ಪ್ರತಿಷ್ಠಿತ ಖಾಸಗಿ ಶಾಲೆಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ದಾವಣಗೆರೆ : ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2023-24 ನೇ ಸಾಲಿನಲ್ಲಿ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರತಿಭಾವಂತ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳ ಸೇರ್ಪಡೆ ಯೋಜನೆಯಡಿ ವಿದ್ಯಾರ್ಥಿಗಳನ್ನು ಆಯ್ಕೆ ಮಾಡುವ ಕುರಿತು ಅರ್ಜಿಗಳನ್ನು ಅಹ್ವಾನಿಸಲಾಗಿದೆ.
ವಿದ್ಯಾರ್ಥಿಯು 5ನೇ ತರಗತಿಯಲ್ಲಿ ಶೇ.60% ಕ್ಕಿಂತ ಹೆಚ್ಚು ಅಂಕ ಪಡೆದು ಉತ್ತಿರ್ಣರಾಗಿರಬೇಕು. ಪೋಷಕರ ವಾರ್ಷಿಕ ವರಮಾನ ರೂ.2,00,000/- ಮೀರಿರಬಾರದು, ಸಂಬಂಧಿಸಿದ ಅರ್ಜಿಯೊಂದಿಗೆ ದೃಢೀಕರಿಸಿದ ಆದಾಯ ಮತ್ತು ಜಾತಿ ಪ್ರಮಾಣ ಪತ್ರ / ಗ್ರಾಮೀಣ ಅಭ್ಯರ್ಥಿಯಾದಲ್ಲಿ ಗ್ರಾಮೀಣ ಪ್ರಮಾಣ ಪತ್ರ ಹಾಗೂ ಅಂಕಪಟ್ಟಿಯನ್ನು ಕಡ್ಡಾಯವಾಗಿ ಲಗತ್ತಿಸಿರಬೇಕು. ಅರ್ಹ ಪರಿಶಿಷ್ಟ ವರ್ಗದ ಅಭ್ಯರ್ಥಿಗಳು ಅರ್ಜಿಯನ್ನು ಆಯಾ ತಾಲ್ಲೂಕಿನ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ /ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆಯಿಂದ ಪಡೆದು ಅರ್ಜಿಗಳನ್ನು ಭರ್ತಿ ಮಾಡಿ, ಮೇ.25 ರೊಳಗೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿ, ಕೊಠಡಿ ಸಂಖ್ಯೆ:45, ಜಿಲ್ಲಾಢಳಿತ ಭವನ, ದಾವಣಗೆರೆ. ಇಲ್ಲಿಗೆ ಸಲ್ಲಿಸಲು ಕೋರಲಾಗಿದೆ. ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ