ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆ
ದಾವಣಗೆರೆ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಸಮಾಜ ಕಲ್ಯಾಣ ಇಲಾಖೆ ಮತ್ತು ಮಹಾನಗರ ಪಾಲಿಕೆ ವತಿಯಿಂದ ಶುಕ್ರವಾರ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಏಪ್ರಿಲ್ 14 ರಂದು ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಜಯಂತಿಯನ್ನು ನೀತಿ ಸಂಹಿತೆ ಹಿನ್ನಲೆಯಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಆಚರಿಸಲಾಯಿತು.
ಜಿಲ್ಲಾಧಿಕಾರಿ ಶಿವಾನಂದ ಕಾಪಶಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಸುರೇಶ್ ಹಿಟ್ನಾಳ್, ಅಪರ ಜಿಲ್ಲಾಧಿಕಾರಿ ಪಿ.ಎನ್ ಲೋಕೇಶ್, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಸಿ.ಬಿ ರಿಷ್ಯಂತ್, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ನಾಗರಾಜ್, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಡಿ.ಡಿ ಮಂಜನಾಯ್ಕ್, ಅಲ್ಪಸಂಖ್ಯಾತರ ವರ್ಗಗಳ ಕಲ್ಯಾಣಾಧಿಕಾರಿ ಮಲ್ಲಿಕಾರ್ಜುನ್, ಜಿಲ್ಲಾ ಕನ್ನಡ ಪರಿಷತ್ ಅಧ್ಯಕ್ಷರಾದ ವಾಮದೇವಪ್ಪ, ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ ಕಬ್ಬಳ್ಳಿ ಮೈಲಪ್ಪ, ರೈತ ಸಂಘದ ಕಾರ್ಯಧ್ಯಕ್ಷ ಚಿನ್ನಸಮುದ್ರ ಶೇಖರ್ ನಾಯ್ಕ್, ಸಮಗಾರ ಸಮಾಜದ ಜಿಲ್ಲಾಧ್ಯಕ್ಷ ಫಕೀರಪ್ಪ ಉಪಸ್ಥಿತರಿದ್ದರು. ಕಲಾವಿದರಾದ ಐರಣಿ ಚಂದ್ರು ಜಾಗೃತಿ ಗೀತೆ ಹಾಡಿದರು.