application; ರೈತರಿಗೆ ಸಹಾಯಧನ ಪಡೆಯಲು ಅರ್ಜಿ ಆಹ್ವಾನ
ದಾವಣಗೆರೆ, ಸೆ.7 : ಪ್ರಸಕ್ತ ಸಾಲಿನಲ್ಲಿ ತೋಟಗಾರಿಕೆ ಇಲಾಖೆಯಿಂದ ರಾಷ್ಟ್ರೀಯ ತೋಟಗಾರಿಕ ಮಿಷನ್, ಯೋಜನೆಯಡಿ RKVY, SMAM ಯಾಂತ್ರೀಕರಣ ಹಾಗೂ ಇತರ ಯೋಜನೆಗಳಡಿ ಅರ್ಹ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಾಗೂ ಇತರೆ ವರ್ಗದ ರೈತರಿಂದ ಅರ್ಜಿಯನ್ನು (application) ಆಹ್ವಾನಿಸಲಾಗಿದೆ.
Stray Dog; ಬಸಾಪುರದಲ್ಲಿ 201 ಬೀದಿ ನಾಯಿಗಳ ಹಾವಳಿ, ಅನಾಹುತಕ್ಕೂ ಮುನ್ನ ಎಚ್ಚೆತ್ತುಕೊಳ್ಳುವುದೇ ಪಾಲಿಕೆ?
ತೋಟಗಾರಿಕೆ ಬೆಳೆಯನ್ನು ಬೆಳೆಯುತ್ತಿರುವ ಎಲ್ಲಾ ವರ್ಗದ ರೈತರು, ಸಹಾಯಧನ ಪಡೆಯಲು ವಿವಿಧ ಯೋಜನೆಗಳಡಿ ಅರ್ಜಿ ಸಲ್ಲಿಸಬಹುದು ಅರ್ಜಿಯನ್ನು ಚನ್ನಗಿರಿಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಛೇರಿಯಿಂದ ಪಡೆದು ಅಗತ್ಯ ದಾಖಲೆಗಳೊಂದಿಗೆ ಕಚೇರಿಗೆ ಹಿಂದಿರುಗಿಸಬೇಕು. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 20 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಆಯಾ ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸಲು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ತಿಳಿಸಿದ್ದಾರೆ.