ಯಶವಂತಪುರ ಕ್ಷೇತ್ರದಲ್ಲಿ ಪ್ರಧಾನಿ ರೋಡ್ ಶೋ; ಭರ್ಜರಿ ತಯಾರಿ

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಯಶವಂತಪುರ ಕ್ಷೇತ್ರದಲ್ಲಿ ಇಂದು ನಡೆಸಲಿರುವ ರೋಡ್ ಶೋಗೆ ಬಿಜೆಪಿಯಿಅಮದ ಭರ್ಜರಿ ತಯಾರಿ ನಡೆದಿದೆ. ಯಶವಂತಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಸಚಿವ ಸೋಮಶೇಖರ್ ಅವರು ಸಿದ್ಧತೆ ಪರಿಶೀಲಿಸಿದರು.
ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಎಸ್.ಟಿ.ಸೋಮಶೇಖರ್, ನೈಸ್ ಜಂಕ್ಷನ್ ನಿಂದ ಸುಮ್ಮನಹಳ್ಳಿ ಬ್ರಿಡ್ಜ್ ವರೆಗೂ ಒಟ್ಟು ಐದು ಕಿ.ಮೀ. ರೋಡ್ ಶೋ ನಡೆಯಲಿದೆ. ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರೋಡ್ ಶೋ ನಲ್ಲಿ ಭಾಗವಹಿಸಲು ಯಶವಂತಪುರ ಕ್ಷೇತ್ರದ ಜನತೆ ಬಹಳ ಉತ್ಸುಕರಾಗಿದ್ದಾರೆ ಎಂದರು.
ಯಶವಂತಪುರ ವಿಧಾನಸಭಾ ಕ್ಷೇತ್ರದಿಂದ ಸುಮಾರು 75 ಸಾವಿರಕ್ಕೂ ಅಧಿಕ ಮಂದಿ ನರೇಂದ್ರ ಮೋದಿ ಅವರನ್ನು ನೋಡಿ ಕಣ್ತುಂಬಿಕೊಳ್ಳಲು ಉತ್ಸುಕರಾಗಿದ್ದಾರೆ. ನರೇಂದ್ರ ಮೋದಿ ಅವರು ಯಶವಂತಪುರ ಕ್ಷೇತ್ರದಲ್ಲಿ ರೋಡ್ ಶೋ ನಡೆಸುವ ಮೂಲಕ ಚುನಾವಣಾ ಪ್ರಚಾರ ಮತ್ತಷ್ಟು ರಂಗೇರಲಿದೆ ಎಂದರು.