ದರ್ಶನ್ ಅಭಿಮಾನಿಗಳ ಆಕ್ರೋಶ; ಇಂದ್ರಜಿತ್ ವಿರುದ್ದ ಸಿಡಿದೆದ್ದ ಅಭಿಮಾನಿಗಳು

ದಾವಣಗೆರೆ.ಜು.೨೧; ನಟ ದರ್ಶನ್ ಬಗ್ಗೆ ಬಾಯಿಗೆ ಬಂದಂತೆ ನಿರ್ದೇಶಕ ಇಂದ್ರಜಿತ್ ಲಂಕೇಶ್ ಮಾತನಾಡುತ್ತಿರುವುದು ಸರಿಯಲ್ಲ. ಕೂಡಲೇ ದರ್ಶನ್ ಹಾಗೂ ಅಭಿಮಾನಿಗಳ ಕ್ಷಮೆಯಾಚಿಸದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಕರ್ನಾಟಕ ದರ್ಶನ್ ತೂಗುದೀಪ ಅಭಿಮಾನಿಗಳ ಸಂಘದ ಜಿಲ್ಲಾಧ್ಯಕ್ಷ ಕೆ.ಜಿ ಚಂದ್ರಪ್ಪ ಎಚ್ಚರಿಕೆ ನೀಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು
ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ ದೊಡ್ಡ ನಟ. ಏನಾದರೂ ಮಾತನಾಡಿದರೆ ದೊಡ್ಡವರಾಗಿಬಿಡುತ್ತೇವೆ ಎಂಬ ಭ್ರಮೆಯಲ್ಲಿ ಇಂದ್ರಜಿತ್ ಲಂಕೇಶ್ ಇದ್ದಾರೆ. ಡಾ. ರಾಜ್ ಕುಮಾರ್ ಅಭಿಮಾನಿಗಳೇ ದೇವರು ಎಂದಿದ್ದರು. ಅವರ ದಾರಿಯಲ್ಲೇ ಸಾಗಿ ದರ್ಶನ್ ತನ್ನ ಅಭಿಮಾನಿಗಳನ್ನು ಸೆಲೆಬ್ರೆಟಿ ಎನ್ನುತ್ತಾರೆ. ಆದ್ರೆ ಇಂದ್ರಜಿತ್ ಲಂಕೇಶ್ ಅವರು ದರ್ಶನ್ ಬಗ್ಗೆ ಬಾಯಿಗೆ ಬಂದಂತೆ ಮಾತನಾಡಿದ್ದಾರಷ್ಟೇ ಅಲ್ಲ, ಅಭಿಮಾನಿಗಳನ್ನು ರೌಡಿಗಳೆಂದು ಕರೆದಿರುವುದು ಸರಿಯಲ್ಲ.
ಕೂಡಲೇ ಬಹಿರಂಗ ಕ್ಷಮೆಯಾಚಿಸದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು. ಕರ್ನಾಟಕ ವಾಣಿಜ್ಯ ಮಂಡಳಿ ಕೂಡಲೇ ಇಂದ್ರಜಿತ್ ಲಂಕೇಶ್ ಅವರನ್ನು ಕರೆಯಿಸಿ ಬುದ್ದಿವಾದ ಹೇಳಬೇಕು.ದರ್ಶನ್ ಅವರು
ಕೊರೊನಾ ಸಂಕಷ್ಟದ ವೇಳೆಯಲ್ಲಿ ನೆರವಾಗಿದ್ದಾರೆ.
ದರ್ಶನ್ ಅಭಿಮಾನಿಗಳು ತೆರೆಮರೆಯಲ್ಲಿ ಸೇವೆ ಸಲ್ಲಿಸಿದ್ದಾರೆ. ದರ್ಶನ್ ಅವರು ಸಹಾಯ ಮಾಡಿರುವುದು ಇಂದ್ರಜಿತ್ ಅವರಿಗೆ ಗೊತ್ತಾಗಲಿಲ್ಲವೇ ಎಂದು ಪ್ರಶ್ನಿಸಿದ್ದಾರೆ.ನಾಳೆಯೊಳಗಾಗಿ ಕ್ಷಮೆಯಾಚಿಸಬೇಕು ಎಂದು ಇದೇ ವೇಳೆ ಎಚ್ಚರಿಕೆ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಅರುಣ್ ಕುಮಾರ್,ಸುರೇಶ್, ಮಂಜು,ವರುಣ್,ಸತೀಶ್ ಮತ್ತಿತರರಿದ್ದರು.