ಸಿದ್ದರಾಮಯ್ಯ ಹೇಳಿದ್ದಕ್ಕೆ ತಟಸ್ಥವಾಗಿದ್ದೇ : ಸವಿತಾಬಾಯಿ 

ಸಿದ್ದರಾಮಯ್ಯ ಹೇಳಿದ್ದಕ್ಕೆ ತಟಸ್ಥವಾಗಿದ್ದು : ಸವಿತಾಬಾಯಿ 

ದಾವಣಗೆರೆ : ಮತದಾನಕ್ಕೆ ಮೂರು ದಿವಸ ಇದ್ದಂತೆ ಮಾಜಿ ಸಿಎಂ ಸಿದ್ದರಾಮಯ್ಯ ದೂರವಾಣಿ ಕರೆ ಮಾಡಿ ತಟಸ್ಥವಾಗಿರು, ಕಾಂಗ್ರೆಸ್‌ಗೆ ಸಪೋರ್ಟ್ ಮಾಡು ಎಂದು ಹೇಳಿದ್ದರು. ಈ ಹಿನ್ನೆಲೆಯಲ್ಲಿ ನಾನು ಚುನಾವಣೆಗೆ ಸ್ಪರ್ಧಿಸಿದ್ದರೂ, ಕಣದಿಂದ ಹಿಂದೆ ಸರಿದಿದ್ದೇ ಎಂದು ಮಾಯಕೊಂಡ ವಿಧಾನ ಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸವಿತಾಬಾಯಿ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿ, ಮಾಯಕೊಂಡದ ಜನರು ನಾನು ಹೋಗಿದ್ದ ಕಡೆಯೆಲ್ಲ ಉತ್ತಮ ರೆಸ್ಪಾನ್ಸ್ ನೀಡಿದ್ದರು. ಅಲ್ಲದೇ ನಾನು ಅಂದಾಜು ಗೊಲ್ಲ, ಲಂಬಾಣಿ ಮತಗಳು ಸೇರಿ ಕನಿಷ್ಠ 25ಸಾವಿರ ಮತಗಳನ್ನು ತೆಗೆದುಕೊಳ್ಳುತ್ತಿದ್ದೇ. ಆದರೆ ವರಿಷ್ಠರು ಚುನಾವಣಾ ಅಖಾಡದಿಂದ ಹಿಂದೆ ಸರಿ ಎಂದು ಹೇಳಿದ್ದರು. ಅವರ ಮಾತಿಗೆ ಬೆಲೆಕೊಟ್ಟು ನಾನು ಕೊನೆ ಕ್ಷಣದಲ್ಲಿ ಪ್ರಚಾರಕ್ಕೆ ಇಳಿಯಲಿಲ್ಲ. ಇಳಿದಿದ್ದರೆ ಹೆಚ್ಚಿನ ಮತಗಳನ್ನು ತೆಗೆದುಕೊಳ್ಳುತ್ತಿದ್ದೇ. ಈಗಾಗಲೇ ನಾನು ಸಾಕಷ್ಟು ಹಣ ಖರ್ಚು ಮಾಡಿದ್ದು, ಅದಕ್ಕೆ ಬೆಲೆ ಕೊಡುತ್ತಿಲ್ಲ. ಬದಲಾಗಿ ಪಕ್ಷಕ್ಕೆ ಹಾಗೂ ಪಕ್ಷ ಸಂಘಟನೆಗೆ ಬೆಲೆ ಕೊಡಲು ಈ ನಿರ್ಧಾರ ಕೈಗೊಂಡಿದ್ದೇ ಎಂದರು.

ನಾನು ಮೊದಲಿನಿಂದಲೂ ಕಾಂಗ್ರೆಸ್ ಕಾರ್ಯಕರ್ತೆ, ಅದಕ್ಕಾಗಿ ದುಡಿದಿದ್ದೇನೆ, ಆದರೆ ನನಗೆ ಟಿಕೆಟ್ ಸಿಗದೇ ಇದ್ದಕ್ಕೆ ಬಂಡಾಯ ಕಾಂಗ್ರೆಸ್ ಅಭ್ಯರ್ಥಿಯಾಗಿ ನಿಂತಿದ್ದೇ. ಇದಾದ ಬಳಿಕ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದೇ. ಕ್ಯಾಂಪೇಯನ್ ಕೂಡ ಜೋರಾಗಿತ್ತು. ಆದರೆ ಕೊನೆಘಳಿಗೆಯಲ್ಲಿ ನೀನು ನಿಂತರೆ ಮತಗಳು ವಿಭಾಗವಾಗುತ್ತವೆ. ಇದರಿಂದ ಯಾರಿಗೂ ಉಪಯೋಗವಿಲ್ಲ ಅಂದಿದ್ದರು. ಈ ಕಾರಣದಿಂದ ನಾನು ಚುನಾವಣೆಗೆ ಸ್ಪರ್ಧೆ ಮಾಡಲಿಲ್ಲ ಎಂದು ಸಬೂಬು ನೀಡಿದರು.

ಮುಂದಿನ ದಿನಗಳಲ್ಲಿ ನಾನು ಕಾಂಗ್ರೆಸ್ ಬಿಟ್ಟು ಎಲ್ಲು ಹೋಗೋದಿಲ್ಲ, ಕಾಂಗ್ರೆಸ್‌ನಲ್ಲಿ ಇರುವೆ, ಕಾಂಗ್ರೆಸ್‌ಗೆ ರಾಜೀನಾಮೆ ನೀಡಿಲ್ಲ. ಜಿಲ್ಲೆಯಲ್ಲಿ ಪಕ್ಷ ಸಂಘಟನೆಗೆ ಓಡಾಟ ನಡೆಸುತ್ತೇನೆ. ಮುಂದಿನ ವರ್ಷ ಎಂಪಿ ಚುನಾವಣೆ ಇದೆ, ಹಾಗೆ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆ ಇದ್ದು, ಕಾಂಗ್ರೆಸ್ ಗೆಲುವಿಗೆ ಶ್ರಮಿಸುವೆ. ಇನ್ನೇಂದೂ ಪಕ್ಷ ಬಿಟ್ಟು ಹೋಗೋದಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಸವಿತಾಬಾಯಿ ಟಿಕೆಟ್‌ಗಾಗಿ ಕಾಂಗ್ರೆಸ್‌ನಲ್ಲಿ ಮೊದಲಿನಿಂದಲೂ ಹೋರಾಟ ನಡೆಸಿದ್ದು, ಟಿಕೆಟ್‌ಗಾಗಿ ಭಾರೀ ಪೈಪೋಟಿ ನಡೆಸಿದ್ದರು. ಆದರೆ ಸ್ಥಳೀಯ ನಾಯಕರು ಇವರಿಗೆ ಟಿಕೆಟ್ ಕೊಡಿಸಲು ಮನಸ್ಸು ಮಾಡಲಿಲ್ಲ. ಬದಲಾಗಿ ಮೊದಲಿನಿಂದಲೂ ಕಾಂಗ್ರೆಸ್‌ನಲ್ಲಿ ಕೆಲಸ ಮಾಡಿದ್ದ ಬಸವಂತಪ್ಪಗೆ ಟಿಕೆಟ್ ಕೊಡಿಸಿದ್ದರು. ಇದು ಬಸವಂತಪ್ಪಗೆ ಉತ್ತಮ ವಾತಾವರಣ ಸೃಷ್ಟಿ ಮಾಡಿತು. ಒಟ್ಟಾರೆ ಕಾಂಗ್ರೆಸ್ ಬಿಟ್ಟು ಹೋಗಿದ್ದ ಸವಿತಾಬಾಯಿ, ಈಗ ಮರಳಿ ತವರು ಮನೆಗೆ ಬರುತ್ತಿದ್ದಾರೆ. ಅಲ್ಲದೇ ಮುಂದಿನ ದಿನಗಳಲ್ಲಿ ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳುವೆ ಎಂದಿದ್ದು, ಹೇಗೆ ಕೆಲಸ ಮಾಡುತ್ತಾರೆ ಎಂದು ಕಾದು ನೋಡಬೇಕಿದೆ.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!