ಅಹಿಂದ ಶೋಷಿತರ ಪ್ರತಿಭಟನೆ

ದಾವಣಗೆರೆ: ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಮಾಡಬೇಕು ಎಂದು ಆಗ್ರಹಿಸಿ ಮಧ್ಯ ಕರ್ನಾಟಕದ ಚಿತ್ರದುರ್ಗದಲ್ಲಿ ಅಹಿಂದ ಹಾಗೂ ಚಿತ್ರದುರ್ಗ ಜಿಲ್ಲಾ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ವತಿಯಿಂದ ಪ್ರತಿಭಟನೆ ಮಾಡಿ ಆಗ್ರಹಿಸಿದರು. ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆಯಿಂದ ಆರಂಭಗೊಂಡ ಪ್ರತಿಭಟನೆ ಗಾಂಧೀಜಿ ವೃತ್ತ, ಕಿತ್ತೂರು ರಾಣಿ ಚೆನ್ನಮ್ಮ ವೃತ್ತ, ಅಂಬೇಡ್ಕರ್ ವೃತ್ತದ ಮೂಲಕ ಒನಕೆ ಓಬವ್ವ ವೃತ್ತದಲ್ಲಿ ಇರುವ ಜಿಲ್ಲಾ ಕಾಂಗ್ರೆಸ್ ಕಚೇರಿ ಮುಂಭಾಗದ ವೃತ್ತದಲ್ಲಿ ನೂರಾರು ಕಾರ್ಯಕರ್ತರು ಸಿದ್ದರಾಮಯ್ಯ ಪೊಟೋ ಹಿಡಿದು ಪ್ರತಿಭಟನೆ ಮಾಡಿದರು.