professor; ಪ್ರಾಧ್ಯಾಪಕ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ
ನವದೆಹಲಿ: ಇಂದಿರಾಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯ, ನವದೆಹಲಿಯಲ್ಲಿ ಖಾಲಿ ಇರುವ ವಿವಿಧ ವಿಷಯಗಳ ಪೈಕಿ ಒಟ್ಟು 34 ಪ್ರಾಧ್ಯಾಪಕ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಆಫ್ ಲೈನ್ ಮೂಲಕ ಅರ್ಜಿ ಕರೆಯಲಾಗಿದೆ.
IGNOU ದಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ ಮತ್ತು ಅರ್ಜಿ ಸಲ್ಲಿಸುವ ವಿಧಾನ ಹೀಗೆ ಮುಂತಾದ ವಿವರಗಳನ್ನು ಈ ಕೆಳಗೆ ನೀಡಲಾಗಿದೆ.
ಹುದ್ದೆಗಳ ಹಂಚಿಕೆ ಮತ್ತು ವೇತನ ಶ್ರೇಣಿ
ಪ್ರಾಧ್ಯಾಪಕರು (Professor) 17 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು ಯುಜಿಸಿ ಯ ಪ್ರಕಾರ ವೇತನ ಶ್ರೇಣಿಯು 1,44,200 ರಿಂದ 2,18,200 ರೂ. ಗಳಿರುತ್ತದೆ. ಹಾಗೆಯೇ ಸಹ ಪ್ರಾಧ್ಯಾಪಕ ಹುದ್ದೆಗೆ (Associate Professor) 11 ಪೋಸ್ಟ್ ಗಳಿಗೆ ಅರ್ಜಿ ಆಹ್ವಾನಿಸಿದ್ದು ವೇತನ ಶ್ರೇಣಿಯು 1,31,400 ರಿಂದ 2,17,100 ರೂ. ಗಳಾಗಿರುತ್ತದೆ. ಇನ್ನೂ ಸಹಾಯಕ ಪ್ರಾಧ್ಯಾಪಕ (Assistant Professor) ಪೋಸ್ಟ್ ಗೆ 06 ಹುದ್ದೆಗಳನ್ನು ಕರೆಯಲಾಗಿದ್ದು 57,700 ರಿಂದ 1,82,400 ರೂ. ಗಳಾಗಿರುತ್ತದೆ. ಒಟ್ಟಾರೆಯಾಗಿ ಈ ಭಾರಿ 34 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಇಂದಿನಿಂದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಉಚಿತ ನೀರು ಮತ್ತು ವಿದ್ಯುತ್: ಸಿದ್ದರಾಮಯ್ಯ ಘೋಷಣೆ
ವಿದ್ಯಾರ್ಹತೆ:
ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸಂಬಂಧಿಸಿದ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮತ್ತು NET ಅಥವಾ Phd ಹಾಗೂ ನಿರ್ದಿಷ್ಟಪಡಿಸಿದ ವರ್ಷಗಳ ಸೇವೆಯನ್ನು ಸಲ್ಲಿಸಿದವರು ಈ ಉದ್ಯೋಗಾವಕಾಶಗಳನ್ನು ಪಡೆಯಬಹುದು.
ವಯೋಮಿತಿ: ಅಧಿಸೂಚನೆಯಲ್ಲಿ ನಿಗದಿಪಡಿಸಿದ ವಯೋಮಿತಿಯನ್ನು ಮೀರಿರಬಾರದು ಹಾಗೂ ಸರ್ಕಾರದ ನಿಯಮಾವಳಿಗಳನ್ವಯ ಪ.ಜಾ/ ಪ.ಪಂ ಅಭ್ಯರ್ಥಿಗಳಿಗೆ 05 ವರ್ಷ ಮತ್ತು ಓಬಿಸಿ ವರ್ಗದವರಿಗೆ 03 ವರ್ಷ ಸಡಿಲಿಕೆ ಸಿಗುತ್ತದೆ.
ಆಯ್ಕೆ ವಿಧಾನ: ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಸಂದರ್ಶನದಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸುವುದು ಹೇಗೆ?
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು http://www.ignou.ac.in/ ಲಿಂಕ್ ನಲ್ಲಿ ನಿಗದಿತ ಅರ್ಜಿ ನಮೂನೆಯನ್ನು ಡೌನ್ ಲೋಡ್ ಮಾಡಿಕೊಂಡು ನವೆಂಬರ್ 20, 2023 ರೊಳಗಾಗಿ Speed Post ಅಥವಾ Register Post ಮುಖಾಂತರ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ ಮತ್ತು ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಅರ್ಜಿ ನಮೂನೆ ಮತ್ತು ನೋಟಿಫಿಕೇಶನ್ ಗಳನ್ನು ಹಾಗೂ ಹೆಚ್ಚಿನ ಮಾಹಿತಿಗಾಗಿ ಈ ಮೇಲೆ ತಿಳಿಸಿರುವ ಲಿಂಕ್ ಮೂಲಕ ತಿಳಿದುಕೊಳ್ಳಿ.