‘ನಾನೊಬ್ಬ ಬಜರಂಗಿ’: ಅಭಿಯಾನಕ್ಕೆ ಬಿಜೆಪಿ ಮುನ್ನುಡಿ

‘ನಾನೊಬ್ಬ ಬಜರಂಗಿ’: ಅಭಿಯಾನಕ್ಕೆ ಬಿಜೆಪಿ ಮುನ್ನುಡಿ

ಬೆಂಗಳೂರು: ಭಜರಂಗದಳ ನಿಷೇಧಿಸುವ ಬಗ್ಗೆ ಪ್ರಸ್ತಾಪಿಸಿರುವ ಕಾಂಗ್ರೆಸ್ ಪ್ರಣಾಳಿಕೆ ವಿರುದ್ದ ಹಿಂದೂ ಸಂಘಟನೆಗಳ ಆಕ್ರೋಶ ವ್ಯಕ್ತವಾಗಿದೆ. ಅದರಲ್ಲೂ ಬಿಜೆಪಿ ನಾಯಕರು ‘ನಾನೂ ಒಬ್ಬ ಬಜರಂಗಿ’ ಎಂಬ ಅಭಿಯಾನ ಕೈಗೊಂಡಿದ್ದಾರೆ. ಈ ಅಭಿಯಾನಕ್ಕೆ ಭಾರೀ ಬೆಂಬಲ ವ್ಯಕ್ತವಾಗಿದೆ.
ಕಾಂಗ್ರೆಸ್ ನಡೆ ಬಗ್ಗೆ ಆಕ್ರೋಶ ಹೊರಹಾಕಿರುವ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ‘ನಾನೊಬ್ಬ ಕನ್ನಡಿಗ, ನಾನ್ನ ನಾಡು ಹನುಮ ಜನಿಸಿದ ನಾಡು, ನಾನೊಬ್ಬ ಬಜರಂಗಿ’ ಎಂದು ಟ್ವೀಟ್ ಮಾಡಿ ಕಾಂಗ್ರೆಸ್ ವಿರುದ್ದದ ಅಭಿಯಾನಕ್ಕೆ ಮುನ್ನುಡಿ ಬರೆದಿದ್ದಾರೆ. ಬಿಜೆಪಿ ಕಾರ್ಯಕರ್ತರು, ಹಿಂದೂ ಸಂಘಟನೆಗಳ ಸೇನಾನಿಗಳೂ ಈ ಅಭಿಯಾನದಲ್ಲಿ ಭಾಗಿಯಾಗಿದ್ದಾರೆ.

 

ಇದೇ ವೇಳೆ, ಬಜರಂಗದಳವನ್ನು ನಿಷೇಧ ಮಾಡುವ ದುಸ್ಸಾಹಸಕ್ಕೆ ಕೈ ಹಾಕಿದರೆ ಕಾಂಗ್ರೆಸ್ ಭಸ್ಮವಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯಿಸಿದ್ದಾರೆ. ಸಮಾಜದ ಸುರಕ್ಷೆ, ಸೇವೆ, ಸಂಸ್ಕಾರದ ಪ್ರತೀಕವಾಗಿರುವ ಬಜರಂಗದಳ ನೂರು ಕೋಟಿ ಹಿಂದೂಗಳ ಆತ್ಮವಿದ್ದಂತೆ ಎಂದವರು ಪ್ರತಿಪಾದಿಸಿದ್ದಾರೆ.

 

ಭಜರಂಗದಳ ನಮ್ಮ ಹೆಮ್ಮೆ. ಭಜರಂಗದಳ ದೇಶ ಭಕ್ತರ, ಧರ್ಮ ರಕ್ಷಕರ ಸಂಘಟನೆ. ಭಜರಂಗದಳವನ್ನು ನಿಷೇಧ ಮಾಡಿ ನಿಮ್ಮ ತಾಕತ್ತನ್ನು ತೋರಿಸಿ, ನಿಮ್ಮ ಶಕ್ತಿಯನ್ನು ತೋರಿಸಿ ಎಂದಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಕಾಂಗ್ರೆಸ್ಸಿನ ವಿನಾಶ ಕಾದಿದೆ ಎಂದು ಗುಡುಗಿದ್ದಾರೆ.

 

ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಭಜರಂಗದಳ ನಿಷೇಧ ಕುರಿತು ಧಾರವಾಡದಲ್ಲಿ ಖಾರವಾಗಿ ಪ್ರತಿಕ್ರಿಯಿಸಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಹನುಮಂತನ ಭಕ್ತರು ಭಜರಂಗದಳದ ಭಜರಂಗಿಗಳು. ಅವರೇನಾದರು ಸಿಡಿದೆದ್ದರೆ ಕಾಂಗ್ರೆಸ್ ದೇಶ ಬಿಟ್ಟು ಹೋಗಬೇಕಾಗುತ್ತದೆ ಎಂದು ಕಾಂಗ್ರೆಸ್‌ಗೆ ಎಚ್ಚರಿಕೆ ನೀಡಿದ್ದಾರೆ. ಇದೇ ವೇಳೆ, ಟ್ವೀಟ್ ಮಾಡಿರುವ ಸಿಎಂ ಬೊಮ್ಮಾಯಿ, ‘ಭಯೋತ್ಪಾದನೆ, ಹಿಂಸೆ ಹಾಗೂ ದೇಶದ್ರೋಹದ ಚಟುವಟಿಕೆ ನಡೆಸುವ ಪಿಎಫ್ಐ ಜೊತೆ ಧರ್ಮ, ಪರಂಪರೆ ಹಾಗೂ ಇತಿಹಾಸವನ್ನು ಗಟ್ಟಿಗೊಳಿಸಲು ಪ್ರಯತ್ನಿಸುತ್ತಿರುವ ಭಜರಂಗದಳವನ್ನು ತುಲನೆ ಮಾಡುವುದು ದೊಡ್ಡ ಅಪರಾಧ. ಆದರೇ ಕಾಂಗ್ರೆಸ್ ಇಂತಹ ತಪ್ಪು ಮಾಡಿ, ಭಜರಂಗದಳವನ್ನು ನಿಷೇಧಿಸುತ್ತೇವೆ ಎಂದು ಹೇಳಿದೆ. ಹನುಮ ಭಕ್ತರು ಸಿಡಿದು ನಿಂತರೇ, ಈಗಾಗಲೇ ಅವಸಾನದಲ್ಲಿರುವ ಕಾಂಗ್ರೆಸ್ ಪಕ್ಷವನ್ನು ಬೇರು ಸಮೇತ ಈ ದೇಶದಿಂದ ಕಿತ್ತೆಸೆಯುತ್ತಾರೆ. ಉತ್ತರದ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ, ದಕ್ಷಿಣದ ಅಂಜನಾದ್ರಿಯಲ್ಲಿ ಶ್ರೀ ಹನುಮ ಮಂದಿರ ನಿರ್ಮಾಣ ನಮ್ಮ ಧ್ಯೇಯವಾಗಿದೆ ಎಂದಿದ್ದಾರೆ.

Leave a Reply

Your email address will not be published. Required fields are marked *

error: Content is protected !!