ಕೆಎಸ್‌ಓಯು ಪ್ರಾದೇಶಿಕ ಕಚೇರಿಯಲ್ಲಿ ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ

IMG_20210714_194129

 

ದಾವಣಗೆರೆ.ಜು.೧೪; ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯದ ಕುಲಪತಿಗಳು ಹಾಗೂ ಕುಲಸಚಿವರ ನಿರ್ದೇಶನದಂತೆ ದಾವಣಗೆರೆ ಪ್ರಾದೇಶಿಕ ಕೇಂದ್ರದ ವ್ಯಾಪ್ತಿಯ ಎಲ್ಲ ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ ಕಾರ್ಯಕ್ರಮವನ್ನು ಪ್ರಾದೇಶಿಕ ಕೇಂದ್ರದಲ್ಲಿ ಹಮ್ಮಿಕೊಂಡಿದ್ದು, ದಿನಾಂಕ ನಿಗದಿಪಡಿಸುವ ಸಲುವಾಗಿ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಳ್ಳಲು ಸೂಚಿಸಲಾಗಿದೆ. ವಿದ್ಯಾರ್ಥಿಗಳ ಪ್ರವೇಶಾತಿ, ವರ್ಷದ ರೋಲ್ ನಂಬರ್ ಕಳುಹಿಸಿ ನೋಂದಣಿ ಮಾಡಿಕೊಳ್ಳತಕ್ಕದ್ದು. ಹಾಗೂ ಮೊದಲ ಡೋಸ್ ಆಗಿದ್ದರೆ ಅದನ್ನು ಕೂಡ ದಾಖಲು ಮಾಡಬೇಕು. ಹೆಚ್ಚಿನ ಮಾಹಿತಿಗೆ ಮೊ.ಸಂಖ್ಯೆ 9844926125, 9916009318 ನ್ನು ಸಂಪರ್ಕಿಸಬಹುದು ಎಂದು ಪ್ರಾದೇಶಿಕ ನಿರ್ದೇಶಕ ಡಾ.ಸುಧಾಕರ ಹೊಸಳ್ಳಿ ತಿಳಿಸಿದ್ದಾರೆ.

 

 

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!