ganga kalyan yojana; ಗಂಗಾ ಕಲ್ಯಾಣ ಬೋರ್ ವೆಲ್; ಅರ್ಜಿ ಆಹ್ವಾನ

ganga kalyana scheme

ದಾವಣಗೆರೆ, ಸೆ.01: 2023-24ನೇ ಸಾಲಿನಲ್ಲಿ ವಿವಿಧ ನಿಗಮಗಳ ವ್ಯಾಪ್ತಿಗೆ ಒಳಪಡುವ ವಿವಿಧ ಸಮುದಾಯಗಳ ಅಭಿವೃದ್ಧಿ ನಿಗಮಗಳು ಪ್ರಕಟಣೆ ಹೊರಡಿಸಿವೆ. ಗಂಗಾ ಕಲ್ಯಾಣ ಯೋಜನೆಯಡಿಯಲ್ಲಿ (Ganga kalyan yojana) ಸಣ್ಣ ಮತ್ತು ಅತಿ ಸಣ್ಣ ರೈತರು ಹೊಂದಿರುವ ಕೃಷಿ ಜಮೀನುಗಳಿಗೆ ಬೋರ್ ವೆಲ್ (borewell) ವಿದ್ಯುತ್ ಸೌಕರ್ಯ ಕಲ್ಪಿಸುವ ಮೂಲಕ ನೀರಾವರಿ ಸೌಲಭ್ಯಗಳನ್ನು ಒದಗಿಸಲಾಗುತ್ತದೆ. ಇದಕ್ಕಾಗಿ ಸಾಲ ಮತ್ತು ಸಹಯಧನ ಸೌಲಭ್ಯಗಳನ್ನು ನೀಡಲಾಗುತ್ತದೆ.

ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಸದ್ಯಕ್ಕೆ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮಗಳು 2023-24ನೇ ಸಾಲಿಗೆ ವಿವಿಧ ಯೋಜನೆಗಳಡಿ ಸಾಲ-ಸೌಲಭ್ಯವನ್ನು ನೀಡಲು ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿವೆ. ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ, ಬೌದ್ಧ, ಸಿಖ್ಖ ಮತ್ತು ಪಾರ್ಸಿ ಜನಾಂಗದವರು, ಅದೇ ರೀತಿ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮ ವ್ಯಾಪ್ತಿಗೆ ಒಳಪಡುವ ಸಾಮಾನ್ಯ ವರ್ಗದಲ್ಲಿ ಆರ್ಯ ವೈಶ್ಯ ಸಮುದಾಯಕ್ಕೆ ಸೇರಿದ ಸಣ್ಣ ರೈತರಿಗಾಗಿಯೇ ಇರುವ ‘ವಾಸವಿ ಜಲಶಕ್ತಿ ಯೋಜನೆ’ ಯಡಿ ಬೋರ್ ವೆಲ್ ಸಹಾಯಧನಕ್ಕೆ ಅರ್ಜಿ ಸಲ್ಲಿಸಬಹುದು.

Gruha Lakshmi scheme; ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆ ಗೃಹಲಕ್ಷ್ಮಿಗೆ ಮೈಸೂರಿನಲ್ಲಿ ಅದ್ದೂರಿ ಚಾಲನೆ ನೀಡಿದ ಸಿದ್ದರಾಮಯ್ಯ

ಯಾರಿಗೆ ಎಷ್ಟು ಸಹಾಯಧನ?

‘ಗಂಗಾ ಕಲ್ಯಾಣ ಯೋಜನೆ’ಯಡಿ. ವೈಯಕ್ತಿಕ ಕೂಳವೆ ಬಾವಿ ಯೋಜನೆಗಾಗಿ ಸರ್ಕಾರವು ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ತುಮಕೂರು ಜಿಲ್ಲೆಗಳಿಗೆ 4ಲಕ್ಷ ರೂಪಾಯಿಗಳನ್ನು ನೀಡುತ್ತದೆ. ಇತರೆ ಇನ್ನುಳಿದ ಜಿಲ್ಲೆಗಳಿಗೆ 3ಲಕ್ಷ ರೂಪಾಯಿಗಳನ್ನು ನಿಗದಿಪಡಿಸಿದೆ. ‘ವಾಸವಿ ಜಲಶಕ್ತಿ ಯೋಜನೆ’ಯಡಿ ಗರಿಷ್ಠ 2 ಲಕ್ಷ ರೂಪಾಯಿಗಳು ಸಾಲವನ್ನು ವಾರ್ಷಿಕ ಶೇ.4 ರ ಬಡ್ಡಿದರದಲ್ಲಿ ಓದಗಿಸಲಾಗುತ್ತದೆ ಹಾಗೂ ವಿದ್ಯುದೀಕರಣಕ್ಕಾಗಿ 50,000 ರೂಪಾಯಿಗಳ ಸಹಾಯಧನ ನೀಡಲಾಗುತ್ತದೆ. 6 ತಿಂಗಳ ಅವಧಿಯ ನಂತರ ಸಾಲವನ್ನು 34 ಮಾಸಿಕ ಕಂತುಗಳಲ್ಲಿ ಪಾವತಿಸಬೇಕು.

ಸೌಲಭ್ಯ ಪಡೆಯಲು ಬೇಕಾಗುವ ಅರ್ಹತೆಗಳೇನು?

ಅರ್ಜಿದಾರರು ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನಮೂನೆ-ಜಿ ಯಲ್ಲಿ ಪಡೆದಿರಬೇಕು, ಅರ್ಜಿದಾರರು ಕರ್ನಾಟಕ ರಾಜ್ಯದವರಾಗಿರಬೇಕು ಹಾಗೂ ಅವರ ಖಾಯಂ ವಿಳಾಸವು ಕರ್ನಾಟಕ ರಾಜ್ಯದಲ್ಲಿರಬೇಕು. ಅರ್ಜಿದಾರರು ಆಧಾರ್ ಸಂಖ್ಯೆಗೆ ಮೊಬೈಲ್ ನಂಬರ್ ಜೋಡಣೆಯಾಗಿರಬೇಕು. ಬ್ಯಾಂಕ್ ಖಾತೆಗೆ ಆಧಾರ್ ನಂಬರ್ ಅನ್ನು ಸೀಡ್ ಮಾಡಿಸಿರಬೇಕು. ಆಯ್ಕೆ ಮಾಡುವಾಗ ಮಹಿಳೆಯರಿಗೆ ಶೇ.33, ವಿಕಲಚೇತನರಿಗೆ ಶೇ.5 ಹಾಗೂ ತೃತೀಯ ಲಿಂಗಗಳಿಗೆ ಶೇ.5 ಮೀಸಲಾತಿ ಇರಿಸಿದೆ. ಒಂದು ಕುಟುಂಬದಲ್ಲಿ ಒಬ್ಬರು ಮಾತ್ರ ಸಾಲ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ.

fundamental rights; ಶತಮಾನಗಳಿಂದಲೂ ಇಲ್ಲ ಸಾರಿಗೆ ಸೌಲಭ್ಯ, ವಿದ್ಯಾಭ್ಯಾಸದಿಂದ ವಂಚಿತರಾಗುತ್ತಿದ್ದಾರೆ ಮಕ್ಕಳು..!

ಗಂಗಾ ಕಲ್ಯಾಣ ಯೋಜನೆ ಅರ್ಹತೆಗಳೇನು?

1. ಅರ್ಜಿದಾರರು ಪ್ರಮುಖವಾಗಿ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ, ಬೌದ್ಧ, ಸಿಖ್ಖ ಮತ್ತು ಪಾರ್ಸಿ ಜನಾಂಗಕ್ಕೆ ಸೇರಿದವರಾಗಿರಬೇಕು.

2. ಅರ್ಜಿದಾರರು ಸಣ್ಣ/ ಅತಿ ಸಣ್ಣ ರೈತರಾಗಿರಬೇಕು. ಗ್ರಾಮೀಣ ಪ್ರದೇಶಗಳಲ್ಲಿ ಅರ್ಜಿದಾರರ ಕುಟುಂಬಕ್ಕೆ ವಾರ್ಷಿಕ ಅದಾಯ 96,000 ರೂಪಾಯಿಗಳನ್ನು ಮೀರಬಾರದು.

3. ಪ್ರತಿ ಫಲಾನುಭವಿಗೆ 1ಎಕರೆ 20 ಗುಂಟೆ (1ಎಕರೆ 50 ಸೆಂಟ್ಸ್) ಎಕರೆಯಿಂದ 5ಎಕರೆ ವರೆಗೆ ಕೃಷಿ ಜಮೀನಿರಬೇಕು.

4. ಕೊಡಗು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಮತ್ತು ಹಾಸನ ಇಂತಹ ಜಿಲ್ಲೆಗಳಲ್ಲಿ ಜಮೀನಿನ ಲಭ್ಯತೆ ಬಹಳ ಕಡಿಮೆ ಇರುವುದರಿಂದ ಕನಿಷ್ಟ 1ಎಕರೆ ಜಮೀನನ್ನು ಹೊಂದಿರಬೇಕು.

SS Mallikarjun; ಸಾಮಾಜಿಕ ನ್ಯಾಯದ ಪರಿಕಲ್ಪನೆಯಲ್ಲಿ 5 ಗ್ಯಾರಂಟಿ ಪ್ರಾರಂಭ; ಸಚಿವ ಎಸ್.ಎಸ್.ಮಲ್ಲಿಕಾರ್ಜುನ್

ವಾಸವಿ ಜಲಶಕ್ತಿ ಯೋಜನೆಯ ಅರ್ಹತೆಗಳೇನು?

ಅರ್ಜಿದಾರರು ಪ್ರಮುಖವಾಗಿ ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮ ವ್ಯಪ್ತಿಗೆ ಒಳಪಡುವ ಸಾಮಾನ್ಯ ವರ್ಗದಲ್ಲಿ ಆರ್ಯ ವೈಶ್ಯ ಸಮುದಾಯಕ್ಕೆ ಸೇರಿದವರಾಗಿರಬೇಕು.

ವಾಸವಿ ಜಲಶಕ್ತಿ ಯೋಜನೆಯಡಿ 2 ರಿಂದ 5 ಎಕರೆ ಕೃಷಿ ಭೂಮಿ ಹೂಂದಿರುವವರಿಗೆ 6ಲಕ್ಷ ರೂಪಾಯಿಗಳ ಮಿತಿಯೊಳಗಿರಬೇಕು.ಅರ್ಜಿದಾರರು ಸಣ್ಣ/ಅತಿ ಸಣ್ಣ ರೈತರಾಗಿದ್ದು, 21 ವರ್ಷದಿಂದ 50ವರ್ಷದ ಒಳಗಿನವರಾಗಿರಬೇಕು.

ಅರ್ಜಿ ಸಲ್ಲಿಸುವ ದಿನಾಂಕ

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಡಿ ಗಂಗಾ ಕಲ್ಯಾಣ ಯೋಜನೆ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಕೆಗೆ ಸೆಪ್ಟೆಂಬರ್ 25 ಕೊನೆಯ ದಿನವಾಗಿದೆ. ಇನ್ನು ವಾಸವಿ ಜಲಶಕ್ತಿ ಯೋಜನೆ ಯಡಿ ನೀರಾವರಿ ಸೌಲಭ್ಯ ಪಡೆಯಲು ಇಚ್ಚಿಸುವ ರೈತರು ಸೆಪ್ಟೆಂಬರ್ 18ರೊಳಗೆ ಅರ್ಜಿ ಸಲ್ಲಿಸಬೇಕು.

street play ಜಾಗೃತಿ ನಾಟಕ ಕಲಾ ತಂಡಗಳಿಂದ ಅರ್ಜಿ ಆಹ್ವಾನ

ಅರ್ಜಿ ಎಲ್ಲಿ ಸಲ್ಲಿಸಬೇಕು?

ಅಲ್ಪಸಂಖ್ಯಾತ ಸಮುದಾಯದ ಸಣ್ಣ ರೈತರು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವೆಬ್ ಸೈಟ್ ಮೂಲಕ ಸಲ್ಲಿಸಬಹುದಾಗಿದೆ.

ವೆಬ್ ಸೈಟ್ ಲಿಂಕ್: https://kmdconline.karnataka.gov.in/portal/home. ಹೆಚ್ಚಿನ ಮಾಹಿತಿಗೆ ಸಹಾಯವಾಣಿ: 9448451111. ಜಿಲ್ಲಾ ಕಚೇರಿಗಳ ದೂರವಾಣಿ ಹಾಗೂ ಸಂಪರ್ಕ ಸಂಖ್ಯೆಗೆ ಇಲ್ಲಿ ಕ್ಲಿಕ್ ಮಾಡಿ. ಇನ್ನು ಆರ್ಯ ವೈಶ್ಯ ಸಮುದಾಯದ ಸಣ್ಣ ರೈತರು ಅರ್ಜಿಯನ್ನು ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮ ವೆಬ್ ಸೈಟ್ ಮೂಲಕ ಸಲ್ಲಿಸಬಹುದಾಗಿದೆ.

Leave a Reply

Your email address will not be published. Required fields are marked *

error: Content is protected !!