ಕೆ ಆರ್ ಎಸ್ ನಲ್ಲಿ ಬಿರುಕು ಸತ್ಯನಾ: ಅಧಿಕಾರಿಗಳ ಉತ್ತರವೇನು..? ಓದಿ ಶೇರ್ ಮಾಡಿ

IMG-20210709-WA0018

ಬೆಂಗಳೂರು: ಕೆಆರ್ ಎಸ್ ಅಣೆಕಟ್ಟಿನಲ್ಲಿ ಬಿರುಕು ಉಂಟಾಗಿದೆ ಎಂದು ಮಾಧ್ಯಮಗಳಲ್ಲಿ ಪ್ರಕಟವಾಗಿರುವ ವರದಿಯು ಸತ್ಯಕ್ಕೆ ದೂರ ಎಂದು ಕಾವೇರಿ ನೀರಾವರಿ ನಿಗಮ ಸ್ಪಷ್ಟಪಡಿಸಿದೆ.

ಮಾಧ್ಯಮಗಳಲ್ಲಿ ಬಿತ್ತರವಾಗಿರುವ ವರದಿ ಸತ್ಯಕ್ಕೆ ದೂರವಾಗಿದ್ದು, ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಕೆ. ಜೈಪ್ರಕಾಶ್ ಸ್ಪಷ್ಟನೆ ನೀಡಿದ್ದಾರೆ.

ಆಣೆಕಟ್ಟು ಸುರಕ್ಷತಾ ಪರಿಶೀಲನಾ ಸಮಿತಿಯ ಸದಸ್ಯರು ಹಾಗೂ ಇಲಾಖಾ ಮುಖ್ಯಸ್ಥರು ಆಣೆಕಟ್ಟೆಯನ್ನು ನಿಯಮಿತ ಆವಧಿಗಳಲ್ಲಿ ಪರಿವೀಕ್ಷಿಸಿ ಅಲ್ಲಿ ಯಾವುದೇ ತರಹದ ಬಿರುಕುಗಳು ಇಲ್ಲದಿರುವ ಬಗ್ಗೆ ವರದಿ ಸಲ್ಲಿಸಿದ್ದಾರೆ ಎಂದು ಹೇಳಿದ್ದಾರೆ.

ಅಣಿಕಟ್ಟು ಸುರಕ್ಷತಾ ಪರಿಶೀಲನಾ ಸಮಿತಿ ಸದಸ್ಯರು ನೀಡಿರುವ ಸಲಹೆಗಳ ಆಧಾರದ ಮೇಲೆ ಅಣೆಕಟ್ಟೆಯ ಬಲವನ್ನು ವೃದ್ಧಿಸಲು ಅವಶ್ಯವಿರುವ ಕಾಮಗಾರಿಗಳನ್ನು 131 ಅಡಿ ಮಟ್ಟದಿಂದ 70 ಅಡಿ ಮಟ್ಟದವರೆಗೆ ಹೊಸದಾಗಿ ಕಟ್ಟಡದ ಕಲ್ಲುಗಳ ಕೀಲುಗಳನ್ನು ಮಾಡಿ ಆಣೆಕಟ್ಟೆಯನ್ನು ಭದ್ರಗೊಳಿಸಲಾಗಿದೆ , ಇದರಿಂದಾಗಿ ಅಣಿಕಟ್ಟಿನಲ್ಲಿ ಯಾವುದೇ ಬಿರುಕು ಇಲ್ಲ ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!