ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬಂದೇ ಬರುತ್ತೆ- ಮಾಜಿ ಸಿಎಂ ಬಿಎಸ್ ವೈ ವಿಶ್ವಾಸ.

ಬೆಂಗಳೂರು :ರಾಜ್ಯ ವಿಧಾನಸಭೆ ಚುನಾವಣೆ ಮತದಾನ ನಿನ್ನೆ ಮುಗಿದಿದ್ದು, ಮೇ 13 ರಂದು ಫಲಿತಾಂಶ ಹೊರ ಬೀಳಲಿದೆ. ಈ ನಡುವೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಇಂದು ಮಾತನಾಡಿದ ಬಿ.ಎಸ್ ಯಡಿಯೂರಪ್ಪ, ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬಂದೇ ಬರುತ್ತದೆ. ನಮಗೆ ನೂರಕ್ಕೆ ನೂರರಷ್ಟು ವಿಶ್ವಾಸವಿದೆ, ನಾವೇ ಗೆಲ್ಲುತ್ತೇವೆ. ಕರ್ನಾಟಕದ ಜನರ ನಾಡಿಮಿಡಿತ ನಮಗೆ ಗೊತ್ತಿದೆ. ಬಿಜೆಪಿಗೆ ಬಹುಮತ ಬರುತ್ತೆ, ಸರ್ಕಾರ ರಚನೆ ಮಾಡೇ ಮಾಡುತ್ತೇವೆ ಎಂದರು.
ಬಿಜೆಪಿಗೆ 115 ರಿಂದ 117 ಸ್ಥಾನ ಬಂದೇ ಬರುತ್ತದೆ. ಜೆಡಿಎಸ್ ಜೊತೆ ಯಾವುದೇ ಮಾತುಕತೆಯಾಗಿಲ್ಲ ಎಂದು ಬಿ.ಎಸ್ ಯಡಿಯೂರಪ್ಪ ತಿಳಿಸಿದರು.