ರೈತರ ಮಕ್ಕಳಿಗೆ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ

ರೈತರ ಮಕ್ಕಳಿಗೆ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ

ದಾವಣಗೆರೆ : 2023-24ನೇ ಸಾಲಿನಲ್ಲಿ ರೈತರ ಮಕ್ಕಳಿಗೆ 10 ತಿಂಗಳವರೆಗೆ  ಚಿತ್ರದುರ್ಗ ಜಿಲ್ಲೆಯ ಐಯ್ಯನಹಳ್ಳಿ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ಜೂನ್-2023 ರಿಂದ ಮಾರ್ಚ್ 2024 ರವರೆಗೆ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಆಸಕ್ತ ಅಭ್ಯರ್ಥಿಗಳು ಅರ್ಜಿ ನಮೂನೆಗಳನ್ನು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ರಾಜ್ಯವಲಯ ದಾವಣಗೆರೆ ಅಥವಾ ಇಲಾಖಾ ವೆಬ್‍ಸೈಟ್ http://horticulturedir.karnataka.gov.in ನಲ್ಲಿ ಪಡೆಯಬಹುದು. ಅರ್ಜಿ ಸಲ್ಲಿಸಲು ಮೇ.22 ಕೊನೆಯದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ರಾಜ್ಯವಲಯ ದಾವಣಗೆರೆ ದೂ.ಸಂ: 08192-230049ನ್ನು ಸಂಪರ್ಕಿಸಬಹುದೆಂದು ತೋೀಟಗಾರಿಕೆ ಉಪನಿರ್ದೇಶಕರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!