ಸಿದ್ದರಾಮಯ್ಯ-ಡಿಕೆಶಿ ಪ್ರಮಾಣ ವಚನಕ್ಕೆ ಯಾರು ಯಾರಿಗೆ ಆಹ್ವಾನ?

ಬೆಂಗಳೂರು: ಮೇ 20 ರಂದು ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಅವರು ಪ್ರಮಾಣ ವಚನ ಸ್ವೀಕರಿಸಲಿದ್ದು, ಈ ಕಾರ್ಯಕ್ರಮಕ್ಕೆ ದೇಶಾದ್ಯಂತ ಪ್ರಮುಖ ಅತಿಥಿಗಳನ್ನು ಆಹ್ವಾನಿಸಲಾಗಿದೆ.
ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್, ರಾಜಸ್ಥಾನ ಮುಖ್ಯಮಂತ್ರಿ ಆಶೋಕ್ ಗೆಹಲೋತ್, ಹಿಮಾಚಲ ಪ್ರದೇಶ ಸಿಎಂ ಸುಖ್ವಿಂದರ್ ಸಿಂಗ್ ಸುಖು, ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್, ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್, ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್, ತೆಲಂಗಾಣ ಸಿಎಂ ಚಂದ್ರಶೇಖರ್ ರಾವ್, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್, ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ಬಿಹಾರ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್, ನ್ಯಾಶನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರನ್ನು ಆಹ್ವಾನಿಸಲಾಗಿದೆ.
ಕಾಂಗ್ರೆಸ್ ಮಾಜಿ ಅಧ್ಯಕ್ಷರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ, ಕಾಂಗ್ರೆಸ್ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೆ ಆಹ್ವಾನ ಪತ್ರಿಕೆ ನೀಡಲಾಗಿದೆ.