ಸರ್ಕಾರದಲ್ಲಿ ಲೋಪ ಸಹಜ, ತಿದ್ದಿಕೊಳ್ಳಲು ಅವಕಾಶ ನೀಡಿ: ಸಂಚು ಮಾಡಿ ಸಿಎಂ ಸ್ಥಾನದಿಂದ ಕೆಳಗಿಳಿಸಿದ್ರೆ ರಾಜ್ಯಕ್ಕೆ ಮಾರಕ

ದಾವಣಗೆರೆ: ಸರ್ವ ಜನಾಂಗದ ಹಿತವನ್ನು ಬಯಸಿ ಕೋವಿಡ್ ಸಾಂಕ್ರಾಮಿಕದ ಮಧ್ಯೆಯೂ ಉತ್ತಮವಾಗಿ ಕೆಲಸ ಮಾಡುತ್ತಿರುವ ಬಿ.ಎಸ್. ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಹುದ್ದೆಯಿಂದ ಪದಚ್ಯುತಗೊಳಿಸುವ ಯತ್ನ ನಡೆದಿರುವುದು ಒಳ್ಳೆಯ ಬೆಳವಣಿಗೆಯಲ್ಲ. ಅವರನ್ನು ಅಧಿಕಾರವಧಿ ಪೂರ್ಣಗೊಳ್ಳುವವರೆಗೆ ಮುಂದುವರಿಸಬೇಕು‘ ಎಂದು ಉಜ್ಜಯಿನಿ ಶಾಖಾ ಹೊಟ್ಯಾಪುರ ಹಿರೇಮಠದ ಪೀಠಾಧ್ಯಕ್ಷ ಶ್ರೀ ಗಿರೀಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ ಹೇಳಿದರು
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ವೀರಶೈವ ಲಿಂಗಾಯತ ಸಮುದಾಯಕ್ಕೆ ಸೇರಿದರೂ ಈ ಸಮಾಜದ ಹಿತವನ್ನಷ್ಟೇ ಅಲ್ಲದೇ ಸರ್ವ ಸಮುದಾಯಗಳ ಒಳಿತಿಗಾಗಿ ಶ್ರಮಿಸುತ್ತಿದ್ದಾರೆ. ಈ ಇಳಿ ವಯಸ್ಸಿನಲ್ಲಿ ರಾಜ್ಯವನ್ನು ಸಮರ್ಥವಾಗಿ ಮುನ್ನಡೆಸುತ್ತಿದ್ದಾರೆ. ಹೀಗಾಗಿ, ಅವರನ್ನು ಬದಲಾಯಿಸುವುದುವ ಸರಿಯಲ್ಲ. ಒಂದೊಮ್ಮೆ ಅವರ ಪಕ್ಷದ ವರಿಷ್ಠರು ತಪ್ಪು ಹೆಜ್ಜೆ ಇಟ್ಟರೆ ಅದು ರಾಜ್ಯದ ಅಭಿವೃದ್ಧಿಗೂ ಮಾರಕವಾಗುತ್ತದೆ‘ ಎಂದು ತಿಳಿಸಿರುವ ಸ್ವಾಮೀಜಿ ‘ಯಡಿಯೂರಪ್ಪ ಅವರು ರಾಜ್ಯವನ್ನು ಅಭಿವೃದ್ಧಿ ಪಥದಲ್ಲಿ ಕೊಂಡೊಯ್ಯುತ್ತಿದ್ದಾರೆ.
ಸರಕಾರ ನಡೆಸುವಾಗ ಸಣ್ಣಪುಟ್ಟ ಲೋಪ ಸಹಜ. ಆ ಲೋಪ ತಿದ್ದಿಕೊಳ್ಳಲು ಅವಕಾಶ ಕೊಡುವುದನ್ನು ಬಿಟ್ಟು ಅಧಿಕಾರದಿಂದಲೇ ಕೆಳಗಿಳಿಸಲು ಸಂಚು ಮಾಡುತ್ತಿರುವುದು ಒಳ್ಳೆಯ ಬೆಳವಣಿಗೆಯಲ್ಲ’ ‘ಪ್ರವಾಹ ಪರಿಸ್ಥಿತಿ, ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ಯಡಿಯೂರಪ್ಪ ಅವರಿ ರಾಜ್ಯದ ಜನರಿಗಾಗಿ ಹಗಲಿರುಳು ದುಡಿದಿದ್ದಾರೆ. .