರಾಟಗಾರರು ಪ್ಲಾಸ್ಟಿಕ್‍ನ ಕ್ಯಾರಿಬ್ಯಾಗ್, ಭಿತ್ತಿಪತ್ರ, ತೋರಣ, ಫ್ಲೆಕ್ಸ್, ಬಾವುಟ, ತಟ್ಟೆ, ಲೋಟ, ಚಮಚ, ಕಿಂಗ್ ಫಿಲ್ಮ್ಸ್ ಮತ್ತು ಊಟದ ಮೇಜಿನ ಮೇಲೆ ಹರಡುವ ಹಾಳೆ ಹಾಗೂ ಥರ್ಮೋಕೋಲ್ ಮತ್ತು ಪ್ಲಾಸ್ಟಿಕ್ ಮೈಕ್ರೋ ಬೀಡ್ಸ್ ನಿಂದ ತಯಾರಾದಂತಹ ಯಾವುದೇ ವಸ್ತುಗಳ ಬಳಕೆಯನ್ನು ನಿಷೇಧಿಸಲಾಗಿದೆ.
ರಾಜಕೀಯ ಪಕ್ಷಗಳು,ಚುನಾವಣನೆಗೆ ಸ್ಪರ್ಧಿಸಲಿರುವ ಅಭ್ಯರ್ಥಿಗಳು ಮುದ್ರಣಗೊಳಿಸುವ ಫ್ಲೆಕ್ಸ್, ಬ್ಯಾನರ್, ಬಂಟಿಂಗ್ಸ್, ಧ್ವಜಗಳನ್ನು ಪ್ಲಾಸ್ಟಿಕ್‍ನಿಂದ ಮುದ್ರಿಸುವುದು, ತಯಾರಿಸುವುದು ಮತ್ತು ಬಳಕೆ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.