ಸವದಿ, ಜಗದೀಶ್ ಶಟ್ಟರ್ ಕಾಂಗ್ರೆಸ್ ಗೆ ಹೋಗಿರೋದು ಬಿಜೆಪಿ ಗೆ ಪ್ಲಸ್ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ದಾವಣಗೆರೆ : ಸವದಿ, ಜಗದೀಶ್ ಶಟ್ಟರ್ ಕಾಂಗ್ರೆಸ್ ಗೆ ಹೋಗಿರೋದು ಬಿಜೆಪಿ ಗೆ ಪ್ಲಸ್ ಆಗುತ್ತೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಕಳೆದ ಬಾರಿಗಿಂತ ಈ ಬಾರಿ ನಮಗೆ ಮತಗಳು ಹೆಚ್ಚಾಗಲಿವೆ . ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮಿತ್ರರಿಗೆ ನಾನು ಧನ್ಯವಾದ ಹೇಳಲು ಇಷ್ಟ ಪಡುತ್ತೇನೆ. ಎಂದು ಹೇಳಿದರು.
ಶೆಟ್ಟರ್ ಹಾಗೂ ಸವದಿ ಬಿಜೆಪಿ ಇಂದ ಎಲ್ಲಾ ಪದವಿ ಪಡೆದು ನಂತರ ಕಾಂಗ್ರೇಸ್ ಗೆ ಹೋಗಿದ್ದಾರೆ. ಜನರು ಅವರನ್ನು ಒಪ್ಪುವುದಿಲ್ಲ. ಅವರ ಕ್ಷೇತ್ರದಲ್ಲಿ ಅವರ ವಿರುದ್ದವೇ ಜನರು ಮಾತನಾಡುತ್ತಿದ್ದಾರೆ.ಜನರು ಏನು ದಡ್ಡರಲ್ಲ ಎಲ್ಲಾವನ್ನು ಗಮನಿಸಿದ್ದಾರೆ ಎಂದರು.
ರಾಜ್ಯಕ್ಕೆ ಅಮಿತ್ ಶಾ, ಮೋದಿ, ಸ್ಮೃತಿ ಇರಾನಿ ಸೇರಿದಂತೆ ಹಲವು ನಾಯಕರು ಬರುತ್ತಿದ್ದಾರೆ. ಅವರ ಪ್ರಚಾರದಿಂದ ಪಕ್ಷಕ್ಕೆ ಮತ್ತಷ್ಟು ಬಲ ಬರಲಿದೆ ಎಂದರು..
ರಾಹುಲ್ ಗಾಂದಿ ತೋರಿಕೆಗಾಗಿ ಲಿಂಗಾಯತ ಮಠಕ್ಕೆ ಹೋಗುತ್ತಿದ್ದಾರಲ್ಲ ಅವರಿಗೆ ಧನ್ಯವಾದಗಳು ಎಂದು ಬೊಮ್ಮಾಯಿ ಇದೇ ಸಂದರ್ಭದಲ್ಲಿ ಕುಟುಕಿದರು.
ಮುಂದೆಯೂ ಸಿಎಂ ಆಗಬೇಕು ಎಂದು ನಾನು ಅಂದುಕೊಂಡರಲಿಲ್ಲ. ಹೈಕಮಾಂಡ್ ತೀರ್ಮಾನ ಮಾಡಿದ್ದು ಈಗಲೂ ಕೂಡ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಹೈಕಮಾಂಡ್ ಎಲ್ಲಾವನ್ನು ಗಮನಿಸುತ್ತಿದೆ ಎಂದರು.
ಭಾವನೆಗಳ ಜೊತೆ ಬಿಜೆಪಿ ಆಟವಾಡುತ್ತಿದೆ ಎಂಬ ಡಿಕೆಶಿ ಹೇಳಿಕೆ ವಿಚಾರಕ್ಕೆ ಸಂಬಂಧಿಸಿಸಂತೆ ಪ್ರತಿಕ್ರಿಯಿಸಿದ ಅವರು, ಲಿಂಗಾಯತ ವಿವಾದಗಳನ್ನು ತೆಗೆದಿದ್ದೇ ಅವರು. ಡಿಕೆಶಿ ಹೇಳುವುದು ಒಂದು ಮಾಡೋದು ಒಂದು. ದೇವರು ಯಾರಿಗೆ ಆಶೀರ್ವಾದ ಮಾಡ್ತಾರೆ ಎಂದು ಕಾದು ನೋಡೋಣ ಎಂದರು.
ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪಕ್ಷೇತರವಾಗಿ ಸ್ಪರ್ಧೆ ಮಾಡುತ್ತಿರುವ ಕುರಿತು ಮಾತನಾಡಿದ ಸಿಎಂ, ಪುತ್ರನ ಪರ ಮಾಡಾಳು ಅವರು ಪ್ರಚಾರ ಮಾಡ್ತಾ ಇದಾರೆ. ಹೈಕಮಾಂಡ್ ಎಲ್ಲಾವನ್ನು ಗಮನಿಸುತ್ತಿದೆ. ಶೀಘ್ರವೇ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಬೊಮ್ಮಾಯಿ ಹೇಳಿದರು.