ಕೊವಿಡ್ ನಿಂದ ಮೃತಪಟ್ಟ ಕುಟುಂಬಗಳಿಗೆ ಸಾಂತ್ವನ, ಶೀಘ್ರದಲ್ಲೇ ಸರ್ಕಾರದಿಂದ ಪರಿಹಾರ – ಸಚಿವ ಬಿ ಎ ಬಸವರಾಜ

ದಾವಣಗೆರೆ: ನಗರಾಭಿವೃದ್ಧಿ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಬಿ.ಎ.ಬಸವರಾಜ ಅವರು ದಿನಾಂಕ 13-7-2021 ರಂದು ಬೆಳಿಗ್ಗೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲ್ಲೂಕಿನ ಅಸಗೋಡು ಗ್ರಾಮದ ಚಂದ್ರಮ್ಮ, ಹುಚ್ಚಂಗಿಪುರದ ಮಹೇಶ ಕೋವಿಡ್-19 ರಿಂದ ಮೃತಪಟ್ಟ ಇವರುಗಳ ಮನೆಗಳಿಗೆ ಭೇಟಿ ನೀಡಿ ಸಾಂತ್ವನ ಹೇಳಿ ಸರ್ಕಾರದ ವತಿಯಿಂದ ಕೊರೊನಾ ಸೋಂಕಿನಿಂದ ಮೃತಪಟ್ಟವರಿಗೆ ಘೋಷಿಸಿರುವ ಪರಿಹಾರ ಜಿಲ್ಲಾಡಳಿತ ದಿಂದ ಕೋಡಿಸುವುದಾಗಿ ಹೇಳಿದರು.
ಸಂಸದರಾದ ಶ್ರೀ ಜಿ.ಎಂ.ಸಿದ್ದೇಶ್ವರ, ಶಾಸಕರಾದ ಶ್ರೀ ಎಸ್. ವಿ.ರಾಮಚಂದ್ರ, ಜಿಲ್ಲಾಧಿಕಾರಿ ಶ್ರೀ ಮಹಾಂತೇಶ್ ಬಿಳಗಿ ಜಿಲ್ಲಾ ಪೋಲೀಸ್ ವರಿಷ್ಟಾಧಿಕಾರಿ ಸಿ.ಬಿ.ರಿಷ್ಯಂತ್ ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.