GMIT; ಜಿಎಂಐಟಿ ಕಾಲೇಜಿನ 22 ವಿದ್ಯಾರ್ಥಿಗಳು ಐಟಿಸಿ ಇನ್ಫೋಟೆಕ್ ಕಂಪನಿಗೆ ಆಯ್ಕೆ
ದಾವಣಗೆರೆ, ಅ.೧೦: ನಗರದ ಪ್ರತಿಷ್ಠಿತ ಜಿಎಂ ತಾಂತ್ರಿಕ ಮಹಾವಿದ್ಯಾಲಯದ (GMIT) ಅಂತಿಮ ವರ್ಷದ 22 ವಿದ್ಯಾರ್ಥಿಗಳು ಇತ್ತೀಚಿಗೆ ನಡೆದ ಸಂದರ್ಶನ ಪ್ರಕ್ರಿಯೆಯಲ್ಲಿ ಬೆಂಗಳೂರಿನ ಹೆಸರಾಂತ ಪ್ರತಿಷ್ಠಿತ ಐಟಿಸಿ ಇಂಫೋಟೆಕ್ ಕಂಪನಿಗೆ ಆಯ್ಕೆಯಾಗಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಡಾ ಸಂಜಯ್ ಪಾಂಡೆ ಎಂಬಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆರ್ಥಿಕ ಹಿಂಜರಿತದ ಸಮಯದಲ್ಲೂ ವಿದ್ಯಾರ್ಥಿಗಳ ಈ ಸಾಧನೆ ಹರ್ಷವನ್ನುಂಟು ಮಾಡಿದೆ ಎಂದು ಜಿಎಂಐಟಿ ಕಾಲೇಜಿನ ಆಡಳಿತಾಧಿಕಾರಿ ಶ್ರೀ ವೈಯೂ ಸುಭಾಷ್ ಚಂದ್ರ ತಮ್ಮ ಸಂತೋಷವನ್ನು ವ್ಯಕ್ತಪಡಿಸಿದ್ದಾರೆ.
ಐ ಟಿ ಸಿ ಇನ್ಫೋಟೆಕ್ ಕಂಪನಿಯು ವಿದ್ಯಾರ್ಥಿಗಳಿಗೆ ಅಸೋಸಿಯೇಟ್ ಐಟಿ ಕನ್ಸಲ್ಟೆಂಟ್ ಅಡಿಯಲ್ಲಿ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ ವರ್ಷಕ್ಕೆ 4.25 ಲಕ್ಷ ಗಳನ್ನು ನೀಡಲಿದೆ ಎಂದು ತರಬೇತಿ ಮತ್ತು ಉದ್ಯೋಗ ವಿಭಾಗದ ಮುಖ್ಯಸ್ಥರಾದ ಶ್ರೀ ತೇಜಸ್ವಿ ಕಟ್ಟಿಮನಿ ಟಿ ಆರ್ ತಿಳಿಸಿದ್ದಾರೆ.
application; ವಿವಿಧ ನಿಗಮಗಳಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
2024ರ ಸಾಲಿನ 25 ವಿದ್ಯಾರ್ಥಿಗಳು ಈಗಾಗಲೇ ಎಸ್ಎಲ್‌ಕೆ ಸಾಫ್ಟ್ವೇರ್ ಸರ್ವಿಸಸ್ ಕಂಪನಿಗೆ ಆಯ್ಕೆಯಾಗಿ ತರಬೇತಿಯನ್ನು ಪಡೆಯುತ್ತಿದ್ದಾರೆ. ಆರ್ಥಿಕ ಹಿಂಜರಿತದ ಸಮಯದಲ್ಲೂ ವಿದ್ಯಾರ್ಥಿಗಳಿಗೆ ಕಂಪನಿಗಳ ಅವಕಾಶಗಳನ್ನು ನೀಡುತ್ತಿದ್ದು,ಎಲ್ಲಾ ಅರ್ಹ ವಿದ್ಯಾರ್ಥಿಗಳಿಗೆ ಸಮನಾದ ಅವಕಾಶವನ್ನು ನೀಡಲಿದ್ದೇವೆ ಎಂದು ಇದೆ ವೇಳೆ ತಿಳಿಸಿದರು.
ಜಿಎಂಐಟಿ ವಿದ್ಯಾರ್ಥಿಗಳ ಸಾಧನೆ
ಕಂಪನಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಕಾಲೇಜಿನ ಚೇರ್ಮನ್ ಶ್ರೀ ಜಿಎಂ ಲಿಂಗರಾಜು, ಆಡಳಿತ ಅಧಿಕಾರಿ ಶ್ರೀ ವೈ ಯು ಸುಭಾಷ್ ಚಂದ್ರ, ಪ್ರಾಂಶುಪಾಲರಾದ ಡಾ ಸಂಜಯ್ ಪಾಂಡೆ ಎಂಬಿ, ಇನ್ಫಾರ್ಮಶನ್ ಸೈನ್ಸ್ ಅಂಡ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಡಾ ಸುನಿಲ್ ಕುಮಾರ್ ಬಿಎಸ್, ಕಂಪ್ಯೂಟರ್ ಸೈನ್ಸ್ ಅಂಡ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಡಾ ವೀರಪ್ಪ ಬಿಎನ್, ಎಐಎಂಎಲ್ ವಿಭಾಗದ ಮುಖ್ಯಸ್ಥರಾದ ಪ್ರೊ ಕೀರ್ತಿ ಪ್ರಸಾದ್, ತರಬೇತಿ ಮತ್ತು ಉದ್ಯೋಗ ವಿಭಾಗದ ಮುಖ್ಯಸ್ಥರಾದ ಶ್ರೀ ತೇಜಸ್ವಿ ಕಟ್ಟಿಮನಿ ಟಿ ಆರ್, ವಿವಿಧ ವಿಭಾಗಗಳ ಮುಖ್ಯಸ್ಥರುಗಳು ಮತ್ತು ಅಧ್ಯಾಪಕ ವರ್ಗದವರು ಅಭಿನಂದನೆಗಳನ್ನು ತಿಳಿಸಿದ್ದಾರೆ